ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬಂದರೂ ಮಾನಸಿಕವಾಗಿ ಒಂದು ರೀತಿಯ ನಿರುತ್ಸಾಹ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.
ವೃಷಭ: ಆರೋಗ್ಯ ವೃದ್ಧಿಯಾಗಲಿದ್ದು, ಮಾನಸಿಕವಾಗಿ ಹೊಸ ಉಲ್ಲಾಸ ಮೂಡಲಿದೆ. ಆತ್ಮೀಯರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಗುರುಹಿರಿಯರ ಮಾರ್ಗದರ್ಶನ ಪಾಲಿಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.
ಮಿಥುನ: ವಿದ್ಯಾರ್ಥಿಗಳಿಗೆ ಹೊಸ ವಿಷಯಗಳನ್ನು ಕಲಿಯುವ ಉತ್ಸಾಹ ಕಂಡುಬರಲಿದೆ. ಸರಕಾರಿ ನೌಕರರು ಪಾಲಿಗೆ ಬಂದಿದ್ದು ಪಂಚಾಮೃತ ಎಂದುಕೊಳ್ಳಬೇಕು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.
ಕರ್ಕಟಕ: ಹೊಸದಾಗಿ ಸೃಷ್ಟಿಯಾದ ಸಂಬಂಧ ನಿಮ್ಮಲ್ಲಿ ಹೊಸ ಚೈತನ್ಯ ಮೂಡಿಸಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಅಭಿವೃದ್ಧಿ ಕಂಡುಬಂದರೂ ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ.
ಸಿಂಹ: ನಿಮ್ಮ ಉತ್ತಮ ಯೋಚನೆಗಳಿಗೆ ತಕ್ಕ ಪ್ರತಿಫಲ ಸಿಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾದೀತು, ಕಾಳಜಿ ಅಗತ್ಯ. ಉದ್ಯೋಗ, ವ್ಯವಹಾರದಲ್ಲಿ ಹೊಸ ಬದಲಾವಣೆಗೆ ಸಿದ್ಧರಾಗಿ. ಆಪ್ತರೊಂದಿಗೆ ಭಿನ್ನಾಭಿಪ್ರಾಯ ಬೇಡ.
ಕನ್ಯಾ: ನಿಮ್ಮ ವೈಯಕ್ತಿಕ ಕೆಲಸಗಳಿಗೆ ಸ್ನೇಹಿತರ ಸಹಾಯ ಪಡೆಯಲಿದ್ದೀರಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಧಾರ್ಮಿಕವಾಗಿ ನಿಮ್ಮ ಬಹುದಿನಗಳ ಹರಕೆ ಪೂರ್ತಿಗೊಳಿಸಲಿದ್ದೀರಿ. ಚಿಂತೆ ಬೇಡ.
ತುಲಾ: ಹಿರಿಯರಿಗೆ ಕೌಟುಂಬಿಕವಾಗಿ ಒಂದು ರೀತಿಯ ಅನಾದರಣೆ ಅನುಭವಕ್ಕೆ ಬರಲಿದೆ. ಮಾನಸಿಕ ನೆಮ್ಮದಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ತಾಳ್ಮೆಯಿರಲಿ.
ವೃಶ್ಚಿಕ: ಹೊಸ ಯೋಜನೆಗಳಿಗೆ ಕೈಹಾಕಲು ಕೆಲವು ದಿನ ಕಾಯುವುದು ಒಳಿತು. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ. ಬಳಸಿಕೊಳ್ಳಿ.
ಧನು: ನಿಮ್ಮ ಆತ್ಮೀಯರ ಬಗ್ಗೆ ಬೇಡದ ಮಾತುಗಳು ಕೇಳಿಬಂದೀತು. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ.
ಮಕರ: ನೀವು ಹೇಳುವ ವಿಚಾರಗಳು ಇತರರಿಗೆ ಕಠೋರವೆನಿಸಿದರೂ ಸತ್ಯವಾಗಿರುತ್ತದೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ ಸಿಗುವುದು.
ಕುಂಭ: ಅನಿವಾರ್ಯ ಸಂದರ್ಭಗಳಿಂದಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.
ಮೀನ: ಬಹುದಿನಗಳ ನಂತರ ಇಷ್ಟಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಹಿನ್ನಡೆಯಾದರೂ ತಾಳ್ಮೆ ಕಳೆದುಕೊಳ್ಳಬೇಡಿ.