Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 14 ಜನವರಿ 2022 (08:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಣ್ಣ ಕೈಗಾರಿಕೋದ್ಯಮಿಗಳಿಗೆ ಇಂದು ಲಾಭ ಕಂಡುಬರಲಿದೆ. ಉದ್ಯೋಗ, ವ್ಯವಹಾರದಲ್ಲಿ ಅಭಿವೃದ್ಧಿಯಿದ್ದರೂ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದು, ನೆಮ್ಮದಿ ಕಂಡುಕೊಳ್ಳಲಿದ್ದೀರಿ.

ವೃಷಭ: ನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರುವ ಪ್ರಯತ್ನ ಬೇಡ. ವ್ಯವಹಾರದಲ್ಲಿ ಉತ್ತಮ ವರಮಾನವರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಗುರುಹಿರಿಯರಿಂದ ಸಂತೋಷ ವೃದ್ಧಿಯಾಗಲಿದೆ.

ಮಿಥುನ: ವಿದ್ಯಾರ್ಥಿಗಳಿಗೆ ಭವಿಷ್ಯದ ಚಿಂತೆ ಕಾಡಲಿದೆ. ಹೊಸ ಅವಕಾಶಗಳು ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದ್ದು, ದೂರದ ವ್ಯವಹಾರಗಳಿಂದ ಲಾಭ ಕಂಡುಬರಲಿದೆ.

ಕರ್ಕಟಕ: ನೆರೆಹೊರೆಯವರೊಂದಿಗೆ ಸೌಹಾರ್ದಯುತ ವಾತಾವರಣ ಸೃಷ್ಟಿಸಲು ಮುಂದಾಗಲಿದ್ದೀರಿ. ಮಹಿಳೆಯರಿಗೆ ಚಿನ್ನಾಭರಣಗಳನ್ನು ಸಂರಕ್ಷಿಸುವ ಹೊಣೆ ಇರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಸಿಂಹ: ಇತರರ ಅಭಿಪ್ರಾಯಗಳಿಗೆ ಅತಿಯಾಗಿ ಪ್ರಾಮುಖ್ಯತೆ ಕೊಟ್ಟರೂ ಗೊಂದಲಗಳೇ ಹೆಚ್ಚಾದಿತಷ್ಟೇ. ಸಂಗಾತಿಯ ಬಹುದಿನಗಳ ಕನಸು ನನಸು ಮಾಡಲು ಪ್ರಯತ್ನಿಸಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕನ್ಯಾ: ಮನೆಯಲ್ಲಿ ಬಂಧು ಮಿತ್ರರ ಸಮಾಗಮದಿಂದ ಸಂತೋಷದ ವಾತಾವರಣವಿರಲಿದೆ. ಮಕ್ಕಳ ಜೊತೆಗೆ ಅಮೂಲ್ಯ ಸಮಯ ಕಳೆಯಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾಗಿ ಬರಬಹುದು. ಕೋರ್ಟು, ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ವಿಚಾರವಂತರ ಸಹವಾಸ ಮಾಡಲಿದ್ದೀರಿ. ದಿನದಂತ್ಯಕ್ಕೆ ಶುಭ ಸುದ್ದಿ ಕಾದಿದೆ.

ವೃಶ್ಚಿಕ: ನೂತನ ದಂಪತಿಗಳು ತಮ್ಮ ಸಾಂಸಾರಿಕ ಜೀವನಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಧನು: ನಿಮ್ಮ ಇಷ್ಟಕ್ಕೆ ವಿರುದ್ಧವಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳುವ ಅನಿವಾರ್ಯತೆ ಎದುರಾದೀತು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸೂಕ್ತ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ಸಂತೋಷವಾಗಲಿದೆ.

ಮಕರ: ಅನಿವಾರ್ಯ ಕಾರಣಗಳಿಗೆ ಪರವೂರಿಗೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಎದುರಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ಕುಂಭ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಸರಕಾರಿ ಕೆಲಸದಲ್ಲಿರುವವರಿಗೆ ಕಾರ್ಯದೊತ್ತಡ ಕೊಂಚ ಕಡಿಮೆಯಾಗಲಿದೆ. ಮನೆಯವರೊಂದಿಗೆ ಸಂತೋಷದಿಂದ ಕಾಲ ಕಳೆಯಲಿದ್ದೀರಿ.

ಮೀನ: ನಿಮ್ಮ ಮನಸ್ಸಿಗೆ ಸಂತೋಷ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಬಗ್ಗೆ ಐಡಿಯಾಗಳು ಬರಲಿವೆ. ಹಿರಿಯರ ಸಮಯೋಚಿತ ಸಲಹೆ ಉಪಯೋಗಕ್ಕೆ ಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವೈಕುಂಠ ಏಕಾದಶಿ ದಿನ ಉಪವಾಸ ಮಾಡಬೇಕು ಯಾಕೆ?