Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 14 ಮಾರ್ಚ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮನೆಗೆ ನೆಂಟರಿಷ್ಟರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಬಹಳ ದಿನಗಳ ನಂತರ ನಿಮ್ಮ ಮುಖದಲ್ಲಿ ನಗು ಮೂಡುವ ವಿಚಾರಗಳು ನಡೆಯಲಿವೆ. ಮಕ್ಕಳಿಂದ ಸಂತೋಷ ಪ್ರಾಪ್ತಿಯಾಗುವುದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ವೃಷಭ: ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಸಾಫಲ್ಯತೆ ಕಂಡುಬರಲಿದೆ. ಕ್ಲುಲ್ಲುಕ ವಿಚಾರಕ್ಕೆ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳದಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಧನಾರ್ಜನೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಸ್ವಯಂ ಉದ್ಯೋಗಿಗಳಿಗೆ ಮುನ್ನಡೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಕರ್ಕಟಕ: ನಿಮಗೆ ಖುಷಿಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದು, ಉಲ್ಲಾಸದಾಯಕವಾಗಿ ದಿನ ಕಳೆಯಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಆಗಿಬರಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಮಾನದಲ್ಲಿ ಬದಲಾವಣೆಯಾಗಲಿದೆ. ಅತಿಯಾದ ಯೋಚನೆಗಳಿಂದ ಮನಸ್ಸು ಹಾಳಾದೀತು. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕನ್ಯಾ: ನಿಮ್ಮ ಬಹಳ ದಿನಗಳ ಕನಸು ನನಸಾಗಲಿದೆ. ಸಹೋದರಾದಿ ಸಂಬಂಧಿಗಳೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸುದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ.

ತುಲಾ: ವೃತ್ತಿರಂಗದಲ್ಲಿ ನಿಮಗೆ ಆಗಿಬರದ ವ್ಯಕ್ತಿಗಳಿಂದ ತೊಂದರೆಗಳು ಎದುರಾದೀತು. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಬೇಕಾಗುತ್ತದೆ. ಇಷ್ಟ ಭೋಜನ ಮಾಡುವ ಯೋಗವಿದೆ. ದಿನದಂತ್ಯಕ್ಕೆ ನೆಮ್ಮದಿಯಾದೀತು.

ವೃಶ್ಚಿಕ: ಕಟ್ಟಡ-ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಬಂಧು ಬಳಗದವರಿಂದ ಪ್ರೋತ್ಸಾಹ ಕಂಡುಬರಲಿದೆ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾದೀತು. ಎಚ್ಚರಿಕೆಯಿರಲಿ.

ಧನು: ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಕೌಟುಂಬಿಕವಾಗಿ ಸಂತೋಷವಿರಲಿದೆ.

ಮಕರ: ಬೇರೆಯವರ ಸಮಸ್ಯೆಗಳನ್ನು ಅನಗತ್ಯವಾಗಿ ಮೈಮೇಲೆಳೆದುಕೊಳ್ಳಬೇಡಿ. ಇಷ್ಟಮಿತ್ರರನ್ನು ಬಹಳ ದಿನಗಳ ನಂತರ ಭೇಟಿಯಾಗುವ ಯೋಗ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಅಂದುಕೊಂಡಿದ್ದು ಒಂದು ಆಗುವುದು ಇನ್ನೊಂದು ಎಂಬ ಸ್ಥಿತಿ ನಿಮ್ಮದಾಗಲಿದೆ. ಇತರರಿಗೆ ಹಣಕಾಸಿನ ಸಹಾಯ ಮಾಡುವ ಮುನ್ನ ಎಚ್ಚರಿಕೆಯಿರಲಿ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ತಾಳ್ಮೆ ಅಗತ್ಯ.

ಮೀನ: ಆಪ್ತರು ಹೇಳುವ ಮಾತುಗಳು ಮನಸ್ಸಿಗೆ ನಾಟಲಿದೆ. ಪರಿಶ್ರಮದ ಕೆಲಸದಿಂದ ದೇಹಾಯಾಸವಾಗುವ ಸಂಭವ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಒದಗಿ ಬರಲಿವೆ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ