Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 2 ಮಾರ್ಚ್ 2022 (08:31 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕಾರ್ಯರಂಗದಲ್ಲಿ ಸ್ವಾಭಿಮಾನ ಬದಿಗೊತ್ತಿ ಮುಂದುವರಿಯಬೇಕಾದರೆ ಯಶಸ್ಸು ಸಿಗಬೇಕಾದರೆ ಅದಕ್ಕೆ ತಕ್ಕ ಪರಿಶ್ರಮವೂ ಪಡಬೇಕು. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ಮಾಡಬೇಕು.

ವೃಷಭ: ಕೌಟುಂಬಿಕವಾಗಿ ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಸಾವಧಾನದಿಂದ ಯೋಚನೆ ಮಾಡಿದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಧನಾಗಮನದಲ್ಲಿ ವಿಳಂಬವಾಗುವುದರಿಂದ ಅಂದುಕೊಂಡ ಕೆಲಸಗಳು ಪೂರ್ತಿಯಾಗದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದೆ. ಬಂಧು ಬಳಗದವರ ಭೇಟಿಯಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಸಂಗಾತಿಯೊಂದಿಗೆ ಕೌಟುಂಬಿಕ ವಿಚಾರಕ್ಕೆ ವಾಗ್ವಾದ ನಡೆಸಲಿದ್ದೀರಿ. ತಾಳ್ಮೆ, ಸಂಯಮವಿರಲಿ. ಮಕ್ಕಳಿಂದ ಸಂತೋಷ ಸಿಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಮನೆ ರಿಪೇರಿ, ವಾಹನ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾದೀತು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.

ಕನ್ಯಾ: ಬಯಸಿದ್ದೊಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಯೋಜನೆ ಹಾಕಿಕೊಳ್ಳಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಖರ್ಚು ವೆಚ್ಚಗಳ ಬಗ್ಗೆ ಗಮನವಿರಲಿ.

ತುಲಾ: ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮುನ್ನಡೆಯ ಯೋಗವಿದೆ. ವ್ಯಾಪಾರಿ ವರ್ಗದವರಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ಮನಸ್ಸಿನ ಭಾವನೆಗಳಿಗೆ ಬೆಲೆಕೊಟ್ಟು ನಿರ್ಧಾರಗಳನ್ನು ಕೈಗೊಳ್ಳುವುದು ಉತ್ತಮ. ಪ್ರೀತಿ ಪಾತ್ರರನ್ನು ಅನಿರೀಕ್ಷಿತವಾಗಿ ಭೇಟಿ ಮಾಡಲಿದ್ದೀರಿ. ಉದ್ವೇಗದಲ್ಲಿ ನಿರ್ಧಾರಗಳನ್ನು ತೆಗೆದುಕೊಂಡರೆ ಅಪಾಯ ತಪ್ಪಿದ್ದಲ್ಲ.

ಧನು: ನಿಮ್ಮ ನಿರೀಕ್ಷೆಯ ರೀತಿಯಲ್ಲಿ ಕೆಲಸಗಳು ಸಾಗದು. ಹಾಗಿದ್ದರೂ ಆಶಾವಾದಿಯಾಗಿರಿ. ಹಿಂದೆ ಮಾಡಿದ ಒಳ್ಳೆಯ ಕೆಲಸಗಳ ಫಲ ನಿಮಗೆ ಸಿಗಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಮಕರ: ಬೇರೆಯವರ ಅಭಿಪ್ರಾಯಗಳಿಗೆ ಬೆಲೆಕೊಡುವುದನ್ನು ಕಲಿಯಿರಿ. ಆತ್ಮೀಯರೊಂದಿಗೆ ಅತ್ಯುತ್ತಮ ಕ್ಷಣ ಕಳೆಯಲಿದ್ದೀರಿ. ಕುಟುಂಬ ಸದಸ್ಯರ ಕಷ್ಟಗಳಿಗೆ ಕಿವಿಗೊಡಲಿದ್ದೀರಿ. ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಲಿದೆ.

ಕುಂಭ: ವಾಹನ ಖರೀದಿ ಮಾಡುವ ನಿಮ್ಮ ಕನಸು ಕೈಗೂಡಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ವೃತ್ತಿ ಲಾಭ ತಂದುಕೊಡಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಮನಸ್ಸಿನ ಆಸೆಗಳನ್ನು ಅದುಮಿಟ್ಟುಕೊಳ‍್ಳುವುದು  ಬೇಡ. ಆಪ್ತರೊಂದಿಗೆ ಹಂಚಿಕೊಳ್ಳುವುದು ಉತ್ತಮ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದಲ್ಲಿ ಆರೋಗ್ಯ ಸಮಸ್ಯೆಯಾದೀತು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಉಪವಾಸವಿದ್ದು ಶಿವ-ಪಾರ್ವತಿಯ ಪೂಜೆ ಮಾಡಿದರೆ ಮುತ್ತೈದೆಯರಿಗೆ ಶ್ರೇಷ್ಠ