Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 4 ಸೆಪ್ಟಂಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹಲವಾರು ಮಾನಸಿಕ ತೊಳಲಾಟದಿಂದ ನೆಮ್ಮದಿಯಲ್ಲದಂತಾಗುವುದು. ಆಪ್ತರೊಂದಿಗೆ ಮನಸ್ಸಿನ ಭಾವನೆ ಹಂಚಿಕೊಳ‍್ಳುವುದು ಸೂಕ್ತ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ.

ವೃಷಭ: ಭೂ ಸಂಬಂಧೀ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಪ್ರಗತಿ ಕಂಡುಬರಲಿದ್ದು, ಮನಸ್ಸಿಗೆ ಸಂತೋಷವಾಗಲಿದೆ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ಮಿಥುನ: ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆ, ಗೌರವ ಹೆಚ್ಚಾಗಲಿದೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಕರ್ಕಟಕ: ಇಷ್ಟವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಮಕ್ಕಳ ಬಹಳ ದಿನಗಳ ಬೇಡಿಕೆ ಪೂರ್ತಿ ಮಾಡಲಿದ್ದೀರಿ.

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದ್ದು, ಅವಕಾಶಗಳನ್ನು ಬಳಸಿಕೊಳ್ಳಿ. ಕೃಷಿಕರಿಗೆ ಬೆಳೆ ನಷ್ಟದ ಭೀತಿಯಿದೆ. ತಾಳ್ಮೆ, ಸಂಯಮದಿಂದ ನಡೆದುಕೊಳ್ಳಿ.

ಕನ್ಯಾ: ಬಹಳ ದಿನಗಳ ನಂತರ ಇಷ್ಟಮಿತ್ರರ ಭೇಟಿಯಾದ ಸಂತೋಷ ಸಿಗುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ.

ತುಲಾ: ಪಾಲುದಾರಿಕೆ ವ್ಯವಹಾರದಲ್ಲಿ ಭಿನ್ನಾಭಿಪ್ರಾಯಗಳು ತೋರಿಬಂದೀತು. ಮಾತಿನ ಮೇಲೆ ನಿಗಾ ಇರಲಿ. ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಪ್ರಯತ್ನಿಸಲಿದ್ದಾರೆ. ಕಿರು ಓಡಾಟ ನಡೆಲಿದ್ದೀರಿ.

ವೃಶ್ಚಿಕ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಸಂಗಾತಿಯ ಹಿತವಚನಗಳನ್ನು ಆಲಿಸಿದಲ್ಲಿ ಉತ್ತಮ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಂದ ಇತರರಿಗೂ ಬೇಸರವುಂಟು ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆಯುಂಟಾದೀತು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.

ಮಕರ: ಅನಗತ್ಯವಾಗಿ ನಿಮ್ಮ ವ್ಯವಹಾರದಲ್ಲಿ ಮೂಗು ತೂರಿಸುವವರಿಂದ ಸಮಸ್ಯೆಯಾದೀತು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಪ್ರೇಮಿಗಳಿಗೆ ಶೀಘ್ರದಲ್ಲೇ ಹಸೆಮಣೆಗೇರುವ ಭಾಗ್ಯ.

ಕುಂಭ: ಕೂಡಿಟ್ಟ ಹಣ ಆಪತ್ಕಾಲದಲ್ಲಿ ನೆರವಿಗೆ ಬರಲಿದೆ. ಸಕಾಲದಲ್ಲಿ ಮಿತ್ರರ ಸಹಾಯ ಒದಗಿಬರುವುದು. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗವಿದೆ. ಕೌಟುಂಬಿಕವಾಗಿ ಅನಗತ್ಯ ಚರ್ಚೆಗೆ ಅವಕಾಶ ಕೊಡದಿರಿ.

ಮೀನ: ಕಾರ್ಯಕ್ಷೇತ್ರದಲ್ಲಿ ಬೇರೆಯವರು ಹೇಳಿದ್ದನ್ನು ಒಪ್ಪಿಕೊಳ್ಳಲು ಕಷ್ಟವಾಗಬಹುದು. ಕೆಲವೊಂದು ಅನಿವಾರ್ಯ ಪರಿಸ್ಥಿತಿಗೆ ಒಗ್ಗಿಕೊಳ್ಳಬೇಕಾಗುತ್ತದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಸಂಭವ. ದೇವತಾ ಪ್ರಾರ್ಥನೆ ಮರೆಯದಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments