Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 5 ಫೆಬ್ರವರಿ 2022 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಿರಿಯರಿಂದ ಬಂದ ಬಳವಳಿ ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮ ಮೇಲಿರಲಿದೆ. ಗಣ್ಯರ ಸಂಪರ್ಕದಿಂದ ನಿಮ್ಮ ಕೆಲಸ ಸುಲಭವಾಗಲಿದೆ. ಇಷ್ಟದೇವರ ಪ್ರಾರ್ಥನೆ ಮಾಡಿ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ.

ವೃಷಭ: ಸ್ವಸಾಮರ್ಥ್ಯದಿಂದ ಧನ ಸಂಪಾದನೆ ಮಾಡಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಕ್ರಿಯಾತ್ಮಕ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ.

ಮಿಥುನ: ನಿಮ್ಮ ಕೆಲಸಗಳಿಗೆ ಬಂಧು ಮಿತ್ರರ ಸಹಕಾರ ಕಂಡುಬರಲಿದೆ. ವ್ಯವಹಾರದಲ್ಲಿ ಕಠಿಣ ನಿರ್ಧಾರ ಕೈಗೊಳ್ಳುವ ಅನಿವಾರ್ಯತೆ ಎದುರಾಗಲಿದೆ. ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ವೃತ್ತಿರಂಗದಲ್ಲಿ ಎಲ್ಲವೂ ಸರಿಯಾಗಿರುವಂತೆ ತೋರಿದರೂ ಒಳಗೊಳಗೇ ಮಸಲತ್ತು ಮಾಡುವವರ ಹುನ್ನಾರಗಳು ನಿಮ್ಮ ಗಮನಕ್ಕೆ ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಿ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನಿಮ್ಮ ವ್ಯವಹಾರ ಚತುರತೆಯನ್ನು ಪ್ರದರ್ಶಿಸುವ ಕಾಲ ಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ. ಸರಿಯಾಗಿ ಬಳಸಿಕೊಳ್ಳಿ.

ಕನ್ಯಾ: ಇನ್ನೊಬ್ಬರಿಗೆ ನೀವು ನೀಡುವ ಸಲುಗೆ ದುರ್ಬಳಕೆಯಾಗುವ ಸಾಧ‍್ಯತೆಯಿದೆ. ತಾಳ್ಮೆ, ಸಂಯಮದಿಂದ ವರ್ತಿಸಬೇಕು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ವಹಿಸಬೇಕು. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ತುಲಾ: ಮಾತಿನಲ್ಲಿ ಕಠೋರತೆ ಇದ್ದರೇ ವ್ಯವಾಹರವೂ ಸುಲಲಿತವಾಗಲಿದೆ. ಸಂಗಾತಿಯ ದೇಹಾರೋಗ್ಯದ ಕಡೆಗೆ ಗಮನಕೊಡುವುದು ಉತ್ತಮ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಸಾಂಸಾರಿಕವಾಗಿ ಅಭಿವೃದ್ಧಿ, ನೆಮ್ಮದಿ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿದ್ದರೆ ಉತ್ತಮ. ಅನಿರೀಕ್ಷಿತವಾಗಿ ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ.

ಧನು: ನಿಮ್ಮದಲ್ಲದ ತಪ್ಪಿಗೆ ಬೆಲೆ ಕೊಡುವ ಸಂದರ್ಭ ಎದುರಾದೀತು. ಸಾಂಸಾರಿಕವಾಗಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸುವುದು ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಮಕ್ಕಳ ಮೇಲೆ ವಿಶೇಷ ಪ್ರೀತಿ, ಮಮಕಾರ ಮೂಡಲಿದೆ. ಹೊಸ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಸಂಶೋಧಕರಿಗೆ ಅನುಕೂಲಕರ ವಾತಾವರಣವಿರಲಿದೆ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ವಿಶೇಷ ಸ್ಥಾನ ಮಾನದ ಯೋಗ. ಸಂಪತ್ತು ವೃದ್ಧಿಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಬಹಳ ದಿನಗಳ ನಂತರ ಪ್ರೀತಿ ಪಾತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ. ಮನೆಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments