ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 30 ಸೆಪ್ಟಂಬರ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಿರೀಕ್ಷಿತವಾಗಿ ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳ ಕಾಟ ದೂರವಾಗಲಿದೆ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ.

ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವೈಯಕ್ತಿಕ ಚಿಂತೆಗಳನ್ನು ಬದಿಗಿಟ್ಟು ಕಾರ್ಯ ಪ್ರವೃತ್ತರಾಗಬೇಕಾಗುತ್ತದೆ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತಕ್ಕ ಬೆಲೆ ಸಿಗದೇ ನಿರಾಸೆಯಾದೀತು.

ಮಿಥುನ: ನಿಮ್ಮ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಮನೆಗೆ ಬಂಧು ಮಿತ್ರರ ಆಗಮನ ಸಾಧ್ಯತೆ.

ಕರ್ಕಟಕ: ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಕಂಡುಬಂದೀತು. ಇಂದು ನಿಮ್ಮ ಮಾತಿನ ಮೇಲೆ ಹಿಡಿತ ಸಾಧಿಸಲೇಬೇಕು. ಕಳೆದು ಹೋದ ವಸ್ತುಗಳಿಗಾಗಿ ಹುಡುಕಾಟ ನಡೆಸಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ವೈಯಕ್ತಿಕ ಕೆಲಸಗಳಿಗಾಗಿ ದೂರ ಸಂಚಾರ ಮಾಡಬೇಕಾಗಬಹುದು. ಭೂಮಿ, ವಾಹನ ಖರೀದಿ ಕನಸು ಸದ್ಯದಲ್ಲೇ ನನಸಾಗಲಿದೆ. ಗುರುಹಿರಿಯರಿಂದ ನಿಮ್ಮ ಕೆಲಸಗಳಿಗೆ ಬೆಂಬಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಹೊಸ ಸಂಬಂಧಗಳು ನಿಮ್ಮ ಮನಸ್ಸಿಗೆ ಉಲ್ಲಾಸ ಕೊಡಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಬಗ್ಗೆ ಐಡಿಯಾಗಳು ಹೊಳೆಯಲಿವೆ. ಚಿಂತೆ ಬೇಡ.

ತುಲಾ: ನಿಮ್ಮ ಹಿಂದಿನ ತಪ್ಪುಗಳು ಪುನಾರವರ್ತೆಯಾಗದಂತೆ ಎಚ್ಚರಿಕೆ ವಹಿಸಿ. ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ.

ವೃಶ್ಚಿಕ: ಯೋಗ್ಯ ವಯಸ್ಕರಿಗೆ ವಿವಾಹ ಸಂಬಂಧ ಪ್ರಯತ್ನಗಳಲ್ಲಿ ಮುನ್ನಡೆ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ದೈಹಿಕವಾಗಿ ಶ್ರಮವಹಿಸುವ ಕೆಲಸಗಳನ್ನು ಮಾಡಲಿದ್ದೀರಿ. ನಿಮ್ಮ ಕೆಲಸಗಳ ಬಗ್ಗೆ ಸಂಗಾತಿಯಿಂದ ಅಸಮಾಧಾನ ವ್ಯಕ್ತವಾದೀತು. ತಾಳ್ಮೆ, ಸಂಯಮ ಅಗತ್ಯ. ಮಕ್ಕಳಿಂದ ಸಂತೋಷದ ವಾರ್ತೆ ಆಲಿಸಲಿದ್ದೀರಿ.

ಮಕರ: ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ನಿಭಾಯಿಸಿ. ಸಂಗಾತಿಯ ಅಭಿಪ್ರಾಯಗಳಿಗೆ ಬೆಲೆಕೊಡಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕುಂಭ: ಭೂ ಸಂಬಂಧೀ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮೀನ: ಉದ್ಯೋಗ ವ್ಯವಹಾರದಲ್ಲಿ ಹಿತಶತ್ರುಗಳ ಕಾಟ ಕಂಡುಬಂದೀತು. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರುವುದು. ಕಿರು ಸಂಚಾರ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments