Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 10 ಅಕ್ಟೋಬರ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಪ್ರಸಂಗಗಳು ಬಂದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಮುಂದಾಗಲಿದ್ದೀರಿ. ಆರೋಗ್ಯದಲ್ಲಿ ಚೇತರಿಕೆಯಿರಲಿದೆ.

ವೃಷಭ: ಮನೆ, ವಾಹನ ರಿಪೇರಿ ಇತ್ಯಾದಿ ಕೆಲಸಗಳಿಗೆ ಖರ್ಚು ವೆಚ್ಚಗಳಾಗಲಿವೆ. ಬಹಳ ದಿನಗಳ ನಂತರ ಇಷ್ಟಮಿತ್ರರ ಭೇಟಿಯಾದ ಸಂತೋಷ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಅನಗತ್ಯ ಮಾತುಗಳು ಮನಸ್ಸು ಕೆಡಿಸೀತು. ತಾಳ್ಮೆ, ಸಂಯಮವಿರಲಿ. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಮನಸ್ಸಿಗೆ ಅನಿಸಿದಂತೆ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ.

ಸಿಂಹ: ಹಿರಿಯರ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರುವುದು. ಹಿಂದೆ ಕೂಡಿಟ್ಟ ಹಣ ಕಷ್ಟಕಾಲದಲ್ಲಿ ನೆರವಾಗಲಿದೆ. ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಆಲಿಸುವಿರಿ.

ಕನ್ಯಾ: ಇದ್ದಕ್ಕಿದ್ದಂತೆ ದೇಹಾರೋಗ್ಯದಲ್ಲಿ ಏರುಪೇರಾಗಿ ಆತಂಕಕ್ಕೆ ಕಾರಣವಾದೀತು. ನಿಮ್ಮ ಆತ್ಮಸ್ಥೈರ್ಯವೇ ನಿಮಗೆ ರಕ್ಷೆಯಾಗಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ತುಲಾ: ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಪಾಲುದಾರಿಕೆ  ವ್ಯವಹಾರದಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ಸಂಗಾತಿಗೆ ಅಚ್ಚರಿಯ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ.

ವೃಶ್ಚಿಕ: ಬಹಳ ದಿನಗಳಿಂದ ನೀವು ಬಯಸುತ್ತಿದ್ದ ವಸ್ತು ಇಂದು ತಾನಾಗಿಯೇ ಕೈ ಸೇರಲಿದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ಮಹಿಳೆಯರಿಗೆ ಮಂಗಳ ವಸ್ತ್ರ ಖರೀದಿ ಯೋಗವಿದೆ. ಅನಗತ್ಯ ಚಿಂತೆ ಬೇಡ.

ಧನು: ಬೇರೆಯವರು ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಬಯಸಿದ ವಸ್ತು ಕೈಸೇರುವ ಸಮಯವಿದು. ಸಂಗಾತಿಯೊಂದಿಗೆ ತಾಳ್ಮೆಯಿಂದ ಮಾತನಾಡಿ. ದಿನದಂತ್ಯಕ್ಕೆ ನೆಮ್ಮದಿ.

ಮಕರ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ನೀವು ಹಿಂದೆ ಮಾಡಿದ್ದ ಹೂಡಿಕೆ ಇಂದು ಫಲಕೊಡಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಿತ ಶತ್ರುಗಳ ಕಾಟವಿದ್ದೀತು, ಎಚ್ಚರಿಕೆ ಅಗತ್ಯ.

ಕುಂಭ: ಕಷ್ಟಗಳನ್ನು, ಸಮಸ್ಯೆಗಳನ್ನು ನಾಜೂಕಾಗಿ ನಿಭಾಯಿಸಬೇಕಾದ ಅಗತ್ಯವಿದೆ. ಸಂಗಾತಿಯ ಮಾತುಗಳು ಉಪಯೋಗಕ್ಕೆ ಬರಲಿವೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಚಿಂತೆ ಬೇಡ.

ಮೀನ: ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಅನ್ಯರ ವಿಚಾರದಲ್ಲಿ ಮೂಗು ತೂರಿಸುವ ಯತ್ನ ಮಾಡಬೇಡಿ. ವಾಹನಾದಿ ಸೌಕರ್ಯಗಳು ಶೀಘ್ರದಲ್ಲೇ ನನಸಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ