Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 23 ಮಾರ್ಚ್ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೆಲವೊಂದು ಸಮಸ್ಯೆಗಳನ್ನು ಪರಿಹಾರವಾಗಬೇಕಾದರೆ ನೀವೂ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಬಂಧು ಮಿತ್ರರ ಸಹಕಾರ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮಿಥುನ: ವಿಶೇಷವಾದ ವ್ಯಕ್ತಿಗಳ ಭೇಟಿ ಮಾಡಲಿದ್ದೀರಿ. ವೃತ್ತಿರಂಗದಲ್ಲಿ ಕ್ರಿಯಾತ್ಮಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕರ್ಕಟಕ: ದೇವತಾ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರಿಗೆ ಕಷ್ಟದ ಸಮಯದಲ್ಲಿ ಸಹಾಯ ಮಾಡಲಿದ್ದೀರಿ. ವ್ಯಾಪಾರಿಗಳಿಗೆ ಉನ್ನತಿಯ ಯೋಗ.

ಸಿಂಹ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕನ್ಯಾ: ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಲ್ಲಿ ಆಸಕ್ತಿ ಕಂಡುಬರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದರೆ ಉದರ ಸಂಬಂಧೀ ಸಮಸ್ಯೆಯಾದೀತು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಚಿಂತೆ ಬೇಡ.

ವೃಶ್ಚಿಕ: ಕೆಲಸದ ವಿಚಾರದಲ್ಲಿ ಸಣ್ಣ ಅಸಡ್ಡೆ ಅನಾಹುತಕ್ಕೆ ಕಾರಣವಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಧನು: ಬೇರೆಯವರ ಜೀವನದ ಬಗ್ಗೆ ಅನಗತ್ಯ ಚಿಂತೆ ಬೇಡ. ಹೊಸದಾಗಿ ಬರುವ ಯೋಚನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಏಕಾಗ್ರತೆ ಅಗತ್ಯ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಕರ: ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಜವಾಬ್ಧಾರಿಯುತವಾಗಿ ಕೆಲಸ ಮಾಡುವುದರಿಂದ ಅದಕ್ಕೆ ತಕ್ಕ ಫಲ ಪಡೆಯುವಿರಿ. ಮಕ್ಕಳ ಅಧ್ಯಯನ ನಿಮಿತ್ತ ಪರವೂರಿಗೆ ಸಂಚರಿಸಬೇಕಾಗುತ್ತದೆ.

ಕುಂಭ: ಮಹಿಳೆಯರಿಗೆ ಉನ್ನತಾಧಿಕಾರಿಗಳ ಪ್ರಶಶಂಸೆ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಮೀನ: ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ. ವಾಹನ ಖರೀದಿಗೆ ಯೋಗ ಸದ್ಯದಲ್ಲೇ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಯೋಜನೆಗಳು ಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿ ಚಂದ್ರಘಂಟಾ ಮಂತ್ರ ಓದುವುದರಿಂದ ನಿಮಗೆ ಈ ಫಲಗಳು ಸಿಗುತ್ತವೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿ ದೇವನ ಈ ಮಂತ್ರಗಳನ್ನು ಪಠಿಸಿದರೆ ಶನಿ ದೋಷ ನಿವಾರಣೆಯಾಗುವುದು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರದಂದು ಪಠಿಸಬೇಕಾದ ಲಕ್ಷ್ಮೀ ದೇವಿಯ ಮಂತ್ರ

ಮುಂದಿನ ಸುದ್ದಿ
Show comments