ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 23 ಜನವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ವಹಿಸಿ. ಸಂಗಾತಿಯ ಕೆಲವೊಂದು ಮಾತುಗಳು ಮನಸ್ಸಿನಲ್ಲಿ ಹೊಸ ಚಿಂತನೆ ಹುಟ್ಟುಹಾಕಲಿದೆ. ನಿಮ್ಮ ಪ್ರಯಾಣದ ಯೋಜನೆಯಲ್ಲಿ ದಿಡೀರ್ ಬದಲಾವಣೆಗಳಾದೀತು. ತಾಳ್ಮೆಯಿರಲಿ.

ವೃಷಭ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗುವ ಸಾಧ್ಯತೆಯಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಅಡ್ಡಿಯಾಗುವವರ ಹುನ್ನಾರಗಳು ಬಯಲಾಗಲಿದೆ. ಇಷ್ಟ ಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ ಕೂಡಿಬರುವುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕರ್ಕಟಕ: ನಿಮ್ಮ ನೆಚ್ಚಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಕುಟುಂಬ ಸದಸ್ಯರ ಕೆಲಸಗಳಿಗೆ ನೆರವಾಗಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ವ್ಯಾವಹಾರಿಕವಾಗಿ ಅಡೆತಡೆಗಳು ನಿವಾರಣೆಯಾಗಲಿದೆ. ದೇಹಾರೋಗ್ಯದಲ್ಲಿ ಕೆಲವು ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದೀತು.

ಕನ್ಯಾ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದ ಯಶಸ್ಸು ಸಿಗಲಿದೆ. ನಿಮ್ಮ ವಾಕ್ಚತುರತೆಯಿಂದ ಇತರರನ್ನು ಸೆಳೆಯಲಿದ್ದೀರಿ. ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ತುಲಾ: ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಏಕಾಗ್ರತೆಯ ಕೊರತೆ ಉಂಟಾದೀತು. ಹಿರಿಯರ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಕುಟುಂಬ ಸದಸ್ಯರೊಂದಿಗೆ ಮೆಚ್ಚಿನ ಭೋಜನವುಂಡು ಸಂತೋಷದಿಂದ ಕಾಲ ಕಳೆಯುವ ಯೋಗ ನಿಮ್ಮದಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ವ್ಯಾಪಾರಿಗಳು ವ್ಯವಹಾರದಲ್ಲಿ ಪ್ರಗತಿ ಕಾಣಲಿದ್ದಾರೆ.

ಧನು: ಮನಸ್ಸಿನಾಳದಲ್ಲಿ ಕೊರೆಯುತ್ತಿದ್ದ ಯೋಚನೆಗಳಿಗೆ ಪರಿಹಾರ ಕಂಡುಕೊಳ‍್ಳಲು ಪ್ರಯತ್ನಿಸಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಆರ್ಥಿಕ ವಿಚಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ಬಹಳ ದಿನಗಳಿಂದ ನಿರೀಕ್ಷಿಸುತ್ತಿದ್ದ ಸುದ್ದಿ ಇಂದು ಕೇಳಿಬರಲಿದೆ. ವ್ಯಾವಹಾರಿಕವಾಗಿ ಚೇತರಿಕೆ ಕಂಡುಬರುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಬಿಡುವಿನ ದಿನದ ಸಂತೋಷ ಸಿಗಲಿದೆ.

ಕುಂಭ: ಮಹಿಳೆಯರಿಗೆ ಮಂಗಳ ವಸ್ತ್ರ ಖರೀದಿ ಮಾಡುವ ಯೋಗ. ಕೌಟುಂಬಿಕವಾಗಿ ಸಂತೋಷದಾಯಕ ದಿನವಾಗಲಿದೆ.  ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಮನೆಯ ವಿಚಾರಗಳನ್ನು ಅನ್ಯರ ಬಳಿ ಹಂಚಿಕೊಳ್ಳಲು ಹೋಗಬೇಡಿ. ನೆರೆಹೊರೆಯವರ ಕಷ್ಟಕ್ಕೆ ಹೆಗಲು ಕೊಡಲಿದ್ದೀರಿ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವೈಕುಂಠ ಏಕಾದಶಿ ದಿನವಾದ ಇಂದು ಮಹಾವಿಷ್ಣುವಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ವಿವಾಹ, ಸಂತಾನಕ್ಕೆ ಅಡ್ಡಿಯಾಗುತ್ತಿದ್ದರೆ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಮುಂದಿನ ಸುದ್ದಿ
Show comments