Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 24 ಫೆಬ್ರವರಿ 2022 (08:32 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗದಲ್ಲಿ ನಿಮ್ಮ ಕೆಲಸಗಳು ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ನಿಮ್ಮ ದೂರದೃಷ್ಟಿಯಿಂದ ಆರ್ಥಿಕವಾಗಿ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೆರೆದುಕೊಳ್ಳಲಿವೆ.

ವೃಷಭ: ನಿಮ್ಮ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಸಿಗಲಿದೆ. ಆದರೆ ಭವಿಷ್ಯದ ಬಗ್ಗೆ ಗಂಭೀರವಾದ ಚಿಂತನೆ ನಡೆಸುವುದು ಮುಖ್ಯ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮಿಥುನ: ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಆರ್ಥಿಕವಾಗಿ ಧನಸಂಪತ್ತು ವೃದ್ಧಿಯಾದೀತು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಶೀಘ್ರದಲ್ಲೇ ಕಂಕಣ  ಬಲ ಕೂಡಿಬರಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷಕ್ಕೆ ಎಡೆ ಮಾಡಿಕೊಡಬೇಡಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಮನಸ್ಸು ಮಾಡಲಿದ್ದೀರಿ. ಹೊಸ ಮಿತ್ರರನ್ನು ಸಂಪಾದಿಸುವ ಯೋಗ. ಅಪರಿಚಿತರು ನಿಮ್ಮ ಕೆಲಸಗಳಿಗೆ ಸಹಾಯ ಮಾಡಲಿದ್ದಾರೆ. ಸ್ವಯಂ ಉದ್ಯೋಗಿಗಳಿಗೆ ಲಾಭವಾಗಲಿದೆ.

ಕನ್ಯಾ: ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು. ಮನಸ್ಸು ಬಯಸಿದ ಉದ್ಯೋಗ ನಿಮ್ಮದಾಗಲಿದೆ. ಬಹಳ ದಿನಗಳ ನಂತರ ಇಷ್ಟಮಿತ್ರರನ್ನು ಭೇಟಿಯಾಗುವ ಕ್ಷಣ ನಿಮ್ಮದಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಹೊಸ ವಿಚಾರಗಳನ್ನು ಕಲಿಯುವ ಅವಕಾಶ ನಿಮ್ಮದಾಗಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಮಕಕ್ಳಿಂದ ನಿಮ್ಮ ಸಂತೋಷ ವೃದ್ಧಿಯಾಗಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ವೃತ್ತಿಯಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಧನು: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಿಗುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಮಕರ: ಆಸ್ತಿ ವಿಚಾರಗಳಲ್ಲಿ ಹಿರಿಯರೊಂದಿಗೆ ಪರಾಮರ್ಶಿಸಿ ಮುನ್ನಡೆಯುವುದು ಉತ್ತಮ. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಮಹಿಳೆಯರಿಗೆ ಚಿನ್ನಾಭರಣಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮದಾಗಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಗೆ ಅಡ್ಡಿ ಆತಂಕಗಳು ಎದುರಾದೀತು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ತಾಳ್ಮೆಯಿರಲಿ.

ಮೀನ: ಸಾರ್ವಜನಿಕವಾಗಿ ಜನಮನ್ನಣೆ ಸಿಗಲಿದೆ. ನಿಮ್ಮ ಆಪ್ತರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಅನಗತ್ಯವಾಗಿ ಸಂಘರ್ಷದಲ್ಲಿ ಮೂಗು ತೂರಿಸಲು ಹೋಗಬೇಡಿ. ತಾಳ್ಮೆಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ