ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 10 ನವೆಂಬರ್ 2021 (08:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸುದೀರ್ಘ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಹಾರಕ್ಕೆ ಗಮನ ಕೊಡಿ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ವೃಷಭ: ನಿಮ್ಮ ಗೌರವಕ್ಕೆ ಧಕ್ಕೆಯಾಗುವ ಪರಿಸ್ಥಿತಿಯಿಂದ ದೂರವಿರುವುದು ಉತ್ತಮ. ಧಾರ್ಮಿಕ ಚಟುವಟಿಕೆಗಳಿಗೆ ಖರ್ಚುವೆಚ್ಚಗಳಾದೀತು. ಹಿರಿಯರ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದರೂ ಚಿಂತೆ ಬೇಡ.

ಮಿಥುನ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಇಷ್ಟಮಿತ್ರರ ಭೇಟಿ ಯೋಗವಿದ್ದು, ಇಷ್ಟ ಭೋಜನ ಸವಿಯಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ.

ಕರ್ಕಟಕ: ಅಧ್ಯಯನ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಹೊಸ ವಿಚಾರಗಳನ್ನು ತಿಳಿಯುವ ಯೋಗ. ಗೃಹಿಣಿಯರಿಗೆ ಗೃಹಕೃತ್ಯಗಳ ಸಂದರ್ಭಗಳಲ್ಲಿ ತೊಂದರೆಗಳು ಎದುರಾದೀತು. ಧಾರ್ಮಿಕ ಶ್ರದ್ಧೆ ಹೆಚ್ಚಾಗಲಿದೆ.

ಸಿಂಹ: ಸಂದರ್ಭಕ್ಕೆ ತಕ್ಕಂತೆ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಮನಸ್ಸಿನ ಭಾರ ಕಡಿಮೆಯಾಗಲಿದೆ. ಸಂಗಾತಿಯ ಬಹುದಿನಗಳ ಆಸೆ ನೆರವೇರಿಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಕನ್ಯಾ: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಕ್ರಿಯಾತ್ಮಕ ಯೋಚನೆಗಳಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ. ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ. ವ್ಯವಹಾರದಲ್ಲಿ ಎಚ್ಚರಿಕೆಯಿರಲಿ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಮೇಲಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷಕ್ಕೆ ಕಾರಣ ಮಾಡಿಕೊಡದಿರಿ. ಆರ್ಥಿಕವಾಗಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಪ್ರೀತಿ ಪಾತ್ರರ ಹಿತವಚನಗಳು ಉಪಯೋಗಕ್ಕೆ ಬರಲಿವೆ.

ವೃಶ್ಚಿಕ: ಎಂದೋ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಡುತ್ತಾ ಕೂರುವದರಲ್ಲಿ ಅರ್ಥವಿಲ್ಲ. ನಿಮ್ಮಿಂದ ನಾಲ್ಕು ಜನರಿಗೆ ಉಪಯೋಗವಾಗುವ ಕೆಲಸ ಮಾಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಧನು: ವ್ಯಾವಹಾರಿಕವಾಗಿ ಕೆಲವು ಅಡೆತಡೆಗಳು ಬಂದರೂ ಅಂತಿಮ ಜಯ ನಿಮ್ಮದಾಗುವುದು. ಮಂಗಲ ವಸ್ತು ಖರೀದಿ ಯೋಗ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದ್ದು, ನಿರಾಳವಾಗಲಿದೆ.

ಮಕರ: ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗ ಸಿಗದೇ ನಿರಾಶೆಯಾದೀತು. ಸ್ವಯಂ ವೃತ್ತಿಯವರಿಗೆ ಆಶಾದಾಯಕ ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಚಿಂತೆ ಬೇಡ.

ಕುಂಭ: ನಿಮ್ಮ ಪ್ರೀತಿ ಪಾತ್ರರಿಂದ ಅಚ್ಚರಿಯ ಉಡುಗೊರೆಗಳನ್ನು ನಿರೀಕ್ಷಿಸಬಹುದು. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ನೆರೆಹೊರೆಯವರೊಂದಿಗೆ ವೈಮನಸ್ಯಗಳಾಗದಂತೆ ಎಚ್ಚರಿಕೆ ವಹಿಸಿ.

ಮೀನ: ಬಹುದಿನಗಳ ನಿಮ್ಮ ಕನಸು ನನಸು ಮಾಡಿಕೊಳ್ಳಲಿದ್ದೀರಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗವಿದೆ. ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ತೊಂದರೆಯಾಗದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

2026 ರಲ್ಲಿ ದ್ವಾದಶ ರಾಶಿಯವರಿಗೆ ಹಣಕಾಸಿನ ತೊಂದರೆ ಬರುತ್ತಾ, ಇಲ್ಲಿದೆ ವಿವರ

ಶುಕ್ರವಾರ ಓದಬೇಕಾದ ಲಕ್ಷ್ಮೀ ಮಂತ್ರ

ಮುಂದಿನ ಸುದ್ದಿ
Show comments