Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 12 ಡಿಸೆಂಬರ್ 2021 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವೈವಾಹಿಕ ಸಂಬಂಧಗಳನ್ನು ಸರಿಪಡಿಸಲು ಮುಂದಾಗಲಿದ್ದೀರಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ.

ವೃಷಭ: ಗುರು ಹಿರಿಯರ ಹಾರೈಕೆಯಿಂದ ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ಭೂಮಿ ಖರೀದಿ ವ್ಯವಹಾರದಲ್ಲಿ ಲಾಭವಾಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಿನದಂತ್ಯಕ್ಕೆ ನೆಮ್ಮದಿ ಸುದ್ದಿ.

ಮಿಥುನ: ನಿರೀಕ್ಷೆಗೂ ಮೀರಿ ಆದಾಯ ಗಳಿಕೆಯಾಗಲಿದ್ದು, ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ದಾಂಪತ್ಯ ಸುಖ, ಸಂತೋಷ ನಿಮ್ಮದಾಗುವುದು. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ. ತಾಳ್ಮೆ, ಸಂಯಮವಿರಲಿ.

ಕರ್ಕಟಕ: ಯಾವುದೇ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಆಪ್ತರೊಂದಿಗೆ ಸಮಾಲೋಚನೆ ನಡೆಸುವುದು ಉತ್ತಮ. ಗೃಹ ಸಂಬಂಧೀ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಕೆಲಸಗಳು ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ವ್ಯಾಪಾರಿಗಳಿಗೆ ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಸರಕಾರಿ ನೌಕರರಿಗೆ ವಿರಾಮದ ಖುಷಿ.

ಕನ್ಯಾ: ಸಂಗಾತಿಯ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಪ್ರೇಮ ಸಂಬಂಧಗಳಲ್ಲಿ ಸಫಲತೆ ಕಂಡುಬರಲಿದೆ. ಆಪ್ತರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ತುಲಾ: ಬಹುದಿನಗಳಿಂದ ಮಾಡಬೇಕೆಂದಿದ್ದ ಕೆಲಸ ಪೂರ್ತಿ ಮಾಡಲಿದ್ದೀರಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರಲಿದೆ. ಹಣಕಾಸಿನ ವ್ಯವಹಾರಗಳಲ್ಲಿ ಪಾರದರ್ಶಕತೆಯಿರಲಿ. ದೇವತಾ ಪ್ರಾರ್ಥನೆ ಮರೆಯದಿರಿ.

ವೃಶ್ಚಿಕ: ಆಸ್ತಿ ವ್ಯಾಜ್ಯಗಳಲ್ಲಿ ತೊಡಕುಗಳು ಕಂಡುಬರಲಿದೆ. ಆಪ್ತರೊಂದಿಗೆ ವೈಮನಸ್ಯವಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವವರಿಗೆ ಮುನ್ನಡೆ ಕಂಡುಬರಲಿದೆ. ಸತತ ಕೆಲಸ, ಕಾರ್ಯಗಳಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ.

ಮಕರ: ನಿಮ್ಮ ವಾಕ್ಚತುರತೆಯಿಂದ ಸಂಭಾವ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ನೆರೆಹೊರೆಯವರಿಂದ ಸಹಕಾರ ಸಿಗಲಿದೆ. ದೇವತಾ ಕಾರ್ಯಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ ಆಲಿಸುವಿರಿ.

ಕುಂಭ: ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವ ನಿಮ್ಮ ಕನಸು ನನಸಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ ಕಂಡುಬರಲಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ತಾಳ್ಮೆ, ಸಂಯಮವಿರಲಿ.

ಮೀನ: ವೃತ್ತಿರಂಗದಲ್ಲಿ ಸ್ಥಾನ ಪಲ್ಲಟವಾಗುವ ಸಾಧ‍್ಯತೆಯಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ ಕೂಡಿಬರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರುವುದು.

 

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ