Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 28 ನವೆಂಬರ್ 2021 (08:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಂಗಾತಿಯ ಕೆಲವೊಂದು ಸಲಹೆಗಳು ನಿಮಗೆ ಕಿರಿ ಕಿರಿಯೆನಿಸೀತು. ಅತಿಯಾಗಿ ಇನ್ನೊಬ್ಬ ವಿಚಾರದಲ್ಲಿ ಇಣುಕುವುದೂ ಒಳ್ಳೆಯದಲ್ಲ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ನಿಮ್ಮ ಮಾತಿನಿಂದಲೇ ಇತರರ ನಿಷ್ಠುರಕ್ಕೆ ಕಾರಣವಾಗುವ ಪ್ರಸಂಗಗಳು ಎದುರಾದೀತು. ಮಾನಸಿಕವಾಗಿ ಇಲ್ಲದ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಮಹಿಳೆಯರಿಗೆ ಪಾರಂಪರಿಕ ವಸ್ತುಗಳನ್ನು ಜೋಪಾನ ಮಾಡುವ ಹೊಣೆಯಿರಲಿದೆ.

ಮಿಥುನ: ಬಹಳ ದಿನಗಳ ನಂತರ ಇಷ್ಟಮಿತ್ರರನ್ನು ಕೂಡುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣವಿಲ್ಲದೇ ಹೋದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ಕೃಷಿಕರಿಗೆ ಭವಿಷ್ಯದ ಚಿಂತೆ ಕಾಡೀತು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಬೇರೆಯವರಿಗೆ ಒಳಿತು ಮಾಡಿದ ಫಲ ಇಂದು ನಿಮಗೆ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದೀತು. ಸಂಗಾತಿಯ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ಕಿರು ಓಡಾಟ ನಡೆಸಲಿದ್ದೀರಿ.

ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ. ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಹೊಸ ಸಂಬಂಧಗಳು ಕೂಡಿಕೊಳ್ಳಲಿವೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು.

ಕನ್ಯಾ: ಕ್ಷುಲ್ಲುಕ ವಿಚಾರಗಳಿಗೆ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳಲಿದ್ದೀರಿ. ನಿಮ್ಮ ವರ್ತನೆಗೆ ನಿಮಗೇ ಪಶ್ಚಾತ್ತಾಪವಾದೀತು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಆರೋಗ್ಯದ ಕಡೆಗೆ ಗಮನವಿರಲಿ.

ತುಲಾ: ಕಾರ್ಯನಿಮಿತ್ತ ಅಧಿಕ ಓಡಾಟದಿಂದ ದೇಹಾಯಾಸವಾದೀತು. ವೈಯಕ್ತಿಕ ಜೀವನದಲ್ಲಿ ಇನ್ನೊಬ್ಬರಿಗೆ ಮೂಗು ತೂರಿಸಲು ಅವಕಾಶ ಕೊಡಬೇಡಿ. ಕೌಟುಂಬಿಕವಾಗಿ ನೆಂಟರಿಷ್ಟರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಹೊಸದಾಗಿ ಮದುವೆಯಾದವರಿಗೆ ಹೊಂದಾಣಿಕೆ ಕೊರತೆ ಕಂಡುಬಂದೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ನೆರೆಹೊರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ.

ಧನು: ಕೊಡು ಕೊಳ್ಳುವ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ವ್ಯಾಪಾರೀ ವರ್ಗದವರಿಗೆ ಹಿತ ಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸಗಳಿಗೆ ತಾಳ್ಮೆ ಕಳೆದುಕೊಳ್ಳುವ ಸಂದರ್ಭ ಎದುರಾದೀತು.

ಮಕರ: ಸ್ವಯಂ ವೃತ್ತಿಯವರು ಆರ್ಥಿಕವಾಗಿ ಮುನ್ನಡೆ ಕಾಣಲಿದ್ದೀರಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ನಿಮ್ಮ ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ. ಇಷ್ಟ ಭೋಜನ ಮಾಡಲಿದ್ದೀರಿ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ.

ಮೀನ: ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಅಭಿಪ್ರಾಯಗಳಿಗೆ ಬೆಲೆಕೊಡಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ವಾಹನಾದಿ ಸೌಕರ್ಯಗಳು ಶೀಘ್ರದಲ್ಲೇ ನಿಮ್ಮದಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ