ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 5 ಜನವರಿ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಾಯಕತ್ವ ವಹಿಸುವ ಅವಕಾಶಗಳು ನಿಮ್ಮದಾಗಲಿದೆ. ಮನೆಯಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾದೀತು. ನೆರೆಹೊರೆಯವರ ಚಾಡಿ ಮಾತುಗಳನ್ನು ಅಲಕ್ಷಿಸುವುದು ಒಳಿತು.

ವೃಷಭ: ದೇಹಾರೋಗ್ಯದಲ್ಲಿ ಬರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಅಲಕ್ಷಿಸದಿರಿ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿವೆ. ಯೋಗ್ಯ  ವಯಸ್ಕರು ಸೂಕ್ತ ಸಂಬಂಧಕ್ಕೆ ಕೆಲವು ದಿನ ಕಾಯುವುದು ಒಳಿತು. ತಾಳ್ಮೆಯಿರಲಿ.

ಮಿಥುನ: ನಿಮ್ಮ ಗುಣ ಸ್ವಭಾವಕ್ಕೆ ತಕ್ಕ ಗೆಳೆಯರು ಸಿಗಲಿದ್ದಾರೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ಸರಿಯಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ‍್ಳುವುದರಿಂದ ಸಂಭಾವ್ಯ ಅಪಾಯ ತಪ್ಪುವುದು.

ಕರ್ಕಟಕ: ನಿರುದ್ಯೋಗಿಗಳಿಗೆ ಇನ್ನೇನು ಕೈಗೆ ಬಂತು ಎನ್ನುವ ಹೊತ್ತಿಗೆ ಅವಕಾಶಗಳು ಕೈ ಜಾರಿ ನಿರಾಸೆಯಾದೀತು. ಸ್ವಯಂ ಉದ್ಯೋಗಿಗಳಿಗೆ ಮುನ್ನಡೆಯ ಯೋಗವಿದೆ. ಕಾರ್ಯನಿಮಿತ್ತ ಓಡಾಟ ನಡೆಸಲಿದ್ದೀರಿ.

ಸಿಂಹ: ಇಂದು ನೀವು ಮಾತಿನಲ್ಲಿ ಬೆಣ್ಣೆಯಿಂದ ಕೂದಲು ತೆಗೆದಂತೆ ನಾಜೂಕಾಗಿರಬೇಕು. ಕ್ರಿಯಾತ್ಮಕ ಕೆಲಸಗಳಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕನ್ಯಾ: ನಿಮಗೆ ಸಿಗಬೇಕಿದ್ದ ಅವಕಾಶ ಇನ್ನೊಬ್ಬರ ಪಾಲಾದ ಬೇಸರ ಕಾಡೀತು. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು. ಭವಿಷ್ಯದ ನಿಟ್ಟಿನಲ್ಲಿ ಆರ್ಥಿಕ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ.

ತುಲಾ: ಮಕ್ಕಳ ವಿಚಾರವಾಗಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಸಂಗಾತಿಯ ಅಭಿಪ್ರಾಯಗಳಿಗೆ ಬೆಲೆಕೊಡುವುದು ಮುಖ್ಯ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಖರ್ಚು ವೆಚ್ಚಗಳಾದೀತು.

ವೃಶ್ಚಿಕ: ನಿಮ್ಮ ವೈಯಕ್ತಿಕ ಜೀವನದಲ್ಲಿ ಮೂರನೆಯವರಿಗೆ ಮೂಗು ತೂರಿಸಲು ಅವಕಾಶ ಮಾಡಿಕೊಡಬೇಡಿ. ಹೊಸ ವಿಚಾರಗಳಿಗೆ ಮನಸ್ಸು ತೆರೆದಿರಲಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ.

ಧನು: ವೃತ್ತಿರಂಗದಲ್ಲಿ ಹೊಸ ಪ್ರಯೋಗಗಳಿಗೆ ಮುಂದಾಗಲಿದ್ದೀರಿ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾದೀತು. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಮಕರ: ಇಂದು ನೀವು ಇಡುವ ಪ್ರತಿ ಹೆಜ್ಜೆಯೂ ನಿಮ್ಮ ಭವಿಷ್ಯಕ್ಕೆ ಪೂರಕವಾಗಿರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಂದೀತು. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ನನಸಾಗುವುದು.

ಕುಂಭ: ಯಶಸ್ವಿಯಾಗಿ ಅಂದುಕೊಂಡ ಕೆಲಸ ಪೂರ್ತಿ ಮಾಡಿದ ತೃಪ್ತಿ ನಿಮ್ಮದಾಗಿರಲಿದೆ. ಸಂಗಾತಿಯ ಕಷ್ಟಗಳಿಗೆ ಸಾಂತ್ವನ ಹೇಳಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಾಸಸ್ಥಳ ಬದಲಾವಣೆಗೆ ಮನಸ್ಸು ಮಾಡಲಿದ್ದೀರಿ.

ಮೀನ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಅಧಿಕವೆನಿಸೀತು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ವೈಕುಂಠ ಏಕಾದಶಿ ದಿನವಾದ ಇಂದು ಮಹಾವಿಷ್ಣುವಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments