Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 8 ಮಾರ್ಚ್ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ವ್ಯವಹಾರದಲ್ಲಿ ಅಡಚಣೆಗಳಿದ್ದರೂ ನೆಮ್ಮದಿ ಕಂಡುಬರಲಿದೆ. ಬಂಧು ಮಿತ್ರರ ಸಹಕಾರದಿಂದ ಹೊಸ ಕೆಲಸಕ್ಕೆ ಕೈ ಹಾಕಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭ್ಯವಾಗಲಿದೆ. ತಾಳ್ಮೆಯಿರಲಿ.

ವೃಷಭ: ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಮಕ್ಕಳ ನಿಮಿತ್ತ ಖರ್ಚು ವೆಚ್ಚಗಳಾಗಲಿವೆ. ಆಸ್ತಿ ವಿಚಾರದಲ್ಲಿ ಧನವ್ಯಯವಾದೀತು. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ.

ಮಿಥುನ: ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗಲಿದ್ದು ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮನೆಯಲ್ಲಿ ಸಂತೋಷದ ವಾತಾವರಣ ಕಂಡುಬರುವುದು. ನೆಮ್ಮದಿಯಿರಲಿದೆ.

ಕರ್ಕಟಕ: ಪಾಲುದಾರಿಕೆ ವ್ಯವಹಾರದಲ್ಲಿ ಉನ್ನತಿ ಕಂಡುಬರಲಿದೆ. ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯವಹಾರದಿಂದ ಧನ ಸಂಪತ್ತು ವೃದ್ಧಿಯಾಗಲಿದೆ. ಚಿಂತೆ ಬೇಡ.

ಸಿಂಹ: ನೀವು ಹಿಂದೆ ಮಾಡಿದ್ದ ಒಳ್ಳೆಯ ಕೆಲಸಗಳಿಗೆ ತಕ್ಕ ಫಲ ಸಿಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತ ಅವಕಾಶಗಳು ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ದೇಹಾಯಾಸದಿಂದ ಮನಸ್ಸು ಮತ್ತು ದೇಹ ದಣಿದೀತು. ಪಾಲುದಾರಿಕೆ ವ್ಯವಹಾರದಲ್ಲಿ ಅಭಿವೃದ್ಧಿ ಕಮಡುಬರಲಿದೆ. ಗುರುಹಿರಿಯರಿಂದ ನಿಮ್ಮ ಕೆಲಸಗಳಿಗೆ ಸಹಕಾರ ಕಂಡುಬರಲಿದೆ. ಮಕ್ಕಳಿಂದ ಸಂತೋಷ ಸಿಗಲಿದೆ.

ತುಲಾ: ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಮಾನ ಸಿಗಲಿದೆ. ಆಸ್ತಿ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಮಹಿಳೆಯರಿಗೆ ಗೃಹೋಪಯೋಗಿ ವಸ್ತುಗಳ ಖರೀದಿ ಯೋಗ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ವೃಶ್ಚಿಕ: ವೃತ್ತಿರಂಗದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಕಂಡುಬಂದೀತು. ಇಷ್ಟಮಿತ್ರರ ಭೇಟಿ, ಭೋಜನ ಯೋಗ. ನೆರೆಹೊರೆಯವರೊಂದಿಗೆ ಸಹಕಾರವಿರಲಿ.

ಧನು: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಧನಾರ್ಜನೆಗೆ ನಾನಾ ಮಾರ್ಗಗಳು ಕಂಡುಬರಲಿದೆ. ನಾಲಿಗೆ ಚಪಲದಿಂದ ಆರೋಗ್ಯ ಕೆಡಿಸಿಕೊಳ್ಳಬೇಡಿ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ಮಕರ: ನಿಮ್ಮ ಹೊಸತನದ ಯೋಚನೆಗಳು ಇತರರನ್ನು ಆಕರ್ಷಿಸಲಿದ್ದೀರಿ. ಕಳೆದೇ ಹೋಯಿತೆಂದುಕೊಂಡಿದ್ದ ವಸ್ತು ನಿಮ್ಮ ಕೈಸೇರಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ ಕಂಡುಬರಲಿದೆ.

ಕುಂಭ: ಅನಗತ್ಯ ಮಾತುಗಳಿಂದ ವಿವಾದ ಮೈಮೇಲೆಳದುಕೊಳ್ಳಬೇಡಿ. ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಸಿಗಲಿದೆ. ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ಸದುಪಯೋಗ ಪಡಿಸಿಕೊಳ್ಳಲಿದ್ದೀರಿ.

ಮೀನ: ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ