Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 15 ಸೆಪ್ಟಂಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೌಟುಂಬಿಕವಾಗಿ ವಿಚಾರವಾಗಿ ಕೆಲವೊಂದು ಭಿನ್ನಾಭಿಪ್ರಾಯಗಳು ಕಂಡುಬಂದೀತು. ತಾಳ್ಮೆ, ಸಂಯಮದಿಂದ ನಿಭಾಯಿಸಿ. ಹಳೆಯ ಬಾಕಿಗಳನ್ನು ತೀರಿಸಲಿದ್ದೀರಿ. ಕೊಡು-ಕೊಳ್ಳುವಿಕೆ ವ್ಯವಹಾರಗಳಲ್ಲಿ ಲಾಭವಾದೀತು.

ವೃಷಭ: ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಇಷ್ಟದೇವತೆಗಳ ಪ್ರಾರ್ಥನೆಯಿಂದ ದಿನದಾರಂಭ ಮಾಡಿದರೆ ಉತ್ತಮ.

ಮಿಥುನ: ಬಂಧು ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತವಾಗಿ ಸ್ಥಾನ ಪಲ್ಲಟವಾಗುವ ಸಾಧ್ಯತೆಯಿದೆ. ಹಿರಿಯರ ಸಲಹೆ ಸೂಚನೆ ಪಾಲಿಸುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ಆರ್ಥಿಕವಾಗಿ ಪ್ರಗತಿ ಕಂಡುಬರಲಿದ್ದು, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಸರಕಾರಿ ಕೆಲಸದಲ್ಲಿರುವವರಿಗೆ ಮುಂಬಡ್ತಿ ಯೋಗ. ಕೃಷಿಕರಿಗೆ ಬೆಳೆ ನಷ್ಟದ ಭೀತಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಸಿಂಹ: ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಕಂಡುಬರಲಿದೆ. ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ಭಿನ್ನಾಭಿಪ್ರಾಯವಾಗದಂತೆ ಎಚ್ಚರಿಕೆ ವಹಿಸಿ. ಸಂಗಾತಿಗೆ ಅಚ್ಚರಿಯ ಉಡುಗೊರೆ ಕೊಡಲಿದ್ದೀರಿ.

ಕನ್ಯಾ: ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಹೆಚ್ಚಿನ ಅಭಿವೃದ್ಧಿ ಕಂಡುಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯವಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು.

ತುಲಾ: ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳ ಕಾಟ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಉನ್ನತಿಯ ಯೋಗವಿದೆ.

ವೃಶ್ಚಿಕ: ನೂತನವಾಗಿ ಕಾರ್ಯಾರಂಭ ಮಾಡುವುದಕ್ಕೆ ಇದು ಸಕಾಲ. ಹೊಸ ಜನರ ಒಡನಾಟದಿಂದ ಕಾರ್ಯ ಸಾಧನೆಗೆ ಅನುಕೂಲವಾಗಲಿದೆ. ಆತ್ಮೀಯರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಧಾರ್ಮಿಕ ಕ್ಷೇತ್ರ ಸಂದರ್ಶನ ಯೋಗವಿದೆ.

ಧನು: ಹೊಸ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಇಂದು ಮಾತಿನಿಂದಲೇ ಎಲ್ಲರ ಗೆಲ್ಲಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿದೆ.

ಮಕರ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿ ಲಾಭ ಕಂಡುಬರಲಿದೆ. ಆಸ್ತಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರುವುದು. ಸನ್ಮಿತ್ರರ ಸಹವಾಸದಿಂದ ಒಳಿತಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕುಂಭ: ದೇಹಾರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಧನಾರ್ಜನೆಗೆ ಉತ್ತಮ ಅವಕಾಶಗಳು ಒದಗಿಬರಲಿದೆ. ನಯವಂಚಕರಿಂದ ದೂರವರಿದ್ದರೆ ಉತ್ತಮ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ದಂಪತಿಗಳಲ್ಲಿ ಪರಸ್ಪರ ಸಹಕಾರದಿಂದ ಸಮಸ್ಯೆಗಳು ದೂರವಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದ್ದು, ಸಂತೋಷದ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments