Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 8 ಸೆಪ್ಟಂಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗಲಿದೆ. ತಾಳ್ಮೆ ಮುಖ್ಯ.

ವೃಷಭ: ಕೌಟುಂಬಿಕವಾಗಿ ಇತರರೊಂದಿಗೆ ಸಿಡಿಮಿಡಿಗೊಳ್ಳುವುದರಿಂದ ಸಂಬಂಧಗಳು ಹಾಳಾದೀತು. ತಾಳ್ಮೆ, ಸಂಯಮ ಅಗತ್ಯ. ಹಣಕಾಸಿನ ಹರಿವಿಗೆ ತೊಂದರೆಯಿರದು. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ರಮ ಏರ್ಪಡಿಲು ಸಿದ್ಧತೆ ನಡೆಸುವಿರಿ.

ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ವಾಸ್ತವಿಕ ಸ್ಥಿತಿ ಗತಿ ಅರಿತು ಮುನ್ನಡೆಯಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ನಿಮ್ಮ ಇಷ್ಟಾರ್ಥಗಳನ್ನು ನೆರವೇರಿಸಲು ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ವ್ಯವಹಾರದಲ್ಲಿ ಹಿತ ಶತ್ರುಗಳ ಕಾಟ ಕಂಡುಬಂದೀತು, ಎಚ್ಚರಿಕೆಯಿರಲಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಸಿಂಹ: ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಪ್ರಯತ್ನಿಸುತ್ತಿರುತ್ತಾರೆ. ಹೆಚ್ಚಿನ ಹಣ ಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ಸಂಗಾತಿಯ ಮಾತುಗಳಿಗೆ ಕಿವಿಗೊಡುವುದು ಉತ್ತಮ.

ಕನ್ಯಾ: ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ನೀವೇ ತೊಂದರೆಗೆ ಸಿಲುಕಿಕೊಳ್ಳಬೇಡಿ. ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ. ದೂರ ಸಂಚಾರಕ್ಕೆ ಸದ್ಯದಲ್ಲೇ ಸಿದ್ಧರಾಗಿ. ಅನಗತ್ಯ ಚಿಂತೆ ಬೇಡ.

ತುಲಾ: ವ್ಯಾಪಾರೀ ವರ್ಗದವರಿಗೆ ನಿವ್ವಳ ಲಾಭ ಕೈಗೆಟುಕಲಿದೆ. ಹಣಕಾಸಿನ ಯೋಜನೆಗಳನ್ನು ಸರಿಯಾಗಿ ಯೋಚಿಸಿ ರೂಪಿಸಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ಎಚ್ಚರಿಕೆಯಿರಲಿ. ಕಿರು ಸಂಚಾರ ಮಾಡುವಿರಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳು ನಿಮ್ಮ ಕೆಲಸ ಗುರುತಿಸಲಿದ್ದಾರೆ. ಕೆಳ ಹಂತದ ನೌಕರರಿಗೆ ಬಡ್ತಿ ಯೋಗ ಕೂಡಿಬರುವುದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವಾಹನ ಖರೀದಿ ಯೋಗ ಕೂಡಿಬರಲಿದೆ.

ಧನು: ಅನಗತ್ಯವಾಗಿ ಬೇರೆಯವರ ವಿಚಾರಕ್ಕೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಬೇಕಾಗಬಹುದು. ಇಷ್ಟಾರ್ಥ ಸಿದ್ಧಿಗೆ ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ವ್ಯವಹಾರಗಳಲ್ಲಿ ಯಶಸ್ವಿಯಾಗಲಿದ್ದೀರಿ. ನೂತನ ಕಟ್ಟಡ ಕಾಮಗಾರಿ ಕೆಲಸಕ್ಕೆ ಕೈ ಹಾಕಲು ಇದು ಸಕಾಲ. ಮನೆಗೆ ನೆಂಟರಿಷ್ಟರ ಆಗಮನವಾಗಲಿದ್ದು, ಸಂತೋಷವಾಗಲಿದೆ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ.

ಮೀನ: ನೀವು ಬಯಸಿದ್ದೇ ಆಗುವ ಕಾಲವಿದು. ಕೌಟುಂಬಿಕವಾಗಿ ಸಾಮರಸ್ಯವರಿಲಿದ್ದು, ಸಂತೋಷವಿರಲಿದೆ. ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಅಗತ್ಯ ಯೋಜನೆ ಹಾಕಿಕೊಳ್ಳಬೇಕಾಗುತ್ತದೆ. ಹೊಸ ವಸ್ತುಗಳ ಖರೀದಿ ಮಾಡಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ