ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 28 ಸೆಪ್ಟಂಬರ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯ ವಾಸಿ ಕತ್ತೆ ಹಾಲು ಹಿಡಿ ಎಂಬ ಪರಿಸ್ಥಿತಿ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಯೋಜನೆ ಹಾಕಿಕೊಳ್ಳಲಿದ್ದೀರಿ.

ವೃಷಭ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಉಂಟಾದೀತು. ಪ್ರೀತಿ ಪಾತ್ರರ ಇಷ್ಟಾರ್ಥಗಳನ್ನು ಪೂರೈಸಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ವೃತ್ತಿರಂಗದಲ್ಲಿ ನೀವು ಬಹಳ ದಿನಗಳಿಂದ ಆಸೆಪಡುತ್ತಿದ್ದ ಸ್ಥಾನ ಮಾನ ನಿಮ್ಮದಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಸರಿಯಾದ ಯೋಜನೆ ಹಾಕಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ.

ಕರ್ಕಟಕ: ಪ್ರೀತಿ ಪಾತ್ರರ ಸಂತೋಷಕ್ಕಾಗಿ ಕೆಲವು ತ್ಯಾಗ ಮಾಡಬೇಕಾಗಿ ಬರಬಹುದು. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ ಕೂಡಿಬರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ ಕಾದಿದೆ.

ಸಿಂಹ: ಎಷ್ಟೋ ದಿನಗಳಿಂದ ಭೇಟಿ ಮಾಡಬೇಕೆಂದುಕೊಂಡಿದ್ದ ವ್ಯಕ್ತಿಗಳನ್ನು ಭೇಟಿಯಾಗಲು ಯೋಗ ಕೂಡಿಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಕಂಡುಬರಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಕನ್ಯಾ: ಸಾಂಸಾರಿಕವಾಗಿ ಸುಖ ಸಂತೋಷ ಸಮೃದ್ಧಿಯಾಗಲಿದೆ. ಮಕ್ಕಳ ಇಷ್ಟಾರ್ಥ ಪೂರೈಸಲಿದ್ದೀರಿ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗವಾಗಲಿದೆ.

ತುಲಾ: ಪಾಲುದಾರಿಕೆ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಸಹೋದ್ಯೋಗಿಗಳಿಂದ ನಿಮ್ಮ ಕೆಲಸಗಳಿಗೆ ಪ್ರೋತ್ಸಾಹ ಸಿಗಲಿದೆ. ಚಿಂತೆ ಬೇಡ.

ವೃಶ್ಚಿಕ: ಅತಿಯಾದ ಹಠಮಾರಿತನ ಧೋರಣೆಯಿಂದ ಇನ್ನೊಬ್ಬರ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ಮಹಿಳೆಯರಿಗೆ ಅಡುಗೆ ಮನೆಯಲ್ಲಿ ಅವಘಡದ ಭೀತಿ. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ.

ಧನು: ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಉದ್ಯಮದಲ್ಲಿ ತೊಡಗಿಸಿಕೊಂಡವರಿಗೆ ಅಭಿವೃದ್ಧಿ ಕಂಡುಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು.

ಮಕರ: ಕೌಟುಂಬಿಕವಾಗಿ ಕೆಲವೊಂದು ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಕುಂಭ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಸಾಂಸಾರಿಕ ಸುಖಕ್ಕೆ ಕೊರತೆಯಿರದು. ಸಂಬಂಧಗಳನ್ನು ಎಚ್ಚರಿಕೆಯಿಂದ ನಿಭಾಯಿಸಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮೀನ: ನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದ್ದು, ಅಭಿವೃದ್ಧಿ ಕಂಡುಬರಲಿದೆ. ಆದರೆ ಕೋಪದ ಕೈಗೆ ಬುದ್ಧಿ ಕೊಟ್ಟು ತೀರ್ಮಾನ ತೆಗೆದುಕೊಳ್ಳಲು ಹೋಗಬೇಡಿ. ನಿಮ್ಮ ಪರಿಶ್ರಮಕ್ಕೆ ಬಂಧುಮಿತ್ರರ ಸಹಕಾರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೀಪ ಹಚ್ಚುವಾಗ ಗೊತ್ತಿಲ್ಲದೆ ಈ ತಪ್ಪು ಮಾಡಬೇಡಿ, ಶ್ರೇಯಸ್ಸಲ್ಲ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments