ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 29 ಅಕ್ಟೋಬರ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ.

ವೃಷಭ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ತೊಂದರೆ ಎದುರಾದೀತು. ಹಳೆಯ ಸಂಬಂಧಗಳು ಮತ್ತೆ ಕೂಡಿಕೊಳ್ಳಲಿದೆ. ಚಿಂತೆ ಬೇಡ.

ಮಿಥುನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಆಪ್ತರಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಮನಸ್ಸು ಬಯಸಿದ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನೆಮ್ಮದಿ ಕಾಣಲಿದ್ದೀರಿ. ಉದ್ಯೋಗ ಬದಲಾವಣೆ ಪ್ರಯತ್ನಕ್ಕೆ ತಕ್ಕ ಮಟ್ಟಿಗಿನ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಸಿಂಹ: ವೃತ್ತಿರಂಗದಲ್ಲಿ ಹೆಚ್ಚಿನ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಹೊಸ ಹೊಣೆಗಾರಿಕೆಗಳಿಗೆ ಸಿದ್ಧರಾಗಿ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಿದ್ದು, ಸಂಗಾತಿಯ ಪ್ರೀತಿ ಸಿಗಲಿದೆ. ತಾಳ್ಮೆ, ಸಂಯಮವಿರಲಿ.

ಕನ್ಯಾ: ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಿ  ತೊಂದರೆಗೆ ಸಿಲುಕಿಕೊಳ್ಳದಿರಿ. ವ್ಯಾಪಾರಿಗಳಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು. ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಅನಗತ್ಯ ಚಿಂತೆ ಬೇಡ.

ತುಲಾ: ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಪ್ರಸಂಗಗಳು ಎದುರಾದೀತು. ಹೊಸ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಉಲ್ಲಾಸವಾಗಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ವಾಸ್ತವ ಸ್ಥಿತಿ ಅರಿತು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುವುದು. ಸಂಗಾತಿಯ ಮಾತುಗಳು ಹಿತವೆನಿಸಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಧನು: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ಸಂತೋಷ ಸಿಗುವುದು. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ.

ಮಕರ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಭೂಮಿ, ವಾಹನ ಖರೀದಿಯಲ್ಲಿ ಲಾಭವಾದೀತು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ಕುಂಭ: ಬಹುದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರುವುದು. ಮಕ್ಕಳ ಸಂತೋಷಕ್ಕಾಗಿ ಪ್ರಯಾಣ ಮಾಡಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಮೀನ: ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು. ಕೆಲಸ ಕಾರ್ಯಗಳಲ್ಲಿ ಸಫಲತೆ ಕಂಡುಬರಲಿದೆ. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments