Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 8 ಡಿಸೆಂಬರ್ 2021 (08:33 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ನಿಮಿತ್ತ ಪರ ಸ್ಥಳಗಳಿಗೆ ಸಂಚಾರ ಮಾಡುವ ಅನಿವಾರ್ಯತೆ ಎದುರಾಗಲಿದೆ. ನೀವು ಮಾಡಿದ ಕೆಲಸಗಳು ಇತರರ ಮೆಚ್ಚುಗೆ ಪಾತ್ರವಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಿರದು. ಚಿಂತೆ ಬೇಡ.

ವೃಷಭ: ನಿಮ್ಮದಲ್ಲದ ವಿಚಾರಗಳ ಬಗ್ಗೆ ಅನಗತ್ಯವಾಗಿ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಸಂಬಂಧಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕಾಗುತ್ತದೆ. ಸಂಗಾತಿಯ ಸಹಕಾರ ಸಿಗುವುದು.

ಮಿಥುನ: ಭವಿಷ್ಯದ ನಿಟ್ಟಿನಲ್ಲಿ ದೊಡ್ಡ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತ ಸ್ಥಾನಕ್ಕೇರುವ ಯೋಗ ಕೂಡಿಬರಲಿದೆ.

ಕರ್ಕಟಕ: ನಿಮ್ಮಲ್ಲಿರುವ ಋಣಾತ್ಮಕ ಚಿಂತನೆಗಳಿಂದಾಗಿ ಮಾನಸಿಕವಾಗಿ ಗೊಂದಲಗಳು ಕಾಡಲಿವೆ. ಆಪ್ತರೊಂದಿಗೆ ದುಃಖ ಹಂಚಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ತಾಳ್ಮೆಯಿರಲಿ.

ಸಿಂಹ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಸರಿಯಾದ ಯೋಜನೆ ಹಾಕಿಕೊಂಡಲ್ಲಿ ಭವಿಷ್ಯಕ್ಕೆ ತೊಂದರೆಯಾಗದು. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ನಿಮ್ಮಲ್ಲಿರುವ ಗೊಂದಲಗಳಿಗೆ ಉತ್ತರ ಕಂಡುಕೊಳ್ಳಲಿದ್ದೀರಿ. ವಿಚಾರವಂತರ ಸಹವಾಸದಿಂದ ಹೊಸ ವಿಷಯಗಳನ್ನು ತಿಳಿದುಕೊಳ್ಳಲಿದ್ದೀರಿ. ಸ್ವಯಂ ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಎಚ್ಚರಿಕೆ ಅಗತ್ಯ.

ತುಲಾ: ಯಾವುದೇ ಕೆಲಸದ ಆರಂಭಕ್ಕೆ ಮೊದಲು ವಿಘ್ನಗಳು ಸಾಮಾನ್ಯ. ಆತ್ಮವಿಶ್ವಾಸದಿಂದ ಎದುರಿಸಲು ಕಲಿಯಬೇಕು. ಹಳೆಯ ಸಂಬಂಧಗಳು ಮರಳಿ ಕೂಡಿಕೊಳ್ಳಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ.

ವೃಶ್ಚಿಕ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಶುಭವಾಗಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಹೊಸ ವ್ಯವಹಾರಗಳಿಗೆ ಕೈ ಹಾಕಲಿದ್ದೀರಿ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾದೀತು.

ಧನು: ಹೊಸದಾದ ಜಾಗ, ಪರಿಸರಕ್ಕೆ ಹೊಂದಿಕೊಳ್ಳುವ ಅನಿವಾರ್ಯತೆ ಎದುರಾಗಲಿದೆ. ಕಾರ್ಯನಿಮಿತ್ತ ಕೆಲವು ಅಡೆತಡೆಗಳನ್ನು ಮೀರಿ ನಡೆಯಬೇಕಾಗುತ್ತದೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಂತೂ ಆಗದು.

ಮಕರ: ನಿಮ್ಮ ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾದೀತು. ಕೌಟುಂಬಿಕವಾಗಿ ಹೊಂದಾಣಿಕೆಯ ಮನೋಭಾವವಿದ್ದರೆ ನೆಮ್ಮದಿಯಿರಲಿದೆ.

ಕುಂಭ: ಅತಿಯಾದ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸುಗಳು ಸದ್ಯದಲ್ಲೇ ನನಸಾಗಲಿದೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಮೀನ: ನಿಮ್ಮ ಅನುಕೂಲಕ್ಕೆ ತಕ್ಕಂತೆ ಮನೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments