ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 2 ಜನವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಇನ್ನೊಬ್ಬರೊಂದಿಗೆ ಹಣಕಾಸಿನ ವ್ಯವಹಾರ ಮಾಡುವಾಗ ಅತೀವ ಜಾಗರೂಕತೆ ಅಗತ್ಯ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾದರೂ ಹಿತಶತ್ರುಗಳ ಕಾಟ ಕಂಡುಬಂದೀತು. ಕುಲದೇವರ ಪ್ರಾರ್ಥನೆ ಮಾಡಿದರೆ ಒಳಿತು.

ವೃಷಭ: ದೇಹಾರೋಗ್ಯದಲ್ಲಿ ಕಂಡುಬರುವ ಏರುಪೇರುಗಳು ನಿಮ್ಮ ಚಿಂತೆಗೆ ಕಾರಣವಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ವಿಶೇಷ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಇಷ್ಟಮಿತ್ರರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸುವುದು. ವ್ಯಾಪಾರೀ ವರ್ಗದವರಿಗೆ ಮುನ್ನಡೆಯ ಯೋಗ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ.

ಕರ್ಕಟಕ: ನಿಮ್ಮ ಮನಸ್ಸು ಹತೋಟಿಗೆ ತರುವಲ್ಲಿ ನೀವೇ ಎಡವಿ ಬೀಳಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ಕಂಡುಬಂದೀತು. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳು ಎದುರಾದರೂ ಅಂತಿಮ ಜಯ ನಿಮ್ಮದಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಕೆಲಸ ಹಗುರವಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನ ಹೆಚ್ಚುವುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ನಿಮ್ಮ ವಿಚಾರಧಾರೆಗಳನ್ನು ಇತರರು ಆಲಿಸಲಿದ್ದಾರೆ. ಅನಿವಾರ್ಯ ಕಾರ್ಯ ನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬಂದೀತು. ಚಿಂತೆ ಬೇಡ.

ತುಲಾ: ನೂತನ ಗೃಹ ನಿರ್ಮಾಣ ಕಾರ್ಯಕ್ಕೆ ಕೈ ಹಾಕಲು ಮುಂದಾಗಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೆಲಸಗಳು ಸುಗಮವಾಗಲಿದೆ.

ವೃಶ್ಚಿಕ: ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಹಳೆಯ ಸಂಬಂಧಗಳು ಮರಳಿ ಕೂಡಿಕೊಳ್ಳಲಿವೆ. ಅನಿರೀಕ್ಷಿತವಾಗಿ ಧನಾಗಮನವಾಗಲಿದ್ದು, ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು.

ಧನು: ಅನೇಕ ರೀತಿಯ ಯೋಚನೆಗಳು ನಿಮ್ಮ ಮನಸ್ಸು ಹೈರಾಣಾಗಿಸಲಿದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಪ್ರಾಮಾಣಿಕತೆಗೆ ತಕ್ಕ ಫಲ ಸಿಗುವುದು.

ಮಕರ: ಹೊಸದಾಗಿ ಹುಟ್ಟಿಕೊಳ್ಳುವ ಯೋಚನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ವಾಹನ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾದೀತು. ಉದ್ಯೋಗ ಕ್ಷೇತ್ರದಲ್ಲಿ ಗೌರವ, ಮನ್ನಣೆ ಪ್ರಾಪ್ತಿಯಾಗಲಿದೆ.

ಕುಂಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಸ್ಥಾನ ಮಾನ ಪ್ರಾಪ್ತಿಯಾಗಲಿದೆ. ತಾಳ್ಮೆಯಿರಲಿ.

ಮೀನ: ವಿದ್ಯಾರ್ಥಿಗಳಿಗೆ, ಅಧ್ಯಯನ ಶೀಲರಿಗೆ ಮುನ್ನಡೆಯ ಯೋಗ. ಉದ್ಯಮಿಗಳಿಗೆ ವ್ಯವಹಾರ ಚತುರತೆಯಿಂದ ಮುನ್ನಡೆ ಕಂಡುಬರುವುದು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆ ಅಗತ್ಯ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

ಮುಂದಿನ ಸುದ್ದಿ
Show comments