ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 21 ಜನವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ದೇಹಕ್ಕೆ ತ್ರಾಸದಾಯಕ ಕೆಲಸಗಳು ಕಂಡುಬಂದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಸಾಂಸಾರಿಕವಾಗಿ ತಾಳ್ಮೆ, ಸಂಯಮ ಅಗತ್ಯ. ಆಡಿದ ಮಾತಿಗೆ ಪಶ್ಚಾತ್ತಾಪ ಪಡುವ ಪರಿಸ್ಥಿತಿಯಾದೀತು.

ವೃಷಭ: ನಿಧಾನಿಸಿ ನೋಡಿದಾಗ ನಿಜವನ್ನು ಅರಿಯಲಿದ್ದೀರಿ. ಕೆಲಸ ಕಾರ್ಯಗಳಿಗೆ ಅಡ್ಡಿ ಆತಂಕಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾದೀತು. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ.

ಮಿಥುನ: ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಹೊಸ ಜನರ ಭೇಟಿಯಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ. ಕೋರ್ಟು ಕಚೇರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರುವುದು.

ಕರ್ಕಟಕ: ಸರಿಯಾಗಿ ಯೋಚಿಸಿ ನಿರ್ಧಾರ ಕೈಗೊಳ್ಳುವುದರಿಂದ ಸಂಭಾವ್ಯ ಅಪಾಯಗಳು ತಪ್ಪಿ ಹೋಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ಸಂಗಾತಿಯ ಬಹುದಿನಗಳ ಕನಸು ನನಸು ಮಾಡಲಿದ್ದೀರಿ.

ಸಿಂಹ: ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಆರ್ಥಿಕ, ವ್ಯವಹಾರಗಳಲ್ಲಿ ಚೇತರಿಕೆ ಕಂಡುಬರಲಿದೆ. ಯೋಗ್ಯ ವಯಸ್ಕರು ಸೂಕ್ತ ವೈವಾಹಿಕ ಸಂಬಂಧಕ್ಕೆ ಕೆಲವು ದಿನ ಕಾಯುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಬದುಕಿನಲ್ಲಿ ಎದುರಾಗುವ ಹೊಸ ಅವಕಾಶಗಳು, ಸವಾಲುಗಳನ್ನು ಎದುರಿಸಲು ಕಲಿಯಿರಿ. ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ತುಲಾ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಅಂದುಕೊಂಡ ರೀತಿಯಲ್ಲಿ ನೆರವೇರಲಿದೆ. ವ್ಯಾವಹಾರಿಕವಾಗಿ ಚೇತರಿಕೆ ಕಂಡುಬರಲಿದೆ. ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು. ಚಿಂತೆ ಬೇಡ.

ವೃಶ್ಚಿಕ: ಬೇರೆಯವರು ನಿಮ್ಮ ಜೀವನದಲ್ಲಿ ಅನಗತ್ಯವಾಗಿ ಮೂಗು ತೂರಿಸುತ್ತಿದ್ದಾರೆ ಎನಿಸಬಹುದು. ಅನೇಕ ವಿಚಾರಗಳು ಮನಸ್ಸಿಗೆ ಗೊಂದಲ ತಂದೀತು. ಸಂಗಾತಿಯಿಂದ ಸಮಸ್ಯೆಗೆ ಪರಿಹಾರ ದೊರೆಯಲಿದೆ. ತಾಳ್ಮೆಯಿರಲಿ.

ಧನು: ನಿಮ್ಮ ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ವಿದ್ಯಾರ್ಥಿಗಳಿಗೆ ಬಹು ಕಷ್ಟವೆನಿಸಿದ್ದ ಪಾಠಗಳು ಸುಲಭವಾದೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ಮಕರ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಮಕ್ಕಳ ಭವಿಷ್ಯಕ್ಕಾಗಿ ಕೆಲವು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಆರೋಗ್ಯದಲ್ಲಿ ಸುಧಾರಣೆ.

ಕುಂಭ: ಬಹುದಿನಗಳ ನಂತರ ನಿಮ್ಮ ಮೆಚ್ಚಿನ ವ್ಯಕ್ತಿಗಳ ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಪ್ರೇಮಿಗಳಿಗೆ ಶುಭದಿನವಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮುಂಬಡ್ತಿ ಕನಸಿಗೆ ಅಡ್ಡಿ ಆತಂಕಗಳು ಎದುರಾಗಲಿದೆ. ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಮಯವಿದು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments