Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 1 ಅಕ್ಟೋಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪದೇ ಪದೇ ಒಂದೇ ವಿಚಾರದ ಬಗ್ಗೆ ಯೋಚಿಸುತ್ತಾ ಮಾನಸಿಕವಾಗಿ ಕುಗ್ಗಿ ಹೋಗಬೇಡಿ. ಆಪ್ತರೊಂದಿಗೆ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾದೀತು. ತಾಳ್ಮೆಯಿರಲಿ.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಮುನ್ನಡೆ ಸಿಗಲಿದೆ. ವೃತ್ತಿರಂಗದಲ್ಲಿ ಪೈಪೋಟಿಗಳು ಎದುರಾದೀತು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಆರಂಭಿಸಲಿದ್ದಾರೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಇಂದು ನೀವು ಕೈಗೊಳ್ಳುವ ನಿರ್ಧಾರಗಳು ನಿಮ್ಮ ಭವಿಷ್ಯ ತೀರ್ಮಾನಿಸಲಿದೆ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಲಾಭ ಕಂಡುಬರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಕರ್ಕಟಕ: ಉದ್ಯೋಗ ಕ್ಷೇತ್ರಗಳಲ್ಲಿ ಸಮಸ್ಯೆಗಳು ಬಂದಾಗ ಸಹೋದ್ಯೋಗಿಗಳ ನೆರವು ಪಡೆಯುವಿರಿ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ನಷ್ಟ ಅನುಭವಿಸಬೇಕಾದೀತು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿರಲಿ.

ಸಿಂಹ: ಹೊಸದಾಗಿ ಉದ್ಯೋಗ ಆರಂಭಿಸಿದವರಿಗೆ ಸವಾಲುಗಳು ಎದುರಾದೀತು. ಹಳೆಯ ವಿಚಾರಗಳು ಮನಸ್ಸಿನಲ್ಲಿ ಕೊರೆಯಲಿದೆ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕನ್ಯಾ: ಮನಸ್ಸಿನ ಹಿತ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಚಿಂತೆ ಬೇಡ.

ತುಲಾ: ವ್ಯಾಪಾರಸ್ಥರಿಗೆ ಹಿತಶತ್ರುಗಳ ಕಾಟ ಕಂಡುಬರಲಿದೆ. ಸಂಗಾತಿಯ ಬಹುದಿನಗಳ ಆಸೆ ಪೂರೈಸಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ವೃಶ್ಚಿಕ: ಮನಸ್ಸಿನ ಭಾವನೆಗಳಿಗೆ ಬೆಲೆಕೊಟ್ಟು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಷ್ಟದಲ್ಲಿರುವ ಮಿತ್ರರ ಸಹಾಯಕ್ಕೆ ಧಾವಿಸಲಿದ್ದೀರಿ. ಅವಸರದ ನಿರ್ಧಾರ ಬೇಡ.

ಧನು: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ಆರಂಭಿಸಲಿದ್ದೀರಿ. ಹಿಂದೆ ಕೂಡಿಟ್ಟ ಹಣ ಆಪತ್ಕಾಲದಲ್ಲಿ ನೆರವಿಗೆ ಬರಲಿದೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಅಂದುಕೊಂಡ ಕಾರ್ಯ ಸಾಧಿಸಿದ ಸಂತೋಷ ನಿಮ್ಮದಾಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಮಹಿಳೆಯರಿಗೆ ಇಷ್ಟ ಭೋಜನ ಮಾಡುವ ಯೋಗ. ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ.

ಕುಂಭ: ಮಕ್ಕಳ ಸಾಧನೆ ಮನಸ್ಸಿಗೆ ಸಂತೋಷ, ಹೆಮ್ಮೆ ಕೊಡಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ಮೀನ: ಹೊಸ ಬಗೆಯ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾದೀತು. ಉದ್ಯೋಗಾರ್ಥಿಗಳಿಗೆ ಹೊಸ ಅವಕಾಶಗಳು ಒದಗಿಬರಲಿವೆ. ಕುಟುಂಬ ಸಮೇತರಾಗಿ ದೇವಾಲಯ ಸಂದರ್ಶನ ಮಾಡಲಿದ್ದೀರಿ. ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ