ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 9 ಸೆಪ್ಟಂಬರ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ವಿದ್ಯಾರ್ಥಿಗಳಿಗೆ ಬಯಸಿದ್ದು ಆಗುವ ಕಾಲವಿದು. ಉದ್ಯೋಗ ಬದಲಾವಣೆಗೆ ಅವಕಾಶಗಳು ಬರಲಿವೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇಷ್ಟಾರ್ಥ ಸಿದ್ಧಿಗೆ ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ವೃಷಭ: ಸಾಂಸಾರಿಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಕುಟುಂಬ ಸದಸ್ಯರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿವಹಿಸುವುದು ಮುಖ್ಯ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ವೈಯಕ್ತಿಕ ಸಮಸ್ಯೆಗಳಿಗೆ ಪ್ರೀತಿ ಪಾತ್ರರಿಂದ ಪರಿಹಾರ ಸಿಗುವುದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ.

ಕರ್ಕಟಕ: ಮನಸ್ಸಿನ ಆಸೆ ಪೂರೈಸಲು ಮುಂದಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚ ಕಂಡುಬಂದೀತಾದರೂ, ಆದಾಯಕ್ಕೆ ಕೊರತೆಯಿರದು. ಧಾರ್ಮಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಚಿಂತೆ ಬೇಡ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಚಿಂತೆ ಮಾಡದೇ ಕಾರ್ಯಪ್ರವೃತ್ತರಾಗಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಒದಗಿಬರಲಿವೆ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ತಾಳ್ಮೆಯಿರಲಿ.

ಕನ್ಯಾ: ಅಪರಿಚಿತ ವ್ಯಕ್ತಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಸಂಗಾತಿಯಿಂದ ಸಂತೋಷ ಸಿಗಲಿದೆ. ಕಿರು ಓಡಾಟ ನಡೆಸುವಿರಿ.

ತುಲಾ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಬಹಳ ದಿನಗಳ ನಂತರ ಪ್ರೀತಿ ಪಾತ್ರರನ್ನು ಭೇಟಿಯಾಗಲಿದ್ದು, ಇಷ್ಟಭೋಜನ ಮಾಡುವ ಯೋಗ ಕೂಡಿಬರಲಿದೆ. ಆದರೆ ಮಾತಿನ ಮೇಲೆ ನಿಗಾ ಇರಲಿ.

ವೃಶ್ಚಿಕ: ಕೆಲಸ ಕಾರ್ಯಗಳನ್ನು ಬದಿಗೊತ್ತಿ ಪತ್ನಿ-ಮಕ್ಕಳೊಂದಿಗೆ ಕಳೆಯುವ ಯೋಗ. ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಿರದು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ಅವಕಾಶ ಕೊಡಬೇಡಿ.

ಧನು: ಸಾಂಸಾರಿಕವಾಗಿ ಸಾಮರಸ್ಯ ಕಾಪಾಡಲು ನಿಮ್ಮ ಪಾತ್ರ ಮುಖ್ಯವಾಗಿರಲಿದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವುದು. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮಕರ: ಮಹಿಳೆಯರಿಗೆ ಇಷ್ಟವಸ್ತು ಖರೀದಿ ಯೋಗ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಕಾರ್ಯನಿಮಿತ್ತ ಸುದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ತಾಳ್ಮೆಯೇ ನಿಮ್ಮ ಅಸ್ತ್ರವಾಗಲಿದೆ.

ಮೀನ: ಭೂ, ಹಣಕಾಸಿನ ವ್ಯವಹಾಗಳಲ್ಲಿ ಮುನ್ನಡೆ ಕಂಡುಬರುವುದು. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ಬಂಧು ಮಿತ್ರರ ಆಗಮನ ಖುಷಿ ಮನೆಯಲ್ಲಿರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಮುಂದಿನ ಸುದ್ದಿ
Show comments