Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 16 ಡಿಸೆಂಬರ್ 2021 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ನಿಮ್ಮ ವ್ಯವಹಾರದಲ್ಲಿ ಪಾರದರ್ಶಕತೆಯಿದ್ದರೆ ಯಾವುದಕ್ಕೂ ಹೆದರಬೇಕಾಗಿಲ್ಲ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಯೋಗವಿದೆ.

ವೃಷಭ: ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರಿಳಿತ ಆತಂಕಕ್ಕೆ ಕಾರಣವಾದೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಒಳಿತಾಗಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾದೀತು.

ಮಿಥುನ: ನಿಮ್ಮ ಸ್ವ ಸಾಮರ್ಥ್ಯದಿಂದ ಒಳ್ಳೆಯ ಫಲವನ್ನೇ ಕಾಣಲಿದ್ದೀರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಯೋಗ್ಯ  ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಕರ್ಕಟಕ: ನಿಮ್ಮ ಮೇಲೆ ದೇವರ ಕೃಪೆ ಉತ್ತಮವಾಗಿದ್ದು, ಇಂದು ಅಂದುಕೊಂಡ ಕೆಲಸಗಳು ಸರಾಗವಾಗಿ ನಡೆಯಲಿವೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಅನ್ಯರಿಗೆ ಸಹಾಯ ಮಾಡಲು ತೊಂದರೆ ಎದುರಾಗುವ ಸಂದರ್ಭ ಎದುರಾದೀತು. ಗುರುಹಿರಿಯರ ಪ್ರೋತ್ಸಾಹದಿಂದ ಹೊಸ ಕೆಲಸಗಳಲ್ಲಿ ಯಶಸ್ಸು ಕಂಡುಕೊಳ್ಳಲಿದ್ದೀರಿ. ಧಾರ್ಮಿಕ ಕಾರ್ಯಗಳಿಗೆ ಧನ ವಿನಿಯೋಗ ಮಾಡಲಿದ್ದೀರಿ.

ಕನ್ಯಾ: ಹಣಕಾಸಿನ ವಿಚಾರದಲ್ಲಿ ಹೊಸ ಸಾಹಸಕ್ಕೆ ಕೈ ಹಾಕಲಿದ್ದೀರಿ. ಹೆಚ್ಚಿನ ಜನಸಂಪರ್ಕದಿಂದ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿವೆ.

ತುಲಾ: ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು. ಬಹುದಿನಗಳಿಂದ ಅಂದುಕೊಂಡಿದ್ದ ಕೆಲಸಗಳು ಇಂದು ತಾನಾಗೇ ನೆರವೇರಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ನಿರಾಸಕ್ತಿಯಿದ್ದರೂ ಅದೃಷ್ಟ ಕೈ ಹಿಡಿಯಲಿದೆ.

ವೃಶ್ಚಿಕ: ನಿಮ್ಮ ಹಳೆಯ ಗುಟ್ಟುಗಳು ಬಹಿರಂಗವಾಗುವ ಸಾಧ್ಯತೆಯಿದೆ. ಸಂಗಾತಿಯೊಂದಿಗೆ ಮಾತಿನಲ್ಲಿ ತಾಳ್ಮೆಯಿರಲಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟದೇವರ ಪ್ರಾರ್ಥನೆಯಿಂದ ಒಳಿತಾಗಲಿದೆ.

ಧನು: ವೈದ್ಯಕೀಯ ರಂಗದಲ್ಲಿರುವವರಿಗೆ ಬಿಡುವಿಲ್ಲದ ದುಡಿತ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ವೈಯಕ್ತಿಕ ವಿಚಾರಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಉದ್ಯೋಗ ವ್ಯವಹಾರದಲ್ಲಿ ಜವಾಬ್ಧಾರಿಯುತ[U1]  ನಡೆ ಪ್ರದರ್ಶಿಸಬೇಕಾಗುತ್ತದೆ. ಬೇರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಅಜಾಗರೂಕತೆ ಬೇಡ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕುಂಭ: ಉದ್ಯೋಗ, ವ್ಯವಹಾರದಲ್ಲಿ ಗಣನೀಯ ಮುನ್ನಡೆ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ವಾಹನಾದಿ ಸೌಕರ್ಯಗಳು ಶೀಘ್ರದಲ್ಲೇ ನಿಮ್ಮದಾಗಲಿದೆ.

ಮೀನ: ಕೌಟುಂಬಿಕವಾಗಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ವಿವಾಹ ಕೂಡಿಬರಲಿದೆ. ಹಣಕಾಸಿನ ವಿಚಾರದಲ್ಲಿ ಏರಿಳಿತವಿದ್ದರೂ ನಷ್ಟವಾಗದು.

 [U1]

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ