ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 18 ಅಕ್ಟೋಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೈಹಿಕವಾಗಿ ಆರೋಗ್ಯ ಸುಧಾರಿಸಲಿದ್ದು, ಮಾನಸಿಕವಾಗಿ ನೆಮ್ಮದಿಯಾಗಲಿದೆ. ಆದರೆ ಆರ್ಥಿಕವಾಗಿ ಹಣಕಾಸಿನ ಯೋಜನೆಗಳ ಬಗ್ಗೆ ಎಚ್ಚರವಾಗಿರಬೇಕು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ವೃಷಭ: ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗಲೂ ಕುಟುಂಬದವರೊಂದಿಗೆ ಪರಾಮರ್ಶಿಸಿ ಮುನ್ನಡೆಯಬೇಕಾಗುತ್ತದೆ. ದೈವಾನುಗ್ರಹದಿಂದ ವೃತ್ತಿರಂಗದಲ್ಲಿ ನೀವು ಬಯಸಿದ್ದು ಕೈಗೆ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ನಿರೀಕ್ಷೆಗೂ ಮೀರಿ ಯಶಸ್ಸು ನಿಮ್ಮದಾಗುವುದು. ಧನಲಾಭವಾಗಲಿದ್ದು, ಸರಿಯಾದ ರೀತಿಯಲ್ಲಿ ಯೋಜನೆಗಳನ್ನು ರೂಪಿಸಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಚಿಂತೆ ಬೇಡ.

ಕರ್ಕಟಕ: ಬೇರೆಯವರ ಸಮಸ್ಯೆಗಳಿಗೆ ಸ್ಪಂದಿಸಲು ಹೋಗುತ್ತೀರಿ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗುವ ಸಾಧ‍್ಯತೆಯಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿವೆ. ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ.

ಸಿಂಹ: ನಿಮ್ಮ ಕೆಲಸ ಕಾರ್ಯಗಳನ್ನು ಇತರರು ಮೆಚ್ಚಿಕೊಳ್ಳಲಿದ್ದಾರೆ. ಸಾಮಾಜಿಕವಾಗಿ ಕೀರ್ತಿ ಸಂಪಾದಿಸಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗಲಿದ್ದು, ಸಂತೋಷ ಸಿಗಲಿದೆ.

ಕನ್ಯಾ: ವೃತ್ತಿರಂಗದಲ್ಲಿ ಕೈಗೆಟುಕಿದ್ದು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಬರಬಹುದು. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮಕ್ಕಳಿಂದ ಸಂತೋಷ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು.

ತುಲಾ: ಕೆಲಸ ಕಾರ್ಯಗಳಲ್ಲಿ ಪರಸ್ಪರ ಸಹಕಾರವಿದ್ದರೆ ಎಲ್ಲವೂ ಸುಸ್ರೂತ್ರವಾಗಿ ನಡೆಯುವುದು. ಮಾತಿನ ಮೇಲೆ ನಿಗಾ ಇರಲಿ. ನೆರೆಹೊರೆಯವರು ನಿಮ್ಮ ಸಹಾಯಕ್ಕೆ ಧಾವಿಸಲಿದ್ದಾರೆ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಚುರುಕುತನದಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಧನ ಗಳಿಕೆಗೆ ಹಲವು ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ನಿಮ್ಮ ವ್ಯವಹಾರ  ಚತುರತೆಯಿಂದ ಯಶಸ್ಸು ಗಳಿಸಲಿದ್ದೀರಿ. ಮಕ್ಕಳ ಜೀವನದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ಸಂಗಾತಿಯ ಕಿವಿ ಮಾತಿಗೆ ಬೆಲೆ ಕೊಡಿ. ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮಕರ: ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆಯಿಂದ ಭಿನ್ನಾಭಿಪ್ರಾಯಗಳು ಬಂದೀತು. ತಾಳ್ಮೆ, ಸಂಯಮ ಅಗತ್ಯ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಸರಕಾರಿ ನೌಕರರಿಗೆ ಕಾರ್ಯದೊತ್ತಡವಿರಲಿದೆ.

ಕುಂಭ: ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದ್ದು, ನಿಮ್ಮ ಕೆಲಸ ಕಾರ್ಯಗಳು ಸರಾಗವಾಗಿ ನಡೆಯಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಮೀನ: ಮಾನಸಿಕವಾಗಿ ಋಣಾತ್ಮಕ ಯೋಚನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದ್ದು, ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಪ್ರಾಪ್ತಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments