ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 4 ಜನವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಭವಿಷ್ಯದ ಕುರಿತಾದ ಹಲವು ಯೋಚನೆಗಳನ್ನು ನಿಮ್ಮನ್ನು ಚಿಂತೆಗೀಡು ಮಾಡಲಿದೆ. ಸಾಂಸಾರಿಕವಾಗಿ ತೃಪ್ತಿಯಿರಲಿದೆ. ಆರ್ಥಿಕವಾಗಿ ಇನ್ನಷ್ಟು ಧನ ಗಳಿಕೆಗೆ ಮನಸ್ಸು ಮಾಡಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಹೊಂದಿಕೊಳ್ಳಲು ಕಷ್ಟವಾದೀತು. ಆಹಾರ ವ್ಯತ್ಯಾಸದಿಂದ ಉದರ ಸಂಬಂಧೀ ಆರೋಗ್ಯ ಸಮಸ್ಯೆಯುಂಟಾದೀತು. ದಾಂಪತ್ಯದಲ್ಲಿ ಸಾಮರಸ್ಯ ವೃದ್ಧಿಯಾಗಲಿದೆ.

ಮಿಥುನ: ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ಸರಕಾರಿ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸುವುದು ಸೂಕ್ತ.

ಕರ್ಕಟಕ: ನಿಮ್ಮ ದೂರ ಪ್ರಯಾಣದ ಯೋಜನೆಗಳು ದಿಡೀರ್ ಆಗಿ ತಲೆಕೆಳಗಾಗಲಿದೆ. ಆಪ್ತರೊಂದಿಗೆ ಕಾಲ ಕಳೆಯಲು ಮನಸ್ಸು ಹಾತೊರೆಯಲಿದೆ. ಹಿರಿಯರಿಂದ ಬಂದ ಬಳವಳಿ ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮದಾಗಲಿದೆ.

ಸಿಂಹ: ಉದ್ಯೋಗಾರ್ಥಿಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳಲಿದೆ. ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಬೇಕಾದ ಸಿದ್ಧತೆ ಮಾಡಲಿದ್ದಾರೆ. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಿ ಬಂದೀತು. ಎಚ್ಚರಿಕೆಯಿರಲಿ.

ಕನ್ಯಾ: ವೃತ್ತಿರಂಗದಲ್ಲಿ ನೀವು ಪ್ರಯತ್ನಿಸುತ್ತಿದ್ದ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಸಂಗಾತಿಯ ಪ್ರೀತ್ಯಾದರಗಳಿಗೆ ಕಾರಣವಾಗಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಾಗ ಅಡೆತಡೆಗಳು ಕಂಡಬಂದೀತು. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ತಾಳ್ಮೆ ಬೆಳೆಸಿಕೊಳ್ಳಬೇಕು. ದುಡುಕಿ ನಿರ್ಧಾರ ಕೈಗೊಳ್ಳಲು ಹೋಗಬೇಡಿ.

ವೃಶ್ಚಿಕ: ಹಿಂದಿನ ಸಾಲಗಳನ್ನು ತೀರಿಸುವ ಚಿಂತೆ ಕಾಡಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಸಾಂಸಾರಿಕವಾಗಿ ಸಂಬಂಧಗಳನ್ನು ಸರಿಯಾಗಿ ನಿಭಾಯಿಸಿಕೊಂಡು ಹೋಗುವ ಹೊಣೆಗಾರಿಕೆಯಿರಲಿದೆ.

ಧನು: ನಿಮ್ಮ ಅತಿಯಾದ ಕಾಳಜಿ ಇತರರಿಗೆ ಉಸಿರುಗಟ್ಟಿಸುವಂತೆನಿಸಬಹುದು. ಯಾವುದೇ ವಿಚಾರವಾದರೂ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ.  ಹಿರಿಯರಿಗೆ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಯೋಗ.

ಮಕರ: ಸರಕಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಸಾಂಸಾರಿಕವಾಗಿ ಮಧ್ಯಮ ಸುಖವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ.

ಕುಂಭ: ನಿಮ್ಮ ನಿರ್ಧಾರಗಳು ಅಚಲವಾಗಲಿದೆ. ಕೌಟುಂಬಿಕವಾಗಿ ಹೊಸ ಸದಸ್ಯರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಹೇರಳ ಅವಕಾಶಗಳು ಬರಲಿವೆ.

ಮೀನ: ನಿಮ್ಮ ಸುತ್ತಮುತ್ತಲಿರುವವರಿಂದಲೇ ವಂಚನೆಗೊಳಗಾಗುವ ಅಪಾಯವಿದೆ. ಸರಕಾರಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಉದ್ಯೋಗ ವ್ಯವಹಾರದಲ್ಲಿ ತಾಳ‍್ಮೆ ಅಗತ್ಯ. ನೆರೆಹೊರೆಯವರಿಂದ ಸಕಾಲದಲ್ಲಿ ನೆರವು ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments