Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಬುಧವಾರ, 1 ಡಿಸೆಂಬರ್ 2021 (08:33 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉಸಿರುಗಟ್ಟಿಸುವ ವಾತಾವರಣದಿಂದ ಹೊರಬರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಭವಿಷ್ಯಕ್ಕೆ ಪೂರಕವಾಗ ಕೆಲವು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.

ವೃಷಭ: ಆಸ್ತಿ ಖರೀದಿ ವಿಚಾರದಲ್ಲಿ ನಿರೀಕ್ಷಿತ ಲಾಭವಾಗದು. ಆದರೆ ನಿಮ್ಮ ಪ್ರಯತ್ನಗಳಿಗೆ ಸಂಗಾತಿಯ ಸಹಕಾರ ಸಿಗುವುದು. ವಾಹನ ಸಂಚಾರದಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಾಧಿಕಾರ ಲಭ್ಯವಾಗಲಿದೆ. ವ್ಯಾವಹಾರಿಕ ಸಂಬಂಧಗಳ ಸುಧಾರಣೆಗೆ ಮುಂದಾಗಲಿದ್ದೀರಿ. ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ನಿಮಗೆ ಶ್ರೀರಕ್ಷೆಯಾಗಲಿದೆ.

ಕರ್ಕಟಕ: ಹೆಚ್ಚಿನ ಜನರ ಭೇಟಿ, ಸ್ನೇಹ ಸಂಪಾದನೆಯಿಂದ ಮುಂದೆ ನಿಮಗೆ ಒಳಿತಾಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತಿಗೇರುವ ಅವಕಾಶ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ತಾಳ್ಮೆಯಿರಲಿ.

ಸಿಂಹ: ದೇಹಾರೋಗ್ಯದಲ್ಲಿ ಪ್ರತಿಕೂಲ ಪರಿಸ್ಥಿತಿ ಕಂಡುಬರಲಿದೆ. ಸರಿಯಾಗಿ ವಿಚಾರ ವಿಮರ್ಶೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಉದ್ಯಮಿಗಳಿಗೆ ಆರ್ಥಿವಾಗಿ ಲಾಭವಾಗಲಿದೆ. ಅನಗತ್ಯ ಚಿಂತೆ ಬೇಡ.

ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ತಾಳ್ಮೆ ಕಳೆದುಕೊಳ್ಳುವ ಪರಿಸ್ಥಿತಿ ಬಂದೀತು. ಕೋಪದ ಕೈಗೆ ಬುದ್ಧಿ ಕೊಡಬೇಡಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆಯಿರಲಿದೆ.

ತುಲಾ: ಇನ್ನೊಬ್ಬರಿಗೆ ಸಹಾಯ ಮಾಡುವ ಮೊದಲು ಸರಿಯಾಗಿ ಯೋಚಿಸಿ ಮುನ್ನಡೆಯುವುದು ಉತ್ತಮ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ತಾಳ್ಮೆ ಅಗತ್ಯ.

ವೃಶ್ಚಿಕ: ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಇಷ್ಟಮಿತ್ರರೊಂದಿಗೆ ಸಮಯ ಕಳೆಯುವ ಯೋಗವಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ಕೊಡಲಿದ್ದೀರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವುದು ಉತ್ತಮ.

ಧನು: ಇನ್ನೊಬ್ಬರ ಅಭಿಪ್ರಾಯಗಳಿಗೆ ಕಟ್ಟುಬೀಳದಿರಿ. ಕೌಟುಂಬಿಕ ವಿಚಾರದಲ್ಲಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮಕರ: ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನ ಸಾಧ್ಯತೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಸರಕಾರಿ ನೌಕರರಿಗೆ ಅಪವಾದದ ಭೀತಿಯಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಕಿರು ಓಡಾಟ ನಡೆಸುವಿರಿ.

ಮೀನ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ