Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 24 ಡಿಸೆಂಬರ್ 2021 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿರ್ಧಾರ ತೆಗೆದುಕೊಳ್ಳುವುದು ಅತ್ಯಂತ ಪ್ರಯಾಸದ ಕೆಲಸವೆನಿಸಲಿದೆ. ಕೌಟುಂಬಿಕವಾಗಿ ತೂಗಗತ್ತಿಯ ಮೇಲೆ ನಡೆಯುವ ಪರಿಸ್ಥಿತಿ ನಿಮ್ಮದು. ಅನ್ಯರ ವಿಚಾರಗಳಿಗೆ ಸಂಗಾತಿಯೊಂದಿಗೆ ಕಲಹವಾಗದಂತೆ ನೋಡಿಕೊಳ್ಳಿ.

ವೃಷಭ: ನಿಮ್ಮ ಕನಸು ಈಡೇರಿಕೆಗೆ ಸತತ ಪ್ರಯತ್ನ ಪಡಬೇಕಾಗುತ್ತದೆ. ಆರ್ಥಿಕವಾಗಿ ಒಳ್ಳೆಯ ಉದ್ದೇಶಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ಕಾರ್ಯನಿಮಿತ್ತ ಓಡಾಟ ನಡೆಸಲಿದ್ದೀರಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಹಣಕಾಸಿನ ಲೆಕ್ಕಾಚಾರಗಳು ಸರಿಯಾಗಿರಲಿ. ಸಂಗಾತಿಯ ಬಹುದಿನಗಳ ಆಸೆ ಪೂರೈಸಲಿದ್ದೀರಿ. ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಪ್ರಶಂಸೆ ಸಿಗಲಿದೆ. ಚಿಂತೆ ಬೇಡ.

ಕರ್ಕಟಕ: ಬೇರೆಯವರ ಬಗ್ಗೆ ಯೋಚಿಸುತ್ತಾ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳಬೇಡಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಸಿಂಹ: ಮನಸ್ಸಿನಲ್ಲಿ ಅಂದುಕೊಂಡಿದ್ದ ಕಾರ್ಯರೂಪಕ್ಕೆ ತರುವಾಗ ಅಡೆತಡೆಗಳು ಕಂಡುಬಂದೀತು. ನಿರಾಶೆಗೊಳಗಾಗದಿರಿ. ಸಕಾಲದಲ್ಲಿ ಹಣಕಾಸಿನ ನೆರವು ಸಿಗಲಿದೆ. ಪಾಲುದಾರಿಕೆ ವ್ಯವಹಾರ ಮಾಡುವವರಿಗೆ ಅನುಕೂಲವಾಗಲಿದೆ.

ಕನ್ಯಾ: ಕುಟುಂಬ ಸದಸ್ಯರ ಅನುಕೂಲಕ್ಕೆ ತಕ್ಕಂತೆ ನಿಮ್ಮ ಕೆಲವು ನಿರ್ಧಾರಗಳಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯ.

ತುಲಾ: ಅಂದುಕೊಂಡಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾದೀತು. ಆದರೆ ಯಾವುದೇ ಹಂತದಲ್ಲೂ ತಾಳ್ಮೆ ಕಳೆದುಕೊಳ್ಳಬೇಡಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಸನ್ಮಿತ್ರರ ಸಹಕಾರದಿಂದ ಕಷ್ಟಗಳು ಪರಿಹಾರವಾಗಲಿದೆ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ನಿಮ್ಮ ಅತಿಯಾದ ಮಾತು ಇತರರಿಗೆ ಕಿರಿ ಕಿರಿ ಎನಿಸಬಹುದು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನಿಮ್ಮ ಕೆಲಸಗಳು ಇತರರಿಗೆ ಸಂಶಯ ಉಂಟುಮಾಡುವಂತೆ ನಡೆದುಕೊಳ್ಳಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮಕರ: ಹೊಸ ವಸ್ತು, ಚಿನ್ನಾಭರಣ ಖರೀದಿ ಮಾಡುವ ಯೋಗವಿದೆ. ಆರ್ಥಿಕವಾಗಿ ಹಣಕಾಸಿಗೆ ಕೊರತೆಯಾಗದು. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದು ಮುಖ್ಯ. ಕೌಟುಂಬಿಕ ಜವಾಬ್ಧಾರಿ ಹೆಗಲಿಗೇರಲಿದೆ.

ಕುಂಭ: ಹಿಂದೆ ಮಾಡಿದ ತಪ್ಪುಗಳು ಪುನರಾವರ್ತೆಯಾಗದಂತೆ ಎಚ್ಚರಿಕೆ ವಹಿಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ಸಾಂಸಾರಿಕ ವಿಚಾರದಲ್ಲಿ ಸಮಾಧಾನದಿಂದ ವರ್ತಿಸಿದರೆ ಉತ್ತಮ.

ಮೀನ: ನಿಮ್ಮ ಏಳಿಗೆಯನ್ನು ಸಹಿಸದೇ ಹೊಟ್ಟೆ ಉರಿ ಪಟ್ಟುಕೊಳ್ಳುವವರಿರುತ್ತಾರೆ. ಸಾಮಾಜಿಕ ಕಾರ್ಯಗಳು ನಿಮಗೆ ತೃಪ್ತಿ ತಂದುಕೊಡಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ವೈವಾಹಿಕ ಸಂಬಂದಗಳು ಕೂಡಿಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ