ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 12 ಜನವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅರ್ಥಹೀನವಾಗಿ ವಾಗ್ವಾದ ನಡೆಸುವುದಕ್ಕಿಂತ ಮೌನವಾಗಿರುವುದೇ ಲೇಸು ಎಂದು ಅರ್ಥಮಾಡಿಕೊಳ್ಳಲಿದ್ದೀರಿ. ನಿಮ್ಮ ಕೆಲಸಕ್ಕೆ ತಕ್ಕ ಬೆಲೆ ಸಿಕ್ಕೇ ಸಿಗುತ್ತದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಹೋದ್ಯೋಗಿಗಳೂ ಅಚ್ಚರಿಪಡುವಂತೆ ಸಾಧನೆ ಮಾಡಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಆದಾಯ ಹೆಚ್ಚಿಸುವ ಚಿಂತೆ ಕಾಡಲಿದೆ. ದೂರ ಪ್ರಯಾಣಗಳನ್ನು ರದ್ದುಗೊಳಿಸಲಿದ್ದೀರಿ.

ಮಿಥುನ: ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸುಗಳನ್ನು ನನಸು ಮಾಡಲು ಪ್ರಯತ್ನಿಸಲಿದ್ದೀರಿ. ದೇಹಾರೋಗ್ಯದಲ್ಲಿ ಕೆಲವೊಂದು ತೊಂದರೆಗಳಾದೀತು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ಕರ್ಕಟಕ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಒಳಿತಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಹೊಸದನ್ನು ಕಲಿಯುವ ಉತ್ಸಾಹ ಕಂಡುಬರಲಿದೆ.

ಸಿಂಹ: ಶಾರೀರಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಸಂಗಾತಿಯೊಂದಿಗೆ ಚರ್ಚಿಸಿ. ಮಕ್ಕಳ ಭವಿಷ್ಯದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ.

ಕನ್ಯಾ: ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ ಸಿಗಲಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ದೂರದ ಬಂಧು ಮಿತ್ರರ ಭೇಟಿ ಸಾಧ‍್ಯತೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿರುವುದು.

ತುಲಾ: ನಿಮ್ಮ ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳನ್ನು ಸಂದರ್ಶಿಸುವ ಯೋಗ ಕೂಡಿಬರಲಿದೆ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ.

ವೃಶ್ಚಿಕ: ಭೂಮಿ, ವಾಹನ ಖರೀದಿ ವಿಚಾರದಲ್ಲಿ ಲೆಕ್ಕಪತ್ರಗಳ ಬಗ್ಗೆ ನಿಗಾ ಅಗತ್ಯ. ಹಿತಶತ್ರುಗಳ ಕಾಟ ಕಂಡುಬಂದೀತು. ಮನಸ್ಸಿನಲ್ಲಿರುವ ಪ್ರೀತಿಯನ್ನು ಆಪ್ತರೊಂದಿಗೆ ಹೇಳಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮರೆಯದಿರಿ.

ಧನು: ಹೊಸ ವಿಚಾರಗಳನ್ನು ಕಲಿಯುವ ಉತ್ಸಾಹ ಕಂಡುಬರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದರೆ ಆರೋಗ್ಯ ಸಮಸ್ಯೆಯಾದೀತು. ದಿನದಂತ್ಯಕ್ಕೆ ಸಂತೋಷ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮಾತುಗಳಿಗೆ ಬೆಲೆಯಿಲ್ಲವೆನಿಸಿ ಬೇಸರವಾದೀತು. ಹಣಕಾಸಿನ ವಿಚಾರದಲ್ಲಿ ಸರಿಯಾದ ಲೆಕ್ಕಾಚಾರ ಹಾಕಿ ಮುನ್ನಡೆಯುವುದು ಅಗತ್ಯ. ಸ್ವಯಂ ಉದ್ಯೋಗಿಗಳಿಗೆ ಹಿನ್ನಡೆಯಾದೀತು.

ಕುಂಭ: ಬಹುದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವ್ಯವಹಾರದಲ್ಲಿ ಪಾರದರ್ಶಕತೆಯಿರಲಿ.

ಮೀನ: ಮನೆಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಲು ಖರ್ಚು ವೆಚ್ಚ ಮಾಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಶೈಕ್ಷಣಿಕ ರಂಗದಲ್ಲಿರುವವರಿಗೆ ಭವಿಷ್ಯದ ಚಿಂತೆ ಕಾಡಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ವೈಕುಂಠ ಏಕಾದಶಿ ದಿನವಾದ ಇಂದು ಮಹಾವಿಷ್ಣುವಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ವಿವಾಹ, ಸಂತಾನಕ್ಕೆ ಅಡ್ಡಿಯಾಗುತ್ತಿದ್ದರೆ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಮುಂದಿನ ಸುದ್ದಿ
Show comments