ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 26 ಆಗಸ್ಟ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಇಷ್ಟಮಿತ್ರರ ಭೇಟಿ ಮನಸ್ಸಿಗೆ ಖುಷಿ ಕೊಡಲಿದೆ. ಆರ್ಥಿಕವಾಗಿ ಬರಬೇಕಾದ ಬಾಕಿ ಹಣ ಪಾವತಿಯಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.

ವೃಷಭ: ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಬೆನ್ನ ಹಿಂದೆ ಚೂರಿ ಹಾಕುವವರಿರುತ್ತಾರೆ. ಎಚ್ಚರಿಕೆಯ ಹೆಜ್ಜೆಯಿಡಬೇಕು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿಂದಿರಿ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.

ಮಿಥುನ: ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿರಲಿದ್ದು, ಅಂದುಕೊಂಡಿದ್ದನ್ನು ಸಾಧಿಸಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರು ಕಂಡುಬಂದೀತು.

ಕರ್ಕಟಕ: ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದ್ದು, ನಿಮ್ಮ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಸಿಂಹ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಧನಾಗಮನಕ್ಕೆ ಕೊರತೆಯಿರದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕನ್ಯಾ: ಪಾಲುದಾರಿಕೆ ವ್ಯವಹಾರದಲ್ಲಿ ಉನ್ನತಿಗೇರುವ ಅವಕಾಶಗಳಿವೆ. ನಿರುದ್ಯೋಗಿಗಳು ಉದ್ಯೊಗ ನಿಮಿತ್ತ ಪ್ರಯಾಣ ಮಾಡಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಮನೆಗೆ ಅತಿಥಿಗಳ ಆಗಮನ ಸಾಧ‍್ಯತೆಯಿದೆ.

ತುಲಾ: ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾಗುವ ಸಂತೋಷ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಸಾಂಸಾರಿಕ ಸುಖಕ್ಕೆ ಕೊರತೆಯಿರದು.

ವೃಶ್ಚಿಕ: ಅನಿರೀಕ್ಷಿತವಾಗಿ ಭೇಟಿಯಾಗುವ ವ್ಯಕ್ತಿಗಳಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಶ್ರಮವಹಿಸಬೇಕಾದ ಅನಿವಾರ್ಯತೆ ಎದುರಾಗವುದು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಧನು: ನೀವು ಅತಿಯಾಗಿ ನಂಬಿಕೊಂಡಿದ್ದವರಿಂದ ವಿಶ್ವಾಸ ವಂಚನೆಯಾದೀತು. ದೇಹಾರೋಗ್ಯದ ಬಗ್ಗೆ ನಿರ್ಲ್ಯಕ್ಷ ಸಲ್ಲದು. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಕ್ಕಾಗಿ ಹುಡುಕಾಟ ನಡೆಸಬೇಕಾದೀತು. ತಾಳ್ಮೆಯಿರಲಿ.

ಮಕರ: ಎಷ್ಟೋ ದಿನಗಳ ನಂತರ ಇಷ್ಟ ಮಿತ್ರರ ಸಮಾಗಮ ನಡೆಯಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿದ್ದೀತು. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಮನಸ್ಸಿನ ಮಾತಿಗೆ ಬೆಲೆಕೊಟ್ಟು ನಿರ್ಧಾರ ತೆಗೆದುಕೊಂಡರೆ ಉತ್ತಮ. ನೂತನ ದಂಪತಿಗಳಿಗೆ ಸುಮಧುರ ಕ್ಷಣ ಕಳೆಯುವ ಯೋಗವಿದೆ. ಕೃಷಿಕರಿಗೆ ಬೆಳೆಗೆ ತಕ್ಕ ಬೆಲೆ ಸಿಗಲಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments