ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 7 ಡಿಸೆಂಬರ್ 2021 (08:33 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನ ನಿಮಿತ್ತ ಪ್ರವಾಸ ಮಾಡುವ ಯೋಗ. ಉದ್ಯೋಗ ವ್ಯವಹಾರದಲ್ಲಿ ಸಮಯಕ್ಕೆ ತಕ್ಕ ನಿರ್ಧಾರ ತೆಗೆದುಕೊಳ‍್ಳುವುದರಿಂದ ಲಾಭವಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಷಭ: ಸಮಯಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯಗಳಿಂದ ಪಾರಾಗಲಿದ್ದೀರಿ. ಆತ್ಮೀಯರೊಂದಿಗೆ ಕಾಲ ಕಳೆಯುವ ಯೋಗ ನಿಮ್ಮದಾಗಲಿದೆ. ಕಾರ್ಯನಿಮಿತ್ತ ಓಡಾಟ ನಡೆಸುವಿರಿ.

ಮಿಥುನ: ಆರ್ಥಿಕವಾಗಿ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಕೈ ತುಂಬಾ ಕೆಲಸವಿರಲಿದ್ದು, ದುಡಿಮೆಗೆ ತಕ್ಕ ಪ್ರತಿಫಲ ಸಿಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ಗಣ್ಯ ವ್ಯಕ್ತಿಗಳ ಸಂಪರ್ಕದಿಂದ ನಿಮ್ಮ ಕೆಲಸಗಳು ಸುಗಮವಾಗಿ ನೆರವೇರಲಿದೆ. ಸಾಮಾಜಿಕವಾಗಿ ಸ್ಥಾನಮಾನಾದಿಗಳು ವೃದ್ಧಿಯಾಗಲಿವೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಾಥ್ ಸಿಗಲಿದೆ. ನೂತನ ಮಿತ್ರರ ಸಮಾಗಮದಿಂದ ಸಂತೋಷ ಹೆಚ್ಚಲಿದೆ. ವ್ಯಾಪಾರಿಗಳಿಗೆ ಕೈ ಹಿಡಿದ ಕೆಲಸಗಳು ಫಲಪ್ರದವಾಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಕನ್ಯಾ: ಹಲವು ಗೊಂದಲದ ವಿಚಾರಗಳು ನಿಮ್ಮನ್ನು ಕಾಡಲಿದ್ದು, ನಿರ್ಧಾರ ತೆಗೆದುಕೊಳ್ಳಲು ಎಡವಲಿದ್ದೀರಿ. ಶೈಕ್ಷಣಿಕ ರಂಗದಲ್ಲಿರುವವರಿಗೆ ಕಠಿಣ ಪರೀಕ್ಷೆ ಎದುರಾಗಲಿದೆ. ಮಕ್ಕಳಿಂದ ಸಂತೋಷ ಪ್ರಾಪ್ತಿಯಾಗಲಿದೆ.

ತುಲಾ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಲಾಭ ಕಂಡುಬರಲಿದೆ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ ಕಂಡುಬರಲಿದೆ. ವರಮಾನ ಹೆಚ್ಚಿದಂತೆ ಹೊಸ ಯೋಜನೆಗಳ ಬಗ್ಗೆಯೂ ಯೋಚನೆ ಬರಲಿದೆ.

ವೃಶ್ಚಿಕ: ಮಕ್ಕಳು ನಿಮ್ಮ ನಿರೀಕ್ಷೆಗೆ ತಕ್ಕ ಸಾಧನೆ ಮಾಡಲಿದ್ದಾರೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮಹಿಳೆಯರಿಗೆ ಅಡುಗೆ ಮನೆಯಲ್ಲಿ ಸಣ್ಣ ಪುಟ್ಟ ಅನಾಹುತಗಳಾಗುವ ಸಂಭವ.

ಧನು: ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣ. ಸಂಗಾತಿಯೊಂದಿಗೆ ವೈಚಾರಿಕ ಭಿನ್ನಾಭಿಪ್ರಾಯಗಳಾದರೂ ಕುಟುಂಬದ ದೃಷ್ಟಿಯಿಂದ ಉತ್ತಮ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ದೇಹಬಾಧೆಯಾಗದಂತೆ ಎಚ್ಚರಿಕೆ ವಹಿಸಿ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಹೆಚ್ಚಿನ ಅಭಿವೃದ್ಧಿ ಕಂಡುಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಉತ್ತಮ. ತಾಳ್ಮೆಯಿರಲಿ.

ಕುಂಭ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗವಿದೆ. ಪ್ರೇಮಿಗಳಿಗೆ ಮನೆಯವರ ಸಮ್ಮತಿ ದೊರೆಯಲಿದೆ. ಇಷ್ಟಭೋಜನ ಮಾಡುವ ಯೋಗ ಕೂಡಿಬರುವುದು.

ಮೀನ: ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ನೆಂಟರಿಷ್ಟರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಮುಂದಿನ ಸುದ್ದಿ
Show comments