ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನದ ಯೋಗ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುಂದಿನ ಅಭ್ಯಾಸಕ್ಕೆ ಅವಕಾಶಗಳು ತೋರಿಬರಲಿವೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು.
ವೃಷಭ: ನಿಮ್ಮ ವೈಯಕ್ತಿಕ ವಿಚಾರದಲ್ಲಿ ಮೂರನೆಯವರಿಗೆ ಮೂಗು ತೂರಿಸಲು ಅವಕಾಶ ಕೊಡಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶ ಒದಗಿಬರಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.
ಮಿಥುನ: ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಹಿರಿಯರ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿವೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ.
ಕರ್ಕಟಕ: ಧಾರ್ಮಿಕ ಕಾರ್ಯಗಳಿಂದ ನಿಮ್ಮ ಮನಸ್ಸಿಗೆ ನೆಮ್ಮದಿ, ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಸುಂದರ ದಿನಗಳಾಗಿದ್ದು, ಬಂಧು ಮಿತ್ರರ ಆಗಮನ ಸಂತೋಷ ಹೆಚ್ಚಿಸಲಿದೆ. ದೇವತಾ ಪ್ರಾರ್ಥನೆ ಮಾಡಿ.
ಸಿಂಹ: ಹೊಸ ಅವಕಾಶಗಳು ಬಂದಾಗ ಅದನ್ನು ಸರಿಯಾದ ರೀತಿ ಬಳಸಕೊಳ್ಳಲು ಕಲಿಯಬೇಕು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕೌಟುಂಬಿಕವಾಗಿ ಸಾಮರಸ್ಯ ಕಂಡುಬರುವುದು. ಚಿಂತೆ ಬೇಡ.
ಕನ್ಯಾ: ವೃತ್ತಿರಂಗದಲ್ಲಿ ನಿಮ್ಮ ಕಾಲೆಳೆಯುವವರನ್ನು ಉಪೇಕ್ಷಿಸದೇ ಎಚ್ಚರಿಕೆಯಿಂದಿರುವುದು ಉತ್ತಮ. ಪುಣ್ಯ ಕ್ಷೇತ್ರಗಳ ಸಂದರ್ಶನದಿಂದ ಮನಸ್ಸಿಗೆ ಸಂತೋಷ ಸಿಗುವುದು. ಸ್ನೇಹಿತರ ಭೇಟಿ ಮನಸ್ಸಿಗೆ ಉಲ್ಲಾಸ ಕೊಡಲಿದೆ.
ತುಲಾ: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ವ್ಯಾಪಾರಿಗಳಿಗೆ ನಿವ್ವಳ ಲಾಭವಾಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷಿತ ಅಭವೃದ್ಧಿ ಕಂಡುಬರುವುದು. ಸಾಂಸಾರಿಕವಾಗಿ ಸಾಮರಸ್ಯ ಕಾಪಾಡಿ.
ವೃಶ್ಚಿಕ: ಭೂಮಿ, ವಾಹನಾದಿ ಖರೀದಿಗೆ ಕಾಲ ಕೂಡಿಬರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ.
ಧನು: ನಿಮ್ಮ ಮಾತಿನಿಂದಲೇ ಇಂದು ಇತರರ ಗಮನ ಸೆಳೆಯಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಮಕ್ಕಳಿಂದ ಸಂತೋಷ ಸಿಗುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.
ಮಕರ: ಬದುಕಿನಲ್ಲಿ ಕೆಲವೊಂದು ಅನಿರೀಕ್ಷಿತ ಘಟನೆಗಳು ನಡೆಯಲಿವೆ. ನಿಮ್ಮ ವೃತ್ತಿ ಜೀವನಕ್ಕೆ ಎದುರಾಗುವ ಅಡೆತಡೆಗಳನ್ನು ನಿವಾರಿಸಲಿದ್ದೀರಿ. ಸ್ವಯಂ ವೃತ್ತಿಯವರಿಗೆ ಲಾಭ ಕಂಡುಬರಲಿದೆ. ದೇವರ ಪ್ರಾರ್ಥನೆ ಮುಖ್ಯ.
ಕುಂಭ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಶುಭವಾಗಲಿದೆ. ವೈದ್ಯ ವೃತ್ತಿಯವರಿಗೆ ಕೊಂಚ ಆರಾಮದಾಯಕ ದಿನಗಳು. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವ ಅವಕಾಶ ಸಿಗಲಿದೆ.
ಮೀನ: ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಸಂದರ್ಭಗಳು ಎದುರಾದೀತು. ಎಲ್ಲವನ್ನೂ ಎದುರಿಸುವ ತಾಳ್ಮೆ, ಸ್ಥೈರ್ಯವಿರಲಿ. ಹಿರಿಯರು ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಪಡೆಯುವರು. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.