Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 6 ಅಕ್ಟೋಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹಿರಿಯರಿಂದ ನಿಮ್ಮ ಮನೋವೇದನೆಗೆ ಪರಿಹಾರ ಸಿಗಲಿದೆ. ನಿಮ್ಮ ಕೆಲಸಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ.

ವೃಷಭ: ಎಷ್ಟೋ ದಿನಗಳಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವ್ಯಾವಹಾರಿಕವಾಗಿ ಮುನ್ನಡೆಯ ದಿನಗಳಿವು.

ಮಿಥುನ: ಹೆಚ್ಚಿನ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಅಂದುಕೊಂಡ ಕೆಲಸಗಳು ನೆರವೇರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ. ಇನ್ನೊಬ್ಬರ ಬಳಿ ಸಹಾಯಕ್ಕೆ ಮೊರೆಯಿಡಲು ಸಂಕೋಚ ಅಡ್ಡಿಬರುವುದು. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಾಧ್ಯತೆ.

ಸಿಂಹ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಪ್ರೀತಿ ಪಾತ್ರರ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ ಭವಿಷ್ಯಕ್ಕೆ ಯೋಜನೆ ರೂಪಿಸಿ.

ಕನ್ಯಾ: ಎಷ್ಟೋ ದಿನಗಳ ನಂತರ ಆಪ್ತರನ್ನು ಭೇಟಿ ಮಾಡಿದ ಸಂತೋಷ ನಿಮ್ಮದಾಗಲಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ನೆಮ್ಮದಿ ಸಿಗುವುದು. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ ಕೂಡಿಬರುವುದು. ವ್ಯವಹಾರದಲ್ಲಿ ಕೊಂಚ ಕಠೋರವಾಗಿ ನಡೆದುಕೊಳ್ಳಬೇಕಾಗಬಹುದು. ಯಂತ್ರೋಪಕರಣ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ.

ವೃಶ್ಚಿಕ: ಕಾರ್ಯರಂಗದಲ್ಲಿ ಸಮಸ್ಯೆಗಳು ಬಂದಾಗ ನಿಮ್ಮ ಬುದ್ಧಿಮತ್ತೆ ಬಳಸಿ ಪರಿಹಾರ ಕಂಡುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ತಿಳಿದುಕೊಳ್ಳುವ ಅವಕಾಶ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ಆರೋಗ್ಯದಲ್ಲಿ ತೃಪ್ತಿದಾಯಕ ಸುಧಾರಣೆ ಕಂಡುಬರಲಿದೆ. ಗೃಹ, ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ನಿಮ್ಮದಾಗುವುದು. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಹಿತಶತ್ರುಗಳಿಂದ ದೂರವಿರಿ.

ಮಕರ: ನಿಮ್ಮದಲ್ಲದ ತಪ್ಪಿನ ಬಗ್ಗೆ ಪಶ್ಚಾತ್ತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹೆಚ್ಚಿನ ಧನಾರ್ಜನೆಗೆ ದಾರಿ ಕಂಡುಕೊಳ್ಳಲಿದ್ದೀರಿ. ಮಕ್ಕಳ ಶಿಕ್ಷಣದಲ್ಲಿ ಪ್ರಗತಿ ಮನಸ್ಸಿಗೆ ಸಂತೋಷ ಕೊಡಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕುಂಭ: ಮನೆಯ ಕೆಲವೊಂದು ವಿಚಾರಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯೊಂದಿಗೆ ಪರಾಮರ್ಶಿಸುವುದು ಉತ್ತಮ. ಮಕ್ಕಳ ಸಂತೋಷಕ್ಕಾಗಿ ತ್ಯಾಗ ಮಾಡಬೇಕಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಮೀನ: ಉದ್ಯೋಗ, ಸಂಪತ್ತು ತಾನಾಗಿಯೇ ನಿಮ್ಮ ಬಳಿಗೆ ಬರಲಿದೆ. ಆದರೆ ವೈಯಕ್ತಿಕ ಜೀವನದಲ್ಲಿ ಕೆಲವೊಂದು ಸಮಸ್ಯೆಗಳಾದೀತು. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿರಲಿದೆ ಎಂದು ವರದಿಗಳು ಹೇಳುತ್ತಿವೆ.

Subramanya mantra: ನಾಗದೋಷ, ವಿವಾಹಕ್ಕೆ ಸಮಸ್ಯೆಯಾಗಿದ್ದ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments