ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 11 ಸೆಪ್ಟಂಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳನ್ನು ಮೆಟ್ಟಿನಿಲ್ಲುವ ಧೈರ್ಯ ಮೈಗೂಡಿಸಲಿದ್ದೀರಿ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ತಾಳ್ಮೆಯಿರಲಿ.

ವೃಷಭ: ವೃತ್ತಿರಂಗದಲ್ಲಿ ನಿರೀಕ್ಷಿತ ಸ್ಥಾನ ಮಾನ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ವಾಹನ, ಭೂಮಿ ಖರೀದಿ ವ್ಯವಹಾರದಲ್ಲಿ ಲಾಭವಾಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿದೆ. ಚಿಂತೆ ಬೇಡ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಜವಾಬ್ಧಾರಿಗಳು ಹೆಚ್ಚಾಗಲಿದ್ದು, ನಿಭಾಯಿಸಲಿದ್ದೀರಿ. ಧನಾರ್ಜನೆಗೆ ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಸಂತೋಷದಾಯಕ ವಾತಾವರಣವಿರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಕಾರ್ಯರಂಗದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರಲಿದ್ದು, ಧನಾರ್ಜನೆಗೆ ಮಾರ್ಗಗಳು ಕಂಡುಬರಲಿದೆ. ಬಂಧು ಬಳಗದವರ ಚಾಡಿಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ.

ತುಲಾ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಮುಂದಾಗಲಿದ್ದೀರಿ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ.

ವೃಶ್ಚಿಕ: ಕಳೆದು ಹೋದ ಕ್ಷಣದ ಬಗ್ಗೆ ಪಶ್ಚಾತ್ತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆ ಪಡೆಯಿರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಧನು: ಸುದೀರ್ಘ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮ ಪ್ರೀತಿ ಪಾತ್ರರ ಸಾಧನೆ ನೋಡಿ ಸಂತೋಷವಾಗಲಿದೆ. ಸಂಗಾತಿಯ ಕೆಲಸಗಳಿಗೆ ಸಾಥ‍್ ನೀಡಲಿದ್ದೀರಿ. ಕಿರು ಓಡಾಟ ನಡೆಸಲಿದ್ದೀರಿ.

ಮಕರ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ಹಿಂದೆ ಹೂಡಿಕೆ ಮಾಡಿದ್ದ ವ್ಯವಹಾರಗಳಿಂದ ಲಾಭ ಪಡೆಯಲಿದ್ದೀರಿ. ಕೆಳ ಹಂತದ ನೌಕರರಿಗೆ ಉನ್ನತ ಸ್ಥಾನಕ್ಕೇರುವ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಪಾಲುದಾರಿಕೆ ವ್ಯವಹಾರಗಳಲ್ಲಿ ಲಾಭ ಕಂಡಿಬರಲಿದೆ. ಸರಕಾರಿ ಉದ್ಯೋಗಿಗಳಿಗೆ ಕೊಂಚ ವಿರಾಮ ಪಡೆಯುವ ಸಮಯ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿಗೆ ಯೋಗ ಕೂಡಿಬರಲಿದೆ. ತಾಳ್ಮೆ, ಸಂಯಮವಿರಲಿ.

ಮೀನ: ಹಿರಿಯರಿಗೆ ದೇವತಾ ಕಾರ್ಯಗಳಿಂದ ನೆಮ್ಮದಿ ಕಂಡುಬರಲಿದೆ. ಧನಾರ್ಜನೆಗೆ ತೊಂದರೆಯಾಗದು. ಆದರೆ ಹಿತಶತ್ರುಗಳಿಂದ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ನೆಂಟರಿಷ್ಟರ ಭೇಟಿಯಾಗಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments