Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 3 ಮಾರ್ಚ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹೊಸ ವಸ್ತು ಖರೀದಿಸಬೇಕೆಂಬ ನಿಮ್ಮ ಹಂಬಲಕ್ಕೆ ಅನಿವಾರ್ಯವಾಗಿ ಕಡಿವಾಣ ಹಾಕಬೇಕಾಗುತ್ತದೆ. ದೇಹಾರೋಗ್ಯದ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ. ಆದರೆ ಮಕ್ಕಳಿಂದ ಶುಭ ಸುದ್ದಿ ನಿರೀಕ್ಷಿಸಬಹುದು.

ವೃಷಭ: ಹಣಕಾಸಿನ ಖರ್ಚು ವೆಚ್ಚದಲ್ಲಿ ಹಿಡಿತ ಅಗತ್ಯ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗವಿದೆ. ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳುವುದರಿಂದ ಸಂಭಾವ್ಯ ಅಪಾಯ ದೂರವಾಗಲಿದೆ.

ಮಿಥುನ: ವೃತ್ತಿರಂಗದಲ್ಲಿ ನಿಮಗೆ ಅನುಕೂಲಕರ ವಾತಾವರಣ ಕಂಡುಬರಲಿದೆ. ಮಹತ್ವದ ನಿರ್ಧಾರ ಕೈಗೊಳ್ಳುವ ಮುನ್ನ ಗುರುಹಿರಿಯರ ಅಭಿಪ್ರಾಯಗಳನ್ನು ಕೇಳಿಕೊಳ್ಳಿ. ವ್ಯಾಪಾರಿಗಳಿಗೆ ಅಭಿವೃದ್ಧಿ ಕಂಡುಬರಲಿದೆ. ಚಿಂತೆ ಬೇಡ.

ಕರ್ಕಟಕ: ಹೊಸದಾಗಿ ಉದ್ಯೋಗ ಆರಂಭಿಸಿದವರಿಗೆ ಸವಾಲುಗಳು ಸಾಮಾನ್ಯ. ಆತ್ಮವಿಶ್ವಾಸದಿಂದ ಎದರಿಸಬೇಕು. ಕಟ್ಟಡ ಕಾಮಗಾರಿ ಕೆಲಸಗಳಿಗೆ ಕೈ ಹಾಕಿದರೆ ವಿಘ್ನ ಭೀತಿ. ಕುಲದೇವರ ಪ್ರಾರ್ಥನೆ ನಡೆಸಿ ಮುನ್ನಡೆಯುವುದು ಉತ್ತಮ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನದ ಯೋಗ. ವೃತ್ತಿರಂಗದಲ್ಲಿ ನಿಮ್ಮ ಕೆಲಸಗಳಿಗೆ ಪ್ರಶಂಸೆ ಸಿಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಅಧ್ಯಯನದಲ್ಲಿ ಆಸಕ್ತಿ, ಏಕಾಗ್ರತೆ ಹೆಚ್ಚಲಿದೆ. ಹೊಸ ಜನರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯುವುದು. ದೇವಾಲಯ ಸಂದರ್ಶನ ಮಾಡಲಿದ್ದೀರಿ.

ತುಲಾ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಇಷ್ಟಾರ್ಥ ಸಿದ್ಧಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.

ವೃಶ್ಚಿಕ: ಹೆಚ್ಚಿನ ಧನಾದಾಯ ಸಂಪಾದಿಸಲು ಹೊಸ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ. ಮರಳಿ ಬಾರದು. ಎಚ್ಚರಿಕೆಯಿರಲಿ.

ಧನು: ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಏಕಾಗ್ರತೆಯ ಕೊರತೆ ಉಂಟಾದೀತು. ಯಂತ್ರೋಪಕರಣಗಳ ಕೆಲಸದಲ್ಲಿರುವವರಿಗೆ ಮುನ್ನಡೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಬಂಧುಮಿತ್ರರ ಭೇಟಿಯಾಗುವ ಯೋಗ.

ಮಕರ: ಮಾತಿನಲ್ಲಿ ಮನೆ ಕಟ್ಟುವುದಕ್ಕಿಂತ ಕಾರ್ಯ ಪ್ರವೃತ್ತರಾಗುವುದು ಉತ್ತಮ. ಬೇರೆಯವರು ಏನಂದುಕೊಳ‍್ಳುವರೋ ಎಂಬ ಕೀಳರಿಮೆ ಬೇಡ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಸುಖ, ಸಂತೋಷವಿರಲಿದೆ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳಿದ್ದರೂ ನಿಮ್ಮ ಏಳಿಗೆಯನ್ನು ಯಾರಿಂದಲೂ ತಡೆಯಲಾಗದು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ಮೀನ: ನೀವು ಇಂದು ಕೈಗೊಳ್ಳುವ ನಿರ್ಧಾರಗಳು ನಿಮ್ಮ ಭವಿಷ್ಯಕ್ಕೆ ಪೂರಕವಾಗಲಿದೆ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸರಿಯಾಗಿ ಯೋಚಿಸಿ ಹೆಜ್ಜೆಯಿಡುವುದು ಮುಖ್ಯ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಿರಲಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ