ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 19 ಫೆಬ್ರವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ವ್ಯವಹಾರದಲ್ಲಿ ನಿಮ್ಮ ಯಶಸ್ಸನ್ನು ಯಾರಿಂದಲೂ ತಡೆಯಲಾಗದು. ಹೊಸ ವಿಚಾರಗಳು ನಿಮ್ಮ ಜೀವನಕ್ಕೆ ತಿರುವು ನೀಡಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ‍್ಳಲಿದ್ದೀರಿ.

ವೃಷಭ: ಆರ್ಥಿಕವಾಗಿ ಸಬಲರಾಗಲಿದ್ದು, ನಿಮ್ಮ ಹಳೆಯ ಬಾಕಿಗಳನ್ನು ತೀರಿಸಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಪ್ರೇಮಿಗಳು ಮನಸ್ಸಲ್ಲಿರುವುದನ್ನು ಹಂಚಿಕೊಳ್ಳಲು ಸೂಕ್ತ ದಿನ.

ಮಿಥುನ: ವಿಶೇಷವಾದ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರಲಿದೆ. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ.

ಕರ್ಕಟಕ: ದೂರ ಪ್ರಯಾಣದ ವೇಳೆ ಸಣ್ಣ ಪುಟ್ಟ ತೊಂದರೆಗಳು ಎದುರಾದೀತು. ಅಪರಿಚಿತರೂ ನಿಮ್ಮ ಸಹಾಯಕ್ಕೆ ಬರಲಿದ್ದಾರೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ತಾಳ್ಮೆಯಿರಲಿ.

ಸಿಂಹ: ವ್ಯಾಪಾರ,  ವ್ಯವಹಾರದಲ್ಲಿ ಲಾಭ ಕಂಡುಬಂದರೂ ಹಿತಶತ್ರುಗಳ ಕಾಟ ಕಿರಿ ಕಿರಿಯೆನಿಸೀತು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿಯಾಗುವ ಯೋಗ.

ಕನ್ಯಾ: ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರುವುದು. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬಂದು ನೆಮ್ಮದಿಯಾಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಆಲಿಸಬಹುದು.

ತುಲಾ: ನಿಮಗೆ ಸಂಬಂಧ ಪಡದ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವ ಪ್ರಸಂಗ ಎದುರಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ವೃತ್ತಿರಂಗದಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದ್ದೀರಿ. ದುಃಖ-ದುಮ್ಮಾನಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಮನೆಗೆ ನೆಂಟರಿಷ್ಟರ ಭೇಟಿ ಸಾಧ್ಯತೆ.

ಧನು: ವ್ಯವಹಾರದ ಅನುಕೂಲಕ್ಕಾಗಿ ಕೆಲವೊಂದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಪ್ರೇಮಿಗಳಿಗೆ ಶುಭ ದಿನವಾಗಿರಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ಮಕರ: ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ಸಂಘರ್ಷಗಳಾದೀತು. ಮಾತಿನ ಮೇಲೆ ಸಂಯಮವಿರಲಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ತುಸು ಚೇತರಿಕೆ ಕಂಡುಬರುವುದು. ಆಕಸ್ಮಿಕ ಧನಾಗಮನವಾಗಲಿದೆ.

ಕುಂಭ: ಹಳೆಯ ಬಾಕಿ ತೀರಿಸಲು ಮುಂದಾಗಲಿದ್ದು, ಸಾಲಗಾರರ ಕಾಟದಿಂದ ಮುಕ್ತರಾಗಲಿದ್ದೀರಿ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಸಾಮಾಜಿಕವಾಗಿ ಗೌರವ ಹೆಚ್ಚಾಗಲಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ಮೀನ: ಸರಿಯಾಗಿ ಪರಾಮರ್ಶಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ದೈಹಿಕ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments