ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 24 ಜನವರಿ 2022 (08:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನೀವಿಡುವ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆ ಅಗತ್ಯ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಕೊಂಚ ದೂರವಾಗಲಿದೆ. ಸಾಂಸಾರಿಕವಾಗಿ ಮಾತಿನಿಂದ ಇತರ ಮನ ಗೆಲ್ಲಲಿದ್ದೀರಿ.

ವೃಷಭ: ನಿಮ್ಮ ವ್ಯವಹಾರಕ್ಕೆ ಅನುಕೂಲಕರವಾದ ವಾತಾವರಣವಿರಲಿದೆ. ವೈಯಕ್ತಿಕ ವಿಚಾರಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲಿದ್ದೀರಿ. ನಿಮ್ಮ ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರುವುದು. ತಾಳ್ಮೆ, ಸಂಯಮ ಅಗತ್ಯ.

ಮಿಥುನ: ನೀವು ಬಹುವಾಗಿ ಪ್ರೀತಿಸುವ ವಸ್ತುವೊಂದು ಕೈ ತಪ್ಪಿಹೋದ ಬೇಸರ ಕಾಡಲಿದೆ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು. ಆರ್ಥಿಕವಾಗಿ ಭವಿಷ್ಯದ ನಿಟ್ಟಿನಲ್ಲಿ ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ.

ಕರ್ಕಟಕ: ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಸಹಕಾರ ಸಿಗುವುದು. ವೃತ್ತಿರಂಗದಲ್ಲಿ ನಿಮ್ಮ ಏಳಿಗೆಯನ್ನು ಯಾರಿಂದಲೂ ತಪ್ಪಿಸಲಾಗದು. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು.

ಸಿಂಹ: ಕೆಲಸ ಕಾರ್ಯ ಮಾಡುವಾಗ ಅನಿರೀಕ್ಷಿತವಾಗಿ ಅಪಘಾತಗಳಾದೀತು. ಎಚ್ಚರಿಕೆ ಅಗತ್ಯ. ಕ್ರಿಯಾತ್ಮಕ ಯೋಚನೆಗಳಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊ‍ಳ್ಳಲಿದ್ದೀರಿ. ಆಕಸ್ಮಿಕ ಧನಲಾಭವಾಗುವ ಸಾಧ‍್ಯತೆ.

ಕನ್ಯಾ: ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಪ್ರಸಂಗಗಳು ಎದುರಾದೀತು. ಅನಗತ್ಯವಾಗಿ ಸಂಗಾತಿಯ ನಿಷ್ಠುರಕ್ಕೊಳಗಾಗಬೇಡಿ. ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಕೇಳಿಬರಲಿದೆ. ತಾಳ್ಮೆಯಿರಲಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮಾತಿಗೆ ಮನ್ನಣೆ ಸಿಗುತ್ತಿಲ್ಲ ಎಂಬ ಬೇಸರ ಕಾಡೀತು. ತಾಳ್ಮೆ, ಸಂಯಮ ಅಗತ್ಯ. ನಿರುದ್ಯೋಗಿಗಳಿಗೆ ಯೋಗ್ಯತೆಗನುಸಾರವಾಗಿ ಉದ್ಯೋಗಾವಕಾಶ ಸಿಗಲಿದೆ. ಸರಿಯಾಗಿ ಬಳಸಿಕೊಳ್ಳಿ.

ವೃಶ್ಚಿಕ: ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರುವ ಸಾಧ್ಯತೆ. ದಿನದಂತ್ಯಕ್ಕೆ ನೆಮ್ಮದಿ

ಧನು: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆಕಸ್ಮಿಕವಾಗಿ ಧನಲಾಭವಾಗುವ ಸಾಧ‍್ಯತೆ. ಗೃಹ,ವಾಹನಾದಿ ಖರೀದಿ ವಿಚಾರದಲ್ಲಿ ಆಸಕ್ತಿ ಕಂಡುಬರಲಿದೆ. ಲೆಕ್ಕಪತ್ರಗಳ ಬಗ್ಗೆ ನಿಗಾ ವಹಿಸಿ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಸಹೋದರಾದಿ ಸಂಬಂಧಿಗಳೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ದೀರ್ಘ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ಕುಂಭ: ವ್ಯಾವಹಾರಿಕ ಚತುರತೆಯಿಂದ ಲಾಭ ಕಂಡುಬರುವುದು. ಹಣಕಾಸಿನ ಖರ್ಚು ವೆಚ್ಚಗಳ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಬಂಧು ಮಿತ್ರರನ್ನು ಭೇಟಿಯಾಗುವ ಅವಕಾಶವಿದೆ. ಮಾನಸಿಕವಾಗಿ ಸಂತೋಷದ ದಿನವಾಗಿರಲಿದೆ.

ಮೀನ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗುವ ಸಾಧ್ಯತೆಯಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಯೋಗ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments