ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 24 ಅಕ್ಟೋಬರ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವ ಅನಿವಾರ್ಯತೆ ಎದುರಾಗಲಿದೆ. ಸಂಗಾತಿಯೊಂದಿಗೆ ಮನಸ್ತಾಪಗಳಾಗದಂತೆ ನೋಡಿಕೊಳ್ಳಿ. ಆದಾಯ ವೃದ್ಧಿಗೆ ದಾರಿ ಕಂಡುಕೊಳ್ಳಲಿದ್ದೀರಿ. ತಾಳ್ಮೆ ಅಗತ್ಯ.

ವೃಷಭ: ನಿಮ್ಮ ಕೆಲಸ ಕಾರ್ಯದ ಬಗ್ಗೆ ನಿಮಗೇ ಅತೃಪ್ತಿಯಾದೀತು. ಉದ್ಯೋಗ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಚಿಂತೆ ಬೇಡ.

ಮಿಥುನ: ಮಾನಸಿಕವಾಗಿ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳಿಗೆ ಆತ್ಮೀಯರಿಂದ ಪರಿಹಾರ ಸಿಗಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ವ್ಯಾವಹಾರಿಕವಾಗಿ ಮುನ್ನಡೆಯಿರುವುದು.

ಕರ್ಕಟಕ: ನಿಮ್ಮ ದೈನಂದಿನ ಕೆಲಸಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ಗುರುಹಿರಿಯರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಒದಗಿಬರಲಿದೆ.

ಸಿಂಹ: ಸಹೋದ್ಯೋಗಿಗಳ ಸಹಕಾರದಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವಿಶೇಷ ವ್ಯಕ್ತಿಗಳ ಭೇಟಿಯಾಗಲಿದ್ದೀರಿ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ಕನ್ಯಾ: ಮಾನಸಿಕವಾಗಿ ನಿಮ್ಮ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸಗಳನ್ನು ಮಾಡಲಿದ್ದೀರಿ. ಸಂಗಾತಿಯ ಮಾತುಗಳು ಮನಸ್ಸಿಗೆ ಹಿತವೆನಿಸೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಅನಿರೀಕ್ಷಿತವಾಗಿ ನಡೆಯುವ ಕೆಲವೊಂದು ಘಟನೆಗಳು ನಿಮ್ಮ ಜೀವನಕ್ಕೆ ಮಹತ್ತರ ಬದಲಾವಣೆ ತರಲಿದೆ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಲಾಭ ಕಂಡುಬರಲಿದೆ. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ.

ವೃಶ್ಚಿಕ: ಕೌಟುಂಬಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗಲಿದೆ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದಾರೆ. ಆರ್ಥಿಕವಾಗಿ ಖರ್ಚುವೆಚ್ಚಗಳಿದ್ದರೂ ಆದಾಯಕ್ಕೆ ಕೊರತೆಯಿರದು. ಚಿಂತೆ ಬೇಡ.

ಧನು: ನಿಮ್ಮ ಕೆಲವೊಂದು ಮಾತುಗಳು ಸಂಗಾತಿಯ ಅಸಮಾಧಾನಕ್ಕೆ ಕಾರಣವಾಗಬಹುದು. ಬೇರೆಯವರು ನಿಮ್ಮ ಜೀವನದಲ್ಲಿ ಮೂಗು ತೂರಿಸಲು ಅವಕಾಶ ಕೊಡಬೇಡಿ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾದೀತು.

ಮಕರ: ಹೊಸದಾಗಿ ಉದ್ಯೋಗಕ್ಕೆ ಸೇರ್ಪಡೆಯಾದವರಿಗೆ ಹೊಂದಾಣಿಕೆ ಕಷ್ಟವೆನಿಸಬಹುದು. ತಾಳ್ಮೆ, ಸಂಯಮ ಅಗತ್ಯ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಜೋಪಾನವಾಗಿರಿ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ.

ಕುಂಭ: ನಿಮ್ಮ ವಿಚಾರಗಳಿಗೆ ಸಂಗಾತಿಯ ಅಸಹಕಾರ ಅಸಹನೆ ಉಂಟು ಮಾಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಕಷ್ಟದ ಸಮಯದಲ್ಲಿ ಸಹೋದರ ವರ್ಗದವರಿಂದ ಸಹಾಯ ಒದಗಿಬರುವುದು.

ಮೀನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಿ ನೆಮ್ಮದಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

ಮುಂದಿನ ಸುದ್ದಿ
Show comments