ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 7 ಜನವರಿ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ಮಾಡುವುದು ಉತ್ತಮ. ಮಕ್ಕಳ ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ಕೈಗೊಳ್ಳಲಿದ್ದೀರಿ. ಉದ್ಯೋಗ ಸಂಬಂಧವಾಗಿ ಕಿರು ಸಂಚಾರ ಮಾಡಬೇಕಾಗಬಹುದು.

ವೃಷಭ: ಮನಸ್ಸಿನ ಲಾಲಸೆಗಳನ್ನು ಪೂರ್ತಿ ಮಾಡಲು ಮುಂದಾಗಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಹಳೆಯ ಮಿತ್ರರನ್ನು ಭೇಟಿ ಮಾಡಲಿದ್ದೀರಿ. ಚಿಂತೆ ಬೇಡ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಬೆನ್ನ ಹಿಂದೆ ಪಿತೂರಿ ಮಾಡುವವರ ಸಂಚುಗಳು ಬಯಲಾಗಲಿವೆ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಲು ಮುಂದಾಗಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಕರ್ಕಟಕ: ಮನೆಯಲ್ಲಿ ಸಂತಸದ ವಾತಾವರಣವಿರಲಿದ್ದು, ನಿಮ್ಮ ಮನದಿಚ್ಛೆಗಳು ಪೂರ್ತಿಯಾಗಲಿವೆ. ಕೃಷಿಕರಿಗೆ ಬೆಳೆದ ಬೆಳೆ ಕಾಪಾಡುವ ಚಿಂತೆ ಕಾಡಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕುಲದೇವರ ಪ್ರಾರ್ಥನೆ ಮಾಡಿ.

ಸಿಂಹ: ಮನೆಯವರ ಹಿತದೃಷ್ಟಿಯಿಂದ ನಿಮ್ಮ ಕೆಲವೊಂದು ಆಸೆಗಳನ್ನು ಅದುಮಿಡುವ ಪರಿಸ್ಥಿತಿ ಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.

ಕನ್ಯಾ: ವಿದ್ಯಾರ್ಥಿಗಳಿಗೆ ಉತ್ತಮ ಧನಾರ್ಜನೆಯಾಗಲಿದ್ದು, ಬಯಸಿದ ಸ್ಥಾನಕ್ಕೆ ಹೋಗುವ ಯೋಗ. ವೃತ್ತಿರಂಗದಲ್ಲಿ ನಿಮ್ಮ ಕರ್ತವ್ಯ ನಿಷ್ಠೆ ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವರ್ತಿಸಿ.

ತುಲಾ: ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಇತರರಿಗೆ ಇಷ್ಟವಾಗದೇ ಹೋದೀತು. ಸಂಗಾತಿಯ ಮಾತಿಗೆ ಕಿವಿಗೊಡುವುದು ಉತ್ತಮ. ಹಿರಿಯರಿಗೆ ಧಾರ್ಮಿಕ ಕೆಲಸಗಳಿಂದ ನೆಮ್ಮದಿ ಸಿಗುವುದು. ತಾಳ್ಮೆಯಿರಲಿ.

ವೃಶ್ಚಿಕ: ಇಂದು ನೀವು ಕೈಗೊಳ್ಳುವ ನಿರ್ಧಾರಗಳು, ಕೆಲಸಗಳು ನಿಮ್ಮ ಭವಿಷ್ಯಕ್ಕೆ ಪೂರಕವಾಗಿರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆಬರುವುದು. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ.

ಧನು: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ತಮ್ಮ ಕಾರ್ಯಕ್ಷಮತೆಯಿಂದ ಇತರರನ್ನು ಮೆಚ್ಚಿಸುವ ಅವಕಾಶ ಎದುರಾಗಲಿದೆ. ವಿದ್ಯಾರ್ಥಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು.

ಮಕರ: ಸಾಹಸ ಪ್ರವೃತ್ತಿಯಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಅಪಘಾತದ ಭಯವಿರಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಉನ್ನತ ಸ್ಥಾನದ ಯೋಗ. ಮಕ್ಕಳ ವಿಚಾರದಲ್ಲಿ ಅಸಡ್ಡೆ ಬೇಡ. ಸಂಗಾತಿಯ ಕಷ್ಟಗಳಿಗೆ ಸಾಥ್ ಕೊಡಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ.

ಮೀನ: ನಿಮ್ಮ ವ್ಯವಹಾರಗಳಿಗೆ ಅಡ್ಡಿ ಆತಂಕಗಳು ಎದುರಾದೀತು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ತಾಳ್ಮೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಮುಂದಿನ ಸುದ್ದಿ
Show comments