Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 11 ಮಾರ್ಚ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆದರೆ ಸರಕಾರಿ ಕೆಲಸಗಳಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಬೇಕು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ವೃಷಭ: ನಿಮ್ಮ ಹಳೆಯ ತಪ್ಪುಗಳನ್ನು ನೆನೆಯುತ್ತಾ ಪಶ್ಚಾತ್ತಾಪ ಪಡುವುದರಲ್ಲಿ ಅರ್ಥವಿಲ್ಲ. ನಿಮ್ಮ ಕೆಲವೊಂದು ನಿರ್ಧಾರಗಳು ಆಪ್ತರಿಗೆ ಅಸಮಾಧಾನ ತಂದೀತು. ಮಾತಿನ ಮೇಲೆ ತಾಳ್ಮೆ, ಸಂಯಮವಿರಲಿ.

ಮಿಥುನ: ಬೇರೆಯವರಿಗೆ ನೋವಾಗದಂತೆ ನೀವು ಕೈಗೊಳ್ಳುವ ಕೆಲಸ, ನಿರ್ಧಾರಗಳು ಕೆಲವೊಮ್ಮೆ ನಿಮಗೇ ನೋವು ತಂದೀತು. ಆದರೆ ಇನ್ನೊಬ್ಬರಿಗೆ ಸಹಾಯ ಮಾಡಿದ ಸಂತೋಷ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ನಿರೀಕ್ಷೆಗೂ ಮೀರಿ ಸ್ಥಾನ ಮಾನ ವೃದ್ಧಿಯಾಗಲಿದೆ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ವ್ಯಾಪಾರಸ್ಥರಿಗೆ ಅನುಕೂಲಕರ ವಾತಾವರಣ ಕಂಡುಬರಲಿದೆ. ತಾಳ್ಮೆ ಅಗತ್ಯ.

ಸಿಂಹ: ನಿಮ್ಮ ಭವಿಷ್ಯಕ್ಕೆ ಪೂರಕವಾಗಬಲ್ಲ ಕೆಲವೊಂದು ನಿರ್ಧಾರ ಮಾಡಲಿದ್ದೀರಿ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ದಿನದಂತ್ಯಕ್ಕೆ ಸಮಾಧಾನವಾಗಲಿದೆ.

ಕನ್ಯಾ: ನಿರೀಕ್ಷಿತ ಸ್ಥಾನ ಮಾನ ಸಿಗಲಿದೆ. ಹಾಗಿದ್ದರೂ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರುವುದು ಮುಖ್ಯ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರುವುದು. ಅಧ್ಯಯನ ಶೀಲರಿಗೆ ತಕ್ಕ ಮನ್ನಣೆ ಸಿಗಲಿದೆ. ಚಿಂತೆ ಬೇಡ.

ತುಲಾ: ಅನಗತ್ಯ ಮಾತುಗಳಿಗೆ ಕಿವಿಗೊಡದೇ ನಿಮ್ಮ ಕೆಲಸದ ಮೇಲೆ ನಿಗಾ ವಹಿಸಿ. ನೆರೆಹೊರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಮನಸ್ಸಿನ ಆತಂಕವನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ನಿಮ್ಮ ಹಠವಾದಿ ಮನೋಭಾವದಿಂದ ಇತರರಿಗೆ ಅನಗತ್ಯ ತೊಂದರೆಯಾದೀತು. ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ತಾಳ್ಮೆಯಿರಲಿ.

ಧನು: ನೀವು ಇಂದು ಕೈಗೊಳ್ಳುವ ನಿರ್ಧಾರಗಳು ನಿಮ್ಮ ಮುಂದಿನ ಜೀವನಕ್ಕೆ ಪೂರಕವಾಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಪ್ರೇಮಿಗಳಿಗೆ ಶುಭದಿನವಾಗಿರಲಿದೆ. ಆಸ್ತಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ.

ಮಕರ: ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಾಧಿಕಾರದ ಯೋಗ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ದಿನದಂತ್ಯಕ್ಕೆ ಸಂತೋಷ ಸಿಗುವುದು.

ಮೀನ: ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಕುಟುಂಬಸ್ಥರೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ಉದ್ಯೋಗ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ವಾಹನ, ಆಸ್ತಿ ಖರೀದಿಸುವ ನಿಮ್ಮ ಯೋಜನೆ ಸದ್ಯದಲ್ಲೇ ನನಸಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ