Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 28 ಮಾರ್ಚ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರುವುದು. ಮನಸ್ಸಿಗೆ ಉಲ್ಲಾಸಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವ್ಯಾವಹಾರಿಕವಾಗಿ ಅಡೆತಡೆಗಳು ನಿವಾರಣೆಯಾಗಲಿವೆ. ಚಿಂತ ಬೇಡ.

ವೃಷಭ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನೆರೆಹೊರೆಯವರೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ವಾಹನ ಖರೀದಿಗೆ ಯೋಗ ಕೂಡಿಬರುವುದು.

ಮಿಥುನ: ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದ್ದು, ಮಾನಸಿಕವಾಗಿ ನೆಮ್ಮದಿಯಿರಲಿದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ಆರೋಗ್ಯದಲ್ಲಿ ಸುಧಾರಣೆ.

ಕರ್ಕಟಕ: ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಕಂಡುಬರಲಿದೆ. ಧನಾರ್ಜನೆಗಾಗಿ ನಾನಾ ಮಾರ್ಗಗಳನ್ನು ಹುಡುಕಿಕೊಳ್ಳಲಿದ್ದೀರಿ. ಭೂಮಿ, ವಾಹನಾದಿ ಸೌಕರ್ಯಗಳಿಗಾಗಿ ಧನವ್ಯಯ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ ಕಂಡುಬರುವುದು.

ಸಿಂಹ: ಮಾನಸಿಕವಾಗಿ ಕಾಡುವ ಚಿಂತೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ ಕಂಡುಬರುವುದು. ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಹಿಳೆಯರಿಗೆ ಉನ್ನತ ಸ್ಥಾನ ಮಾನದ ಯೋಗ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಗೃಹೋಪಕರಣಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಕುಟುಂಬದವರೊಂದಿಗೆ ಚರ್ಚಿಸಿದರೆ ಉತ್ತಮ. ನಾನಾ ರೀತಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ವೃಶ್ಚಿಕ: ನಿಮ್ಮ ಸಾಮರ್ಥ್ಯಕ್ಕೂ ಮೀರಿದ ಕೆಲಸ ಮಾಡಬೇಕಾಗುತ್ತದೆ. ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ಮಹಿಳೆಯರಿಗೆ ಅಡುಗೆ ಮನೆ ಕೆಲಸಗಳಲ್ಲಿ ಸಣ್ಣ ಪುಟ್ಟ ತೊಂದರೆಗಳು ಎದುರಾದೀತು.

ಧನು: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಬಹುದಿನಗಳ ನಂತರ ಪ್ರೀತಿ ಪಾತ್ರರನ್ನು ಭೇಟಿಯಾಗುವ ಸಂತೋಷ ನಿಮ್ಮದಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನಿಮ್ಮ ಹೊಸ ಪ್ರಯತ್ನಗಳಿಗೆ ಕುಟುಂಬಸ್ಥರ ಬೆಂಬಲ ಸಿಗಲಿದೆ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಲಾಭ ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಲ್ಲಿ ಆಸಕ್ತಿ ಕಂಡುಬರುವುದು. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸರಕಾರಿ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಕೌಟುಂಬಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ. ನಿರುದ್ಯೋಗಿಗಳಿಗೆ ಹೊಸ ಭರವಸೆ ಸಿಗಲಿದೆ.

ಮೀನ: ನೀವು ಅಂದುಕೊಂಡ ಕೆಲಸ ಪೂರ್ತಿ ಮಾಡಲು ನೂರೆಂಟು ವಿಘ್ನಗಳು ಕಂಡುಬರಲಿದೆ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರುವುದು. ಅನಗತ್ಯ ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ