Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 27 ಅಕ್ಟೋಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಎಷ್ಟೇ ಅಭಿವೃದ್ಧಿಯಾಗಬೇಕೆಂದು ಯೋಚಿಸಿದರೂ ಒಂದೊಂದೇ ಸಮಸ್ಯೆಗಳು ನಿಮ್ಮನ್ನು ಹೈರಾಣಾಗಿಸಲಿದೆ. ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಆರೋಗ್ಯ ಸಂಬಂಧಿತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ವೃಷಭ: ವಿಶೇಷ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ ನಿಮ್ಮದಾಗುವುದು. ಬಹುದಿನಗಳಿಂದ ಬಯಸಿದ್ದ ವಸ್ತು ನಿಮ್ಮ ಕೈ ಸೇರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ವ್ಯಾಪಾರಿಗಳು ವ್ಯವಹಾರದಲ್ಲಿ ಮುನ್ನಡೆ ಅನುಭವಿಸಲಿದ್ದೀರಿ.

ಮಿಥುನ: ಮಹಿಳೆಯರಿಗೆ ಇಂದು ಅನಗತ್ಯವಾಗಿ ಅಪವಾದಗಳನ್ನು ಎದುರಿಸುವ ಸಂದರ್ಭಗಳು ಎದುರಾದೀತು. ತಾಳ್ಮೆ, ಸಂಯಮ ಅಗತ್ಯ. ಹಿಂದೆ ಹೂಡಿದ್ದ ಬಂಡವಾಳಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕಿರು ಸಂಚಾರ ಮಾಡುವಿರಿ.

ಕರ್ಕಟಕ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ. ಕಾರ್ಯರಂಗದಲ್ಲಿ ಆಪ್ತರ ಸಹಾಯ ದೊರೆಯಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ವೃತ್ತಿ ಮಾತ್ಸರ್ಯದಿಂದ ನೀವು ಅಂದುಕೊಂಡ ಸ್ಥಾನ ಮಾನ ಸ್ವಲ್ಪದರಲ್ಲೇ ಕೈ ತಪ್ಪಿ ಹೋದೀತು. ಮನಸ್ಸಿನ ನೆಮ್ಮದಿಗಾಗಿ ದೇವಾಲಯ ಸಂದರ್ಶಿಸಲಿದ್ದೀರಿ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತಕ್ಕ ಬೆಲೆ ಸಿಗಲಿದೆ.

ಕನ್ಯಾ: ಅನಿರೀಕ್ಷಿತ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾದ ಸಂದರ್ಭ ಬರಲಿದೆ. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಪ್ರೀತಿ ಪಾತ್ರರ ಕಷ್ಟಗಳಿಗೆ ನೆರವಾಗಲಿದ್ದೀರಿ.

ತುಲಾ: ಹೊಸ ಬಗೆಯ ಯೋಜನೆಗಳನ್ನು ಜಾರಿಗೆ ತರಲು ಇದು ಸಕಾಲ. ಕಟ್ಟಡ ಕಾಮಗಾರಿ ಕೆಲಸಗಳಿಗೆ ವಿಘ‍್ನಗಳು ತೋರಿಬಂದರೂ ಅಂತಿಮವಾಗಿ ಕೆಲಸ ಮುಂದುವರಿಯಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ವೃಶ್ಚಿಕ: ಇಂದು ನೀವು ಅಂದುಕೊಂಡ ಕೆಲಸ ಸುಗಮವಾಗಿ ನೆರವೇರಲಿದ್ದು, ಮನಸ್ಸಿಗೆ ಸಂತೋಷವಾಗುವುದು. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ.

ಧನು: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸುವುದು ಉತ್ತಮ.

ಮಕರ: ನಿಮ್ಮ ಬಹುದಿನಗಳ ಕನಸು ನನಸು ಮಾಡಲು ಮುಂದಾಗಲಿದ್ದೀರಿ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಸಂಗಾತಿಯ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆಯಿದೆ.

ಕುಂಭ: ಕೌಟುಂಬಿಕವಾಗಿ ನಿಮ್ಮ ಸಮಸ್ಯೆಗಳನ್ನು ಸಂಗಾತಿಯೊಂದಿಗೆ ಪರಾಮರ್ಶಿಸಿ ಪರಿಹರಿಸಲಿದ್ದೀರಿ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ವಿನಾಕಾರಣ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ