Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 27 ನವೆಂಬರ್ 2021 (08:33 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಸಿಗದೇ ನಿರಾಶೆಯಾದೀತು. ಆರ್ಥಿಕ ಯೋಜನೆಗಳ ಬಗ್ಗೆ ದಂಪತಿಗಳ ನಡುವೆ ವೈಮನಸ್ಯಗಳಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗದ ಯೋಗ. ತಾಳ್ಮೆ, ಸಂಯಮವಿರಲಿ.

ವೃಷಭ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಶೈಕ್ಷಣಿಕ ರಂಗದಲ್ಲಿ ಉನ್ನತ ಸ್ಥಾನ ಮಾನದ ಯೋಗ. ಕೃಷಿಕರಿಗೆ ಬೆಳೆ ನಷ್ಟದಿಂದ ಸಂಕಷ್ಟ ಎದುರಾಗವುದು.

ಮಿಥುನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಪೈಪೋಟಿ ಎದುರಾದೀತು. ಕಾರ್ಯಸಾಧನೆಗೆ ಕಠಿಣ ಪರಿಶ್ರಮ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ಮನಸ್ಸಿನ ಮಾತುಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲಿದ್ದೀರಿ. ದೈಹಿಕ, ಮಾನಸಿಕ ಆರೋಗ್ಯ ಸ್ಥಿತಿ ಸುಧಾರಣೆ ಕಂಡುಬರಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ಅನುಕೂಲಕರ ವಾತಾವರಣವಿರಲಿದೆ. ಹಣಕಾಸಿನ ವಿಚಾರದಲ್ಲಿ ಅಜಾಗರೂಕತೆಯಿಂದ ನಷ್ಟ ಅನುಭವಿಸಬೇಕಾದೀತು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಕನ್ಯಾ: ಮನಸ್ಸಿನಲ್ಲಿ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಉದ್ಯೋಗ ವ್ಯವಹಾರದಲ್ಲಿ ನಿಮ್ಮ ವಾಕ್ಚತರುತೆಯಿಂದ ಮೇಲುಗೈ ಸಾಧಿಸಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ನಷ್ಟ ಸಂಭವಿಸುವ ಭೀತಿ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ಕೌಟುಂಬಿಕವಾಗಿ ಬಂಧು ಮಿತ್ರರ ಭೇಟಯಿಂದ ಮನೆಯಲ್ಲಿ ಉಲ್ಲಾಸದಾಯಕ ವಾತಾವರಣವಿರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆಯಿರಲಿ.

ಧನು: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಲಿದೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಯೋಜನೆ ಹಾಕಿಕೊಳ್ಳುವುದು ಮುಖ್ಯ. ಅನಗತ್ಯ ಚಿಂತೆ ಬೇಡ.

ಮಕರ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ-ನಷ್ಟ ಸಮನಾಗಿರಲಿದೆ. ಮಹಿಳೆಯರು ಸಾಂಸಾರಿಕ ವಿಚಾರದಲ್ಲಿ ತಾಳ್ಮೆಯಿಂದ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಬೇರೆಯವರ ವಿಚಾರದಲ್ಲಿ ಅನಗತ್ಯ ಆಸಕ್ತಿಗಳಿಗೆ ಕಡಿವಾಣ ಹಾಕಿ.

ಕುಂಭ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಅತಿಯಾದ ವ್ಯಾಮೋಹ ಬೇಡ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ಉನ್ನತಾಧಿಕಾರದಲ್ಲಿರುವವರಿಗೆ ಹೊಸ ಜವಾಬ್ಧಾರಿಗಳು ಹೆಚ್ಚಾದೀತು.

ಮೀನ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ ಮಾನಗಳು ನಿಮ್ಮದಾಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ