ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 25 ಮಾರ್ಚ್ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೈಹಿಕವಾಗಿ ಆರೋಗ್ಯ ಉತ್ತಮವಾಗಲಿದ್ದು, ಹೊಸ ಯೋಚನೆಗಳು ಮನಸ್ಸಿಗೆ ಬರಲಿವೆ. ಆರ್ಥಿಕವಾಗಿ ಕೆಲವೊಂದು ಯೋಜನೆ ಹಾಕಿಕೊಳ್ಳಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ತಾಳ್ಮೆಯಿರಲಿ.

ವೃಷಭ: ನೀವು ಮುಂದೆ ಮಾಡಬೇಕಾದ ಕೆಲಸಗಳಿಗೆ ಇಂದೇ ತಯಾರಿ ಮಾಡಿಕೊಳ್ಳಬೇಕಾಗುತ್ತದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಬಹುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಚಿಂತೆ ಬೇಡ.

ಮಿಥುನ: ನಿಮ್ಮಿಂದ ಪೋಲಾದ ವಸ್ತುವನ್ನು ಮರಳಿ ಪಡೆಯಲು ಯತ್ನಿಸಲಿದ್ದೀರಿ. ನಿಮ್ಮ ಪ್ರಾಮಾಣಿಕ ಪ್ರಯತ್ನಗಳಿಗೆ ಮನೆಯವರ ಸಹಕಾರವಿರಲಿದೆ. ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಕೇಳಿಬರಲಿದೆ.

ಕರ್ಕಟಕ: ಉದ್ಯೋಗ ರಂಗದಲ್ಲಿ ನಿಮಗೆ ಅಡೆತಡೆಯಾಗಿದ್ದ ಸಮಸ್ಯೆಗಳು ಪರಿಹಾರವಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯುವುದು. ಪ್ರೇಮಿಗಳಿಗೆ ಮನಸ್ಸಿನಲ್ಲಿದ್ದನ್ನು ಹೇಳಲು ಇದು ಸಕಾಲ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಯಾವುದೇ ಕೆಲಸ ಮಾಡುವ ಮೊದಲು ಹಿರಿಯರೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ಭವಿಷ್ಯದ ನಿಟ್ಟಿನಲ್ಲಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕನ್ಯಾ: ಕಷ್ಟ-ಸುಖವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳುವುದು ಉತ್ತಮ. ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಲಿದ್ದೀರಿ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾದೀತು. ಧನಾತ್ಮಕ ಯೋಚನೆಯಿರಲಿ.

ತುಲಾ: ವ್ಯಾಪಾರ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವೈಯಕ್ತಿಕವಾಗಿ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರ ಸಂದರ್ಶನ ಯೋಗ.

ವೃಶ್ಚಿಕ: ಹಿರಿಯರ ಮಾರ್ಗದರ್ಶನದಂತೆ ಕೈಗೊಳ್ಳುವ ಕೆಲಸಗಳು ಯಶಸ್ವಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ. ತಾಳ್ಮೆ ಅಗತ್ಯ.

ಧನು: ಅತಿಯಾದ ಕೆಲಸದೊತ್ತಡದಿಂದ ದೇಹಾಯಾಸವಾಗುವ ಸಾಧ‍್ಯತೆ. ಸಂಗಾತಿಯ ಸಾಂತ್ವನದ ಮಾತು ಸಮಾಧಾನ ತಂದೀತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಯಾವುದೇ ಲಾಭ ಉದ್ದೇಶವಿಲ್ಲದೇ ಮಾಡುವ ಕೆಲಸಗಳಿಂದ ಪುಣ್ಯ ಪ್ರಾಪ್ತಿಯಾಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಂದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕೆಲಸದೊತ್ತಡ ಕಡಿಮೆಯಾದೀತು. ಅನಗತ್ಯ ವಿಚಾರಗಳಿಗೆ ಮೂಗು ತೂರಿಸಲು ಹೋಗಬೇಡಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಗಮನವಿರಲಿ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಮೀನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ವೈವಾಹಿಕ ಸಂಬಂಧ ಕೂಡಿಬರಲಿದೆ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ನಿಮ್ಮ ಸತತ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments