ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 13 ಮಾರ್ಚ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೈಹಿಕವಾಗಿ ಶ್ರಮವಿದ್ದರೂ ಮಾನಸಿಕವಾಗಿ ಸಂತೋಷ ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣ ಅಗತ್ಯ.

ವೃಷಭ: ಮನೆಗೆ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ಮಾಡಿಕೊಳ್ಳಲಿದ್ದೀರಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಯಾವುದೇ ವಿಚಾರಗಳನ್ನೂ ಸಂಗಾತಿಯೊಂದಿಗೆ ಹಂಚಿಕೊಳ್ಳುವುದು ಉತ್ತಮ.

ಮಿಥುನ: ಬಹಳ ದಿನಗಳ ನಂತರ ಬಂಧು ಮಿತ್ರರ ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಧನ ಲಾಭದ ಯೋಗ. ದೇವತಾ ಪ್ರಾರ್ಥನೆ ಮರೆಯದಿರಿ.

ಕರ್ಕಟಕ: ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ಮನಸ್ಸಿನಲ್ಲಿ ಅಂದುಕೊಂಡಿದ್ದು ತಾನಾಗಿಯೇ ನೆರವೇರಿದ ಖುಷಿ ನಿಮ್ಮದಾಗುವುದು. ವಾಹನ ಪ್ರಯಾಣ ಮಾಡುವಾಗ ಎಚ್ಚರಿಕೆ ಅಗತ್ಯ. ತಾಳ್ಮೆಯಿರಲಿ.

ಸಿಂಹ: ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿಯಾದೀತು.

ಕನ್ಯಾ: ಸುದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಆದರೆ ಮಕ್ಕಳು ನಿಮ್ಮ ಮನಸ್ಸಿನ ಸಂತೋಷ ಹೆಚ್ಚಿಸಲಿದ್ದಾರೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ತುಲಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಕಾರ್ಯಾರಂಭದಲ್ಲಿ ವಿಘ್ನಭಯವಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.

ವೃಶ್ಚಿಕ: ಬಹುದಿನಗಳ ನಿಮ್ಮ ಕನಸು ನನಸಾಗಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಕಟ್ಟಡ ಕಾಮಗಾರಿ ಯೋಜನೆಗೆ ಚಾಲನೆ ನೀಡಲು ಚಿಂತನೆ ನಡೆಸಲಿದ್ದೀರಿ. ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ.

ಧನು: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಬೇರೆಯವರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ಹಿರಿಯರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಕೊಡು ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಕೃಷಿಕರಿಗೆ ಬೆಳೆ ನಷ್ಟದ ಭಿತಿ ಎದುರಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳಾಗುವ ಸಂಭವ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಮೀನ: ಮನಸ್ಸಿನ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಇಂದು ಶುಭ ದಿನ. ಸಾಮಾಜಿಕವಾಗಿ ಜನಮನ್ನಣೆ ಪಡೆಯಲಿದ್ದೀರಿ. ಸಾಹಿತ್ಯ, ಕಲಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ವೈಕುಂಠ ಏಕಾದಶಿ ದಿನವಾದ ಇಂದು ಮಹಾವಿಷ್ಣುವಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ವಿವಾಹ, ಸಂತಾನಕ್ಕೆ ಅಡ್ಡಿಯಾಗುತ್ತಿದ್ದರೆ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments