ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 18 ಫೆಬ್ರವರಿ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಕರ್ತವ್ಯ ನಿಷ್ಠೆಯಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಆರ್ಥಿಕವಾಗಿ ವಂಚನೆಗೊಳಗಾಗುವ ಭೀತಿಯಿದೆ. ಎಚ್ಚರಿಕೆಯಿಂದಿರಬೇಕು. ವ್ಯಾಪಾರಿಗಳಿಗೆ ಧನ ಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿದೆ.

ವೃಷಭ: ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ದಾಂಪತ್ಯದಲ್ಲಿ ಸುಂದರ ಕ್ಷಣ ಕಳೆಯುವ ಯೋಗ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ಹಲವು ಅಡೆತಡೆಗಳು ಬಂದೀತು. ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ದೂರದ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಪಾಲುದಾರರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಸಾಮಾಜಿಕವಾಗಿ ಜನಮನ್ನಣೆ ಗಳಿಸಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿದರೆ ಉತ್ತಮ.

ಸಿಂಹ: ದಾಂಪತ್ಯದಲ್ಲಿ ಅನವಶ್ಯಕ ಚರ್ಚೆಗೆ ಆಸ್ಪದ ಕೊಡಬೇಡಿ. ಧಾರ್ಮಿಕ ಕಾರ್ಯಗಳಲ್ಲಿ ಶ್ರದ್ಧೆ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಉತ್ತಮ ಯೋಚನೆಗಳಿಂದ ಇತರರ ಮನಸ್ಸಿಗೂ ಸಂತೋಷ ಕೊಡಲಿದ್ದೀರಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಾಯದಿಂದ ಸಮಸ್ಯೆಗಳನ್ನು ನಿಭಾಯಿಸಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ತುಲಾ: ಅಂದುಕೊಂಡ ರೀತಿಯಲ್ಲೇ ಕಾರ್ಯಸಾಧಿಸಿದ ಸಂತೋಷ, ತೃಪ್ತಿ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಗೆ ಕಲಿಯುವ ಆಸಕ್ತಿ ಹೆಚ್ಚಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ವೃಶ್ಚಿಕ: ಮಹತ್ವದ ನಿರ್ಧಾರ ಕೈಗೊಳ್ಳುವ ಮೊದಲು ಸಂಗಾತಿಯೊಂದಿಗೆ ಚರ್ಚಿಸಿದರೆ ಉತ್ತಮ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಸಂತಾನ ಹೀನ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ವಿಶೇಷವಾದ ವ್ಯಕ್ತಿಗಳಿಂದ ಇಂದು ನಿಮ್ಮ ಕೆಲಸಕ್ಕೆ ಸಹಾಯವಾಗಲಿದೆ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಯೋಗ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಉತ್ತಮವಾಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಆಸ್ತಿ ಖರೀದಿ ವಿಕ್ರಯ ವ್ಯವಹಾರದಲ್ಲಿ ಲಾಭವಾಗಲಿದೆ.

ಕುಂಭ: ಉದ್ಯೋಗ ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡುಬರಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಮನಸ್ಸಿನಲ್ಲಿದ್ದ ಭಾವನೆಯನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ವೃತ್ತಿರಂಗದಲ್ಲಿ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ವಸ್ತುಗಳನ್ನು ಮನೆಗೆ ತರಬೇಡಿ

ದೀಪ ಹಚ್ಚುವಾಗ ಗೊತ್ತಿಲ್ಲದೆ ಈ ತಪ್ಪು ಮಾಡಬೇಡಿ, ಶ್ರೇಯಸ್ಸಲ್ಲ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಮುಂದಿನ ಸುದ್ದಿ
Show comments