Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 8 ಜನವರಿ 2022 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೆಲಸ ಕಾರ್ಯಗಳಲ್ಲಿ ಅಡ್ಡಿ ಆತಂಕಗಳು ಎದುರಾದರೂ ಪ್ರಗತಿ ಕಂಡುಬರಲಿದೆ. ಸಾಂಸಾರಿಕವಾಗಿ ಸಂಬಂಧಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕಾದ ಅಗತ್ಯವಿದೆ. ಮಾತಿನ ಮೇಲೆ ಹಿಡಿತವಿರಲಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಷಭ: ಧನಲಾಭಕ್ಕಾಗಿ ನೀವು ಕೈಗೊಳ್ಳುವ ಕೆಲಸಗಳಲ್ಲಿ ಹಿನ್ನಡೆಯಾದೀತು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಹೆಗಲು ಕೊಡಬೇಕಾಗುತ್ತದೆ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ಕೈಗೊಳ್ಳಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ನಿಮ್ಮ ಕೆಲವೊಂದು ನಿರ್ಧಾರಗಳು ಪ್ರೀತಿ ಪಾತ್ರರಿಗೆ ಇಷ್ಟವಾಗದೇ ಹೋಗಬಹುದು. ಆದರೆ ಕೈಗೊಂಡ ನಿರ್ಧಾರಗಳಲ್ಲಿ ಅಚಲರಾಗಿರುವಿರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿದೆ.

ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಯನ್ನು ಯಾರಿಂದಲೂ ತಡೆಯಲಾಗದು. ಸಾಮಾಜಿಕವಾಗಿ ಕೀರ್ತಿ ಸಂಪಾದಿಸುವ ಯೋಗ ನಿಮ್ಮದಾಗಲಿದೆ. ಹೊಸ ಜನರನ್ನು ಭೇಟಿಯಾಗುವುದರಿಂದ ಕಾರ್ಯಸಾಧನೆಗೆ ಅನುಕೂಲವಾಗಲಿದೆ.

ಕನ್ಯಾ: ಹಿಂದಿನ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿ. ವಸ್ತುಸ್ಥಿತಿ ಅರಿತು ನಡೆದುಕೊಳ್ಳುವುದು ಮುಖ್ಯ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಒಳಿತಾಗಲಿದೆ. ಹಿರಿಯರಿಂದ ಕೆಲವೊಂದು ಜವಾಬ್ಧಾರಿಗಳು ನಿಮ್ಮ ಹೆಗಲಿಗೇರಲಿವೆ. ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಹಿನ್ನಡೆಯಾದೀತು.

ವೃಶ್ಚಿಕ: ಮನೆಯವರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗಲಿದೆ. ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಯತ್ನಿಸಲಿದ್ದಾರೆ. ಮಾತಿನ ಮೇಲೆ ಹಿಡಿತವಿರಲಿ. ನೆಂಟರಿಷ್ಟರ ಭೇಟಿಯಾಗಲಿದ್ದೀರಿ.

ಧನು: ಅನ್ಯರ ಮೇಲೆ ಅತಿಯಾದ ಅವಲಂಬನೆಯೂ ಒಳ್ಳೆಯದಲ್ಲ. ನೆರೆಹೊರೆಯವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗುತ್ತದೆ. ನೀರು, ಬೆಂಕಿಯೊಂದಿಗೆ ಎಚ್ಚರಿಕೆಯಿಂದಿರಿ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಅನವಶ್ಯಕ ಸಂಚಾರಕ್ಕೆ ಆಸ್ಪದ ಕೊಡಬೇಡಿ. ಬಂಧು ಜನರೊಂದಿಗೆ ಸಂಬಂಧ ವೃದ್ಧಿಗೆ ಪ್ರಯತ್ನಿಸಲಿದ್ದೀರಿ. ವಿದ್ಯಾರ್ಥಿಗಳ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಲಿದ್ದೀರಿ.

ಕುಂಭ: ನಿಮ್ಮ ವಿಚಾರಧಾರೆಗಳಿಗೆ ಮಾನ್ಯತೆ ಸಿಗುವುದು. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಮೀನ: ಮನೆಯಲ್ಲಿ ಸಣ್ಣ ಪುಟ್ಟ ಸಂಘರ್ಷಗಳಿದ್ದೇ ಇರುತ್ತದೆ. ಮಾತಿನ ಮೇಲೆ ಸಂಯಮವಿರಲಿ. ಸಂಗಾತಿಯ ಬಹುದಿನಗಳ ಬೇಡಿಕೆ ಈಡೇರಿಸಲಿದ್ದೀರಿ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಪ್ರೇಮಿಗಳಿಗೆ ವಿರಹ ವೇದನೆಯಾದೀತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments