ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಹೊಸ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಾಹನ, ಭೂಮಿ ಖರೀದಿಯಲ್ಲಿ ಆಸಕ್ತಿ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.
ವೃಷಭ: ನಿಮ್ಮ ಕನಸು ನನಸಾಗಿಸಲು ಅಡೆತಡೆಗಳು ಬರಲಿದ್ದು, ಮನಸ್ಸಿಗೆ ಒಂದು ರೀತಿಯ ನಿರಾಶೆಯಾದೀತು. ಆಪ್ತರೊಂದಿಗೆ ಮನಸ್ಸಿಗೆ ದುಃಖ ಹಂಚಿಕೊಳ್ಳಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.
ಮಿಥುನ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಆಪ್ತರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವ್ಯಾಪಾರಿಗಳಿಗೆ ಸಾಲಗಾರರ ಕಾಟದಿಂದ ಮುಕ್ತಿ.
ಕರ್ಕಟಕ: ನಿಮ್ಮ ವಿವೇಕ, ವಾಕ್ಚತುರ್ಯದಿಂದ ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ಧೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಶ್ರದ್ಧೆ, ಭಕ್ತಿ ಹೆಚ್ಚಾಗಲಿದೆ. ದೇಹಾರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡುಬರಲಿದೆ.
ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಅನುಕೂಲಕರವಾದ ವಾತಾವರಣವಿರಲಿದೆ. ಅದನ್ನು ಸರಿಯಾಗಿ ಬಳಸಿಕೊಳ್ಳಿ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.
ಕನ್ಯಾ: ನೀವು ಕೈಗೊಳ್ಳುವ ಕೆಲಸದಲ್ಲಿ ಏಕಾಗ್ರತೆ, ಶ್ರದ್ಧೆ ಕಂಡುಬರಲಿದೆ. ಸ್ಥಿರ ಆಸ್ತಿಯಿಂದ ಲಾಭ ಕಂಡುಬರುವುದು. ದೀರ್ಘ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.
ತುಲಾ: ಪರ್ಮನೆಂಟ್ ಕೆಲಸಕ್ಕಾಗಿ ಶ್ರಮಿಸುತ್ತಿದ್ದರೆ ಶುಭ ಸೂಚನೆ ಸಿಗಲಿದೆ. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಮಾನಸಿಕವಾಗಿ ಒತ್ತಡಗಳಿದ್ದರೂ ಸಂಗಾತಿಯಿಂದ ಸಹಕಾರ, ಸಾಂತ್ವನ ಸಿಗಲಿದೆ.
ವೃಶ್ಚಿಕ: ಬೇರೆಯವರ ಜೀವನದ ಬಗ್ಗೆ ಅನಗತ್ಯ ಆಸಕ್ತಿ ಬೇಡ. ಮಾತಿನ ಮೇಲೆ ಸಂಯಮವಿರಲಿ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯಕ್ಕೆ ಅವಕಾಶ ಕೊಡಬೇಡಿ.
ಧನು: ಮನಸ್ಸಿನಲ್ಲಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ ಹೆಚ್ಚಲಿದೆ. ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.
ಮಕರ: ಉತ್ತಮ ಧನಾದಾಯವಿರುವುದರಿಂದ ಹೊಸ ಯೋಜನೆಗಳ ಬಗ್ಗೆ ಚಿಂತಿಸಲು ಇದು ಸಕಾಲ. ಗೃಹೋಪರಣಗಳ ಖರೀದಿ ಮಾಡಲಿದ್ದೀರಿ. ಸಂಗಾತಿಯ ಬಹುದಿನಗಳ ಕನಸು ನನಸು ಮಾಡಲಿದ್ದೀರಿ. ಸಂತೋಷವಿರಲಿದೆ.
ಕುಂಭ: ಅತಿಯಾಗಿ ಯೋಚನೆ ಮಾಡಿ ಮಾನಸಿಕ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಮಹಿಳೆಯರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಸಹಕಾರ ಸಿಗಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ.
ಮೀನ: ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡಸಲಿದ್ದಾರೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇವರ ಪ್ರಾರ್ಥನೆ ಮಾಡಿ.